ಕಲ್ಪ ಮೀಡಿಯಾ ಹೌಸ್ | ಸೊರಬ |
ದೇಶದ ಐಕ್ಯತೆ ಮತ್ತು ಸಮಗ್ರತೆಗೆ ಪ್ರತಿಯೊಬ್ಬರು ಜಾತಿ-ಭೇದ ತೊರೆದು, ಒಗ್ಗಟ್ಟಿನಲ್ಲಿ ಬಲಿಷ್ಟ ರಾಷ್ಟç ನಿರ್ಮಾಣಕ್ಕೆ ಮುಂದಾಗಬೇಕಿದ್ದು, ಸ್ವಾತಂತ್ರ ಹೋರಾಟಗಾರರ ಹಾಗೂ ನಾಡಿನ ಶರಣರು ತೋರಿದ ಮಾರ್ಗದರ್ಶನವನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಿ ಎಂದು ತಹಶೀಲ್ದಾರ್ ಎಚ್. ಶೋಭ ಲಕ್ಷ್ಮಿ ಹೇಳಿದರು.
ಪಟ್ಟಣದ ಡಾ. ರಾಜ್ ಕಲಾಕ್ಷೇತ್ರದ ಮುಂಭಾಗ ತಾಲೂಕು ಆಡಳಿತ, ತಾಲೂಕು ಪಂಚಾಯ್ತಿ, ಪುರಸಭೆ, ವಿವಿಧ ಇಲಾಖೆಗಳು ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ 75ನೇ ಸ್ವಾತಂತ್ರ ದಿನಾಚರಣೆಯ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಅವರು ಸಂದೇಶ ನೀಡಿದರು.
ಶಾಸಕ ಎಸ್. ಕುಮಾರ್ ಬಂಗಾರಪ್ಪ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿಯವರು ಹರ್‌ಘರ್ ತಿರಂಗ ಅಭಿಯಾನಕ್ಕೆ ಕರೆ ನೀಡಿದ ಹಿನ್ನೆಲೆಯಲ್ಲಿ ದೇಶದಾದ್ಯಂತ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಪ್ರತಿಯೊಬ್ಬ ಭಾರತೀಯರು 75ನೆಯ ಸ್ವಾತಂತ್ರೋತ್ಸವದಲ್ಲಿ ಉತ್ಸಾಹದಿಂದ ಪಾಲ್ಗೊಳ್ಳುತ್ತಿದ್ದಾರೆ ಎಂದರು.
Also read: ಜಿಲ್ಲಾ ಉಸ್ತುವಾರಿ ಸಚಿವ ಶ್ರೀರಾಮುಲು ಸಮ್ಮುಖದಲ್ಲಿ 8 ಕೋಟಿ ರೂ. ಮೌಲ್ಯದ ಹಾಸ್ಟೆಲ್ ಹಸ್ತಾಂತರ
ದೇಶದ ಸ್ವಾತಂತ್ರಕ್ಕೆ ಅನೇಕ ಮಹನೀಯರು ತ್ಯಾಗ ಬಲಿದಾನವನ್ನು ನೀಡಿದ್ದಾರೆ. ಅವರನ್ನು ಸರಿಸುವ ಕೆಲಸವಾಗುತ್ತಿದೆ. ರೈತರ ಸ್ವಾವಲಂಬಿ ಬದುಕಿಗೆ ಹಾಗೂ ನೀರಾವರಿ ಸೌಲಭ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ತಾಲೂಕಿನಲ್ಲಿ ಅನುಷ್ಠಾನಗೊಳಿಸಲಾಗಿದ್ದು, ಶಾಶ್ವತ ನೀರಾವರಿ ಮತ್ತು ವಿದ್ಯುತ್’ಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಕ್ಷೇತ್ರದ ಸಮಗ್ರ ಅಭಿವೃದ್ಧಿ ಆದ್ಯತೆ ನೀಡಿ, ತಾಳಗುಪ್ಪದಿಂದ ಸೊರಬ ಮಾರ್ಗವಾಗಿ ಹುಬ್ಬಳ್ಳಿಗೆ ರೈಲ್ವೇ ಮಾರ್ಗ, ನೂತನ ಶಾಲಾ-ಕಾಲೇಜುಗಳ ಸ್ಥಾಪನೆ, ಸ್ಥಳೀಯವಾಗಿ ಕೈಗಾರಿಕೆಗಳ ಸ್ಥಾಪನೆಗೆ ಒತ್ತು ನೀಡಲಾಗುವುದು ಎಂದರು.
ವಿದ್ಯಾರ್ಥಿಗಳಿಂದ ಆಕರ್ಷಕ ಪಥ ಸಂಚಲನ, ದೇಶ ಭಕ್ತಿಯ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದವರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಪುರಸಭೆ ಅಧ್ಯಕ್ಷ ಈರೇಶ್ ಮೇಸ್ತ್ರಿ, ಉಪಾಧ್ಯಕ್ಷ ಮಧುರಾಯ್ ಜಿ. ಶೇಟ್, ಸದಸ್ಯರಾದ ಎಂ.ಡಿ. ಉಮೇಶ್, ಯು. ನಟರಾಜ್, ಡಿ.ಎಸ್. ಪ್ರಸನ್ನಕುಮಾರ್ ದೊಡ್ಡನೆ, ಪಲ್ಲು ಮೇಸ್ತ್ರಿ, ಶ್ರೀರಂಜನಿ ಪ್ರವೀಣ್ ಕುಮಾರ್, ಜಯಲಕ್ಷ್ಮಿ, ಅಫೀನಾ, ಸುಲ್ತಾನಾನು, ಪ್ರೇಮಾ, ಅನ್ಸರ್ ಅಪ್ಪದ, ಈಪಂ ಇಒ ಕೆ.ಜಿ. ಕುಮಾರ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಸ್. ಮಂಜುನಾಥ್, ಕ್ಷೇತ್ರ ಶಿಕ್ಷಣಾಧಿಕಾರಿ ಮನೋಹರ್, ಸಿಪಿಐಎಲ್, ರಾಜಶೇಖರ್, ಪಿಎಸ್‌ಐ ದೇವರಾಯ, ಪುರಸಭೆ ಮುಖ್ಯಾಧಿಕಾರಿ ಗಿರೀಶ್, ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post