ಕಲ್ಪ ಮೀಡಿಯಾ ಹೌಸ್ | ಸೊರಬ |
ಮಲೆನಾಡ ಆರಾಧ್ಯ ದೇವತೆ ಚಂದ್ರಗುತ್ತಿ ಶ್ರೀ ರೇಣುಕಾಂಬ ದೇವಿ ಜಾತ್ರಾ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ, ದೇವಿಗೆ ವಿಶೇಷ ಪೂಜೆ ಸಲ್ಲಿಸಿ ದರ್ಶನಾಶಿರ್ವಾದ ಪಡೆದೆನು ಎಂದು ಶಿಕ್ಷಣ ಸಚಿವ ಮಧುಬಂಗಾರಪ್ಪ ಹೇಳಿದರು.
ಬಳಿಕ ಭಕ್ತಾದಿಗಳನ್ನುದ್ದೇಶಿಸಿ ಮಾತನಾಡಿ, ನನ್ನ ಮತಕ್ಷೇತ್ರ ಸೊರಬ ತಾಲೂಕಿನ ಪುರಾಣ ಪ್ರಸಿದ್ದ ಐತಿಹಾಸಿಕ ಚಂದ್ರಗುತ್ತಿ ಗ್ರಾಮವನ್ನು ನಿನ್ನೆ ನಡೆದ ಬಜೆಟ್ ನಲ್ಲಿ ಧಾರ್ಮಿಕ ಹಾಗೂ ಪ್ರವಾಸೋದ್ಯಮ ತಾಣವಾಗಿ ಅಭಿವೃದ್ಧಿಪಡಿಸಲು “ಚಂದ್ರಗುತ್ತಿ ಅಭಿವೃದ್ಧಿ ಪ್ರಾಧಿಕಾರ” ರಚನೆ ಮಾಡುವ ಮೂಲಕ ಕ್ಷೇತ್ರದ ಅಭಿವೃದ್ಧಿಗೆ ನಮ್ಮ ಸರ್ಕಾರ ಇನ್ನಷ್ಟು ಹೆಚ್ಚಿನ ಒತ್ತುನೀಡಿದೆ ಎಂದು ತಿಳಿಸಿದರು.
Also read: ಚಲಿಸುತ್ತಿದ್ದ ಬಸ್ ಸ್ಟೇರಿಂಗ್ ವೈಫಲ್ಯ | ತಪ್ಪಿದ ಭಾರೀ ಅನಾಹುತ
ಮುಂದಿನ ದಿನಗಳಲ್ಲಿ ದೇವಸ್ಥಾನಕ್ಕೆ ಆಗಮಿಸುವ ಸರ್ವ ಭಕ್ತಾದಿಗಳಿಗೆ ಸಕಲ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವ ಚಿಂತನೆ ಈಗಾಗಲೇ ನಡೆಸಲಾಗುತ್ತಿದ್ದು, ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post