No Result
View All Result
Rani KoHEnur Calls Transgender Bill “Absurd”, Questions Lawmakers in Explosive Podcast Interview
English Articles

Rani KoHEnur Calls Transgender Bill “Absurd”, Questions Lawmakers in Explosive Podcast Interview

by ಕಲ್ಪ ನ್ಯೂಸ್
April 9, 2026
0

Kalpa Media House  |  Mumbai | Artist, drag performer, and activist Rani KoHEnur (Sushant Divgikar) has ignited widespread conversation following...

Read moreDetails
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
  • Advertise With Us
  • Grievances
  • About Us
  • Contact Us
Friday, April 10, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸೊರಬ

ಹಳೇ ಸೊರಬ ದೇವರಕಾಡಿನಲ್ಲಿ ವ್ಯಾಪಕ ಮರಕಡಿತ: ಕಾನೂನು ಕ್ರಮಕ್ಕೆ ಅಶೀಸರ ಆದೇಶ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 11, 2021
in ಸೊರಬ
0
ಹಳೇ ಸೊರಬ ದೇವರಕಾಡಿನಲ್ಲಿ ವ್ಯಾಪಕ ಮರಕಡಿತ: ಕಾನೂನು ಕ್ರಮಕ್ಕೆ ಅಶೀಸರ ಆದೇಶ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಸೊರಬ: ಪಟ್ಟಣದ ಹೊರವಲಯದಲ್ಲಿರುವ ಹಳೇಸೊರಬ ಕಾನು ಅರಣ್ಯ ಪ್ರದೇಶದಲ್ಲಿ, ಅಮೂಲ್ಯವಾದ ಹಲವಾರು ಬೃಹತ್ ಮರಗಳನ್ನು ಇತ್ತೀಚೆಗೆ ಅಕ್ರಮವಾಗಿ ದುಷ್ಕರ್ಮಿಗಳು ಕಡಿದಿರುವ ಘಟನೆಯನ್ನು, ತೀವ್ರವಾಗಿ ಖಂಡಿಸಿರುವ ಕರ್ನಾಟಕ ಜೀವವೈವಿಧ್ಯ ಮಂಡಳಿಯ ಅಧ್ಯಕ್ಷರಾದ ಅನಂತ ಹೆಗಡೆ ಅಶೀಸರ ಅವರು, ಈ ಕುರಿತು ಎಲ್ಲ ಆರೋಪಿಗಳನ್ನು ಶೀಘ್ರ ಪತ್ತೆಹಚ್ಚಿ, ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಅರಣ್ಯ ಇಲಾಖೆಗೆ ಆದೇಶಿಸಿದ್ದಾರೆ.

ಈಗಾಗಲೇ ಸ್ಥಳೀಯ ಅರಣ್ಯಾಧಿಕಾರಿಗಳು ಮತ್ತು ಸಿಬ್ಬಂಧಿಗಳು, ಜಿಲ್ಲಾಧಿಕಾರಿಗಳು ಹಾಗೂ ಅರಣ್ಯ ಇಲಾಖೆಯ ಉನ್ನತ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಪ್ರಕರಣವನ್ನು ದಾಖಲಿಸಿ, ಕಡಿದ ಮರಗಳನ್ನು ವಶಪಡಿಸಿಕೊಳ್ಳುವ ಕಾರ್ಯವನ್ನು ಮಾಡುತ್ತಿರುವದಕ್ಕೆ ಅವರು ಶ್ಲಾಘಿಸಿದ್ದು, ಈ ಬಗೆಯ ಭಾರಿ ಪ್ರಮಾಣದ ಮರಗಳ್ಳತನ ತಡೆಯಲು ಅರಣ್ಯ ಇಲಾಖೆಗೆ ಬೆಂಬಲ ನೀಡಬೇಕೆಂದು ಅವರು ಸಾರ್ವಜನಿಕರನ್ನು ವಿನಂತಿಸಿದ್ದಾರೆ.

ಹಳೇಸೊರಬ ಗ್ರಾಮದ ಸರ್ವೆ ನಂ.245ರಲ್ಲಿ ಸುಮಾರು 540ಎಕರೆಗೂ ಮಿಕ್ಕಿ ವಿಸ್ತಾರದ ಈ ಕಾನುಅರಣ್ಯವಿದೆ. ಈ ನಿತ್ಯಹರಿದ್ವರ್ಣ ಕಾಡಿನಲ್ಲಿ 250-300 ವರ್ಷಗಳಿಗೂ ಹೆಚ್ಚಿನ ಆಯುಷ್ಯದ ಭಾರಿ ಗಾತ್ರದ ಬಹಳಷ್ಟು ಹಳೆಯ ಮರಗಳಿವೆ. ದೇವದಾರು, ಹಲಸು, ಬರಣಿ, ನೇರಳೆ, ಹೊನ್ನೆ, ಬೀಟೆ ಇತ್ಯಾದಿ ಹಲವು ಬಗೆಯ ಅಮೂಲ್ಯವಾದ ಹಾಗೂ ವಿನಾಶದಂಚಿನ ಪ್ರಬೇಧಗಳ ಬಲಿತಮರಗಳಿವೆ. ಅಂಥವನ್ನೇ ಈಗ ಕಡಿದಿರುವದು ಖೇದಕರ ಎಂದು ಅವರು ತಿಳಿಸಿದ್ದಾರೆ.

ಅಪಾರ ಜೀವವೈವಿಧ್ಯವಿರುವ ಮಲೆನಾಡಿನ ಈ ಪ್ರಾತಿನಿಧಿಕ ಕಾನುಅರಣ್ಯವನ್ನು ಈವರೆಗೂ ಸಂರಕ್ಷಿಸಿಕೊಂಡು ಬಂದಿರುವ ಈ ಭಾಗದ ಗ್ರಾಮಸ್ಥರ ಕಾಳಜಿ ಶ್ಲಾಘನಾರ್ಹ. ಇವನ್ನೆಲ್ಲ ಮನಗಂಡೇ ರಾಜ್ಯ ಸರ್ಕಾರದ ಪಶ್ಚಿಮಘಟ್ಟ ಕಾರ್ಯಪಡೆಯು ಇದನ್ನು “ಜೀವವೈವಿಧ್ಯ ತಾಣ”ವನ್ನಾಗಿ ಘೋಷಿಸಲು ಕರ್ನಾಟಕ ಜೀವವೈವಿಧ್ಯ ಮಂಡಳಿಗೆ 2011ರಲ್ಲೇ ಶಿಫಾರಸ್ಸು ಮಾಡಿತ್ತು. ಈ ಜಾಗೃತಿಯ ಫಲವಾಗಿ ಅರಣ್ಯ ಇಲಾಖೆಯು, ಗ್ರಾಮಸ್ಥರು, ರೈತರು, ಜನಪ್ರತಿನಿಧಿಗಳು, ಸ್ವಯಂಸೇವಾಸಂಸ್ಥೆಗಳು- ಹೀಗೆ ಎಲ್ಲ ಸ್ಥಳೀಯರ ಸಹಕಾರದೊಂದಿಗೆ ಇತ್ತೀಚಿನ ವರ್ಷಗಳಲ್ಲಿ ಈ ದೇವರಕಾಡನ್ನು ಸಂರಕ್ಷಿಸುತ್ತ ಬಂದಿದೆ. ಇಲಾಖೆಯು ಸುತ್ತಲೂ ಕಂದಕ ರಚಿಸಿ, ಸಂಪೂರ್ಣ ರಕ್ಷಣೆಯನ್ನೂ ಒದಗಿಸಿದೆ. ಆದರೂ, ಕೆಲವೇ ಕೆಲವು ದುಷ್ಕರ್ಮಿಗಳು ಸರ್ಕಾರ ಹಾಗೂ ಸಮೂದಾಯದ ಈ ಎಲ್ಲ ಸಂರಕ್ಷಣೆಯ ಪ್ರಯತ್ನಗಳನ್ನು ಧಿಕ್ಕರಿಸಿ ಇಲ್ಲಿ ಮರಗಳನ್ನು ಕಡಿದಿರುವದು ಖಂಡನಾರ್ಹ. ಇದು “ಅರಣ್ಯ ಸಂರಕ್ಷಣೆ ಕಾನೂನು”, “ಜೀವವೈವಿಧ್ಯ ಸಂರಕ್ಷಣೆ ಕಾನೂನು” ಹಾಗೂ “ವನ್ಯಜೀವಿ ರಕ್ಷಣೆ ಕಾನೂನು”ಗಳ ಹಲವು ಅಂಶಗಳ ಭಾರಿ ಉಲ್ಲಂಘನೆಯಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

ಅಪಾರ ಜೀವಸಂಪತ್ತಿನ ಭಂಡಾರವಾಗಿರುವ ಹಾಗೂ ಐತಿಹಾಸಿಕ ಮಹತ್ವವಿರುವ ಈ ಹಳೇಸೊರಬ ಕಾನನ್ನು, ಹಳೇಸೊರಬ ಗ್ರಾಮ ಪಂಚಾಯಿತಿಯ ಜೀವವೈವಿಧ್ಯ ನಿರ್ವಹಣಾ ಸಮಿತಿಯು, ಜೀವವೈವಿಧ್ಯ ತಾಣ ಎಂದು ಗುರುತಿಸಿ, ಕಳೆದ ದಿ. 24 ಜುಲೈ 2020ರಂದು ಅದನ್ನು ಅಧಿಕೃತವಾಗಿ ಘೋಷಿಸಿದೆ. ಇದಕ್ಕೆ ಹೆಚ್ಚಿನ ಮನ್ನಣೆ ನೀಡಲು ಕರ್ನಾಟಕ ಜೀವವೈವಿಧ್ಯ ಮಂಡಳಿಗೆ ಪ್ರಸ್ತಾವನೆ ಕೂಡ ಸಲ್ಲಿಸಿದ್ದು, ಆ ಕುರಿತಂತೆ ಚಿಂತನೆ ಕೂಡ ಸಾಗಿದೆ. ಇನ್ನು ಮುಂದಾದರೂ ಈ ಬಗೆಯ ದುಷ್ಕೄತ್ಯ ನಡೆಯದಂತೆ ನಿಗಾವಹಿಸಬೇಕೆಂದು, ಅವರು ಜಿಲ್ಲಾಡಳಿತಕ್ಕೂ ಸೂಚಿಸಿದ್ದಾರೆ.

ಕೊರೋನಾ ಲಾಕ್‌ಡೌನ್ ಅವಧಿಯನ್ನು ದುಷ್ಕರ್ಮಿಗಳು ಈ ರೀತಿಯಲ್ಲಿ ದುರುಪಯೋಗಪಡಿಸಿಕೊಳ್ಳುವದನ್ನು ತಡೆಯಬೇಕಿದೆ. ಹೋದವರ್ಷದ ಲಾಕ್‌ಡೌನ್ ಅವಧಿಯಲ್ಲೂ ಈ ಬಗೆಯಲ್ಲಿ ಮರಗಳ್ಳತನ ಹಾಗೂ ಕಾಡಿನ ಹೊಸ ಅತಿಕ್ರಮಣದ ಘಟನೆಗಳು ನಡೆದಿರುವದು ಇಲ್ಲಿ ಉಲ್ಲೇಖನಾರ್ಹ. ಆದ್ದರಿಂದ, ಸಾಗರ, ಸೊರಬ, ಹೊಸನಗರ, ತೀರ್ಥಹಳ್ಳಿ, ಶಿವಮೊಗ್ಗದ ತಾಲ್ಲೂಕುಗಳ ಅರಣ್ಯಗಳ ರಕ್ಷಣೆಗೆ ವಿಶೇಷ ಆದ್ಯತೆಯನ್ನು ಅರಣ್ಯ ಇಲಾಖೆ ನೀಡಬೇಕಿದೆ ಹಾಗೂ ಇದಕ್ಕೆ ಜಿಲ್ಲಾಡಳಿತ ಸಂಪೂರ್ನ ಸಹಕಾರ ನೀಡಬೇಕಿದೆ ಎಂದು ಅವರು ತಿಳಿಸಿದ್ದಾರೆ.

(ವರದಿ: ಮಧುರಾಮ್, ಸೊರಬ)

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Anantha Hegde AshisaraKannada News WebsiteKannada_NewsKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga NewsSorabaಅನಂತ ಹೆಗಡೆ ಅಶೀಸರಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಸೊರಬ
Share197Tweet123Send
Previous Post

ಬಳ್ಳಾರಿಯಲ್ಲಿ ನಾಳೆಯಿಂದ ಸಂಪೂರ್ಣ ಲಾಕ್‌ಡೌನ್: ಸಚಿವ ಆನಂದ್ ಸಿಂಗ್

Next Post

ಅಗತ್ಯ ವಸ್ತು ಖರೀದಿಗೆ ವಾಹನ ಬಳಕೆಗೆ ಅವಕಾಶ ನೀಡಲು ಪ್ರಸನ್ನ ಕುಮಾರ್ ಒತ್ತಾಯ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಅಗತ್ಯ ವಸ್ತು ಖರೀದಿಗೆ ವಾಹನ ಬಳಕೆಗೆ ಅವಕಾಶ ನೀಡಲು ಪ್ರಸನ್ನ ಕುಮಾರ್ ಒತ್ತಾಯ

ಅಗತ್ಯ ವಸ್ತು ಖರೀದಿಗೆ ವಾಹನ ಬಳಕೆಗೆ ಅವಕಾಶ ನೀಡಲು ಪ್ರಸನ್ನ ಕುಮಾರ್ ಒತ್ತಾಯ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಹುಲಿಕಲ್ ಘಾಟಿಯಲ್ಲಿ ಭಾರೀ ದುರಂತ | ಧರೆ ಕುಸಿದು ಮೂವರು ಕಾರ್ಮಿಕರ ಸಾವು

ಹುಲಿಕಲ್ ಘಾಟಿಯಲ್ಲಿ ಭಾರೀ ದುರಂತ | ಧರೆ ಕುಸಿದು ಮೂವರು ಕಾರ್ಮಿಕರ ಸಾವು

April 9, 2026
ಪಿಯುಸಿ ರಿಸಲ್ಟ್ | ಪೇಸ್ ಕಾಲೇಜಿನ ವಿದ್ಯಾರ್ಥಿನಿ ಮಹಿನ್ ರಾಜ್ಯಕ್ಕೆ 3, ಜಿಲ್ಲೆಗೆ ಪ್ರಥಮ ಸ್ಥಾನ

ಪಿಯುಸಿ ರಿಸಲ್ಟ್ | ಪೇಸ್ ಕಾಲೇಜಿನ ವಿದ್ಯಾರ್ಥಿನಿ ಮಹಿನ್ ರಾಜ್ಯಕ್ಕೆ 3, ಜಿಲ್ಲೆಗೆ ಪ್ರಥಮ ಸ್ಥಾನ

April 9, 2026
ದೇಶ ಸಮೃದ್ಧಿಯಾದಾಗ ನಾವೆಲ್ಲರೂ ಸಮೃದ್ಧಿ: ಸಂಸದ ರಾಘವೇಂದ್ರ

ದೇಶ ಸಮೃದ್ಧಿಯಾದಾಗ ನಾವೆಲ್ಲರೂ ಸಮೃದ್ಧಿ: ಸಂಸದ ರಾಘವೇಂದ್ರ

April 9, 2026
`ನಾನು ಕರುಣಾಕರ್’ ಚಿತ್ರನೋಡಿ, ಹೊಸ ಪ್ರತಿಭೆಗಳನ್ನು ಬೆಂಬಲಿಸಿ: ನಿರ್ಮಾಪಕ ನಮನ್ ನಾರಾಯಣ್ ಸಂತೋಷ್

`ನಾನು ಕರುಣಾಕರ್’ ಚಿತ್ರನೋಡಿ, ಹೊಸ ಪ್ರತಿಭೆಗಳನ್ನು ಬೆಂಬಲಿಸಿ: ನಿರ್ಮಾಪಕ ನಮನ್ ನಾರಾಯಣ್ ಸಂತೋಷ್

April 9, 2026
ಪಿಯುಸಿ ರಿಸಲ್ಟ್ | ಕುಮದ್ವತಿ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ | ಹೆಮ್ಮೆಯ ವಿದ್ಯಾರ್ಥಿಗಳಿವರು

ಪಿಯುಸಿ ರಿಸಲ್ಟ್ | ಕುಮದ್ವತಿ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ | ಹೆಮ್ಮೆಯ ವಿದ್ಯಾರ್ಥಿಗಳಿವರು

April 9, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL