ಕಲ್ಪ ಮೀಡಿಯಾ ಹೌಸ್ | ಸೊರಬ |
ಬೈಕ್ ಅಪಘಾತದಲ್ಲಿ ಗಾಯಗೊಂಡವರನ್ನು ತಮ್ಮ ಸರ್ಕಾರಿ ವಾಹನದಲ್ಲಿ ಆಸ್ಪತ್ರೆಗೆ ಕಳುಹಿಸಿಕೊಟ್ಟು ಶಿಕ್ಷಣ ಹಾಗೂ ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಮಾನವೀಯತೆ ಮೆರೆದ ಘಟನೆ ತಾಲೂಕಿನ ಕುಪ್ಪಗಡ್ಡೆ ಗ್ರಾಮದಲ್ಲಿ ಸೋಮವಾರ ನಡೆಯಿತು.
ಕುಬಟೂರಿನ ನಿವಾಸದಿಂದ ಹೊಸನಗರದಲ್ಲಿ ಅಹವಾಲು ಸ್ವೀಕಾರ ಕಾರ್ಯಕ್ರಮಕ್ಕೆ ಸಚಿವರು ತೆರಳುತ್ತಿದ್ದರು. ಈ ವೇಳೆ ತಾಲೂಕಿನ ಕುಪ್ಪಗುಡ್ಡೆ ಗ್ರಾಮದ ಬಳಿ ಬೈಕ್‍ನಲ್ಲಿ ಹೊರಟಿದ್ದ ಪತಿ,ಪತ್ನಿ ಹಾಗೂ ಮಗು ಅಪಘಾತದಿಂದ ಗಾಯಗೊಂಡಿದ್ದನ್ನು ಗಮನಿಸಿದ ಅವರು ತಮ್ಮ ವಾಹನ ನಿಲ್ಲಿಸಿ ಗಾಯಾಳುಗಳಿಗೆ ನೀರು ಕುಡಿಸಿ, ತಮ್ಮ ವಾಹನದಲ್ಲಿಯೇ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದ್ದಾರೆ. ಅಲ್ಲದೆ, ಸ್ಥಳೀಯರಿಂದ ಮಾಹಿತಿ ಪಡೆದು ಅಪಘಾತ ಎಸಗಿದ ಕಾರನ್ನು ಪತ್ತೆ ಹಚ್ಚುವಂತೆ ಪೊಲೀಸರಿಗೆ ಸೂಚನೆ ನೀಡಿದರು. ಜೊತೆಗೆ ತಮ್ಮ ಆಪ್ತ ಸಹಾಯಕರನ್ನು ಆಸ್ಪತ್ರೆಗೆ ಕಳುಹಿಸಿ, ಕಾಲ ಕಾಲಕ್ಕೆ ಗಾಯಾಳುಗಳ ಆರೋಗ್ಯದ ಮಾಹಿತಿ ನೀಡುವಂತೆ ತಿಳಿಸಿದರು.
ವರದಿ: ಮಧುರಾಮ್, ಸೊರಬ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post