No Result
View All Result
Kriti Sanon Raksha Bandhan Controversy GIVA Withdraw Advt copy
English Articles

Kriti Sanon’s Raksha Bandhan Ad Faces Backlash; GIVA Withdraws Campaign

by kalpa News
August 26, 2026
0

Kalpa Media House  |  Bangalore  | Jewellery brand GIVA has withdrawn its Raksha Bandhan advertisement featuring Bollywood actor Kriti Sanon following...

Read moreDetails
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
  • Advertise With Us
  • Grievances
  • About Us
  • Contact Us
Thursday, August 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸೊರಬ

ಹಬ್ಬ, ಉತ್ಸವಗಳು ಶಾಂತಿ-ಸೌಹಾರ್ದತೆ ಬಿತ್ತಲಿ: ಮುಹಮ್ಮದ್ ತಾಹೀರ್ ಹುಸೇನ್ ಆಶಯ

kalpa News by kalpa News
September 21, 2023
in ಸೊರಬ
0
ಹಬ್ಬ, ಉತ್ಸವಗಳು ಶಾಂತಿ-ಸೌಹಾರ್ದತೆ ಬಿತ್ತಲಿ: ಮುಹಮ್ಮದ್ ತಾಹೀರ್ ಹುಸೇನ್ ಆಶಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ಸೊರಬ |

ಹಬ್ಬ-ಉತ್ಸವಗಳು ಶಾಂತಿ-ಸೌಹಾರ್ದತೆಯ ಸಂದೇಶವನ್ನು ಬಿತ್ತಿದಾಗ ಉತ್ತಮ ಸಮಾಜ ಮತ್ತಷ್ಟು ಬಲಿಷ್ಟವಾಗುತ್ತದೆ ಎಂದು ಆನಂದಪುರದ ಹೆಡ್‌ಕಾನ್ಸ್‌ಟೇಬಲ್ ಮುಹಮ್ಮದ್ ತಾಹೀರ್ ಹುಸೇನ್ ಹೇಳಿದರು.

ಪಟ್ಟಣದ ಶ್ರೀ ರಂಗನಾಥ ದೇವಸ್ಥಾನದ ಆವರಣದಲ್ಲಿ ತಾಲೂಕು ಗೋ ಸಂರಕ್ಷಣಾ ಹೋರಾಟ ಸಮಿತಿಯಿಂದ 18ನೇ ವರ್ಷದ ಗಣೇಶೋತ್ಸವ ಅಂಗವಾಗಿ ಹಮ್ಮಿಕೊಂಡ ಸಭಾ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.
ಗೋ ಸಂರಕ್ಷಣಾ ಹೋರಾಟ ಸಮಿತಿಯವರು ಗೋವುಗಳ ರಕ್ಷಣೆಯಂತ ಕೆಲಸ ಮಾಡುತ್ತಿದ್ದಾರೆ. ಗಣೇಶೋತ್ಸವದ ಸಂದರ್ಭದಲ್ಲಿ ತಮ್ಮನ್ನು ಗುರುತಿಸಿ ಸನ್ಮಾನಿಸುತ್ತಿರುವುದು ಸಂತಸ ತಂದಿದೆ. ಸರ್ಕಾರಿ ವೃತ್ತಿಯಲ್ಲಿ ಅನೇಕ ಒತ್ತಡಗಳು ಇರುತ್ತದೆ. ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುವ ವೇಳೆಯಲ್ಲಿ ಅನೇಕ ಸವಾಲುಗಳು ಎದುರಾಗುತ್ತದೆ. ವೃತ್ತಿಗೆ ಸೇರ್ಪಡೆಯಾದ ದಿನದಿಂದ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಬೇಕು ಎಂಬ ಸಂಕಲ್ಪ ಮಾಡಿದ್ದೆನು. ಮುಂದೆಯೂ ಸಹ ಇದೇ ಹಾದಿಯಲ್ಲಿ ನಡೆಯುತ್ತೇನೆ ಎಂದರು.

Also read: ಸಮಾಜಕ್ಕೆ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ ಲಯನ್ಸ್ ಸದಸ್ಯರ ಕಾರ್ಯ ಶ್ಲಾಘನೀಯ

ಅಧ್ಯಕ್ಷತೆ ವಹಿಸಿದ್ದ ಸಮಿತಿಯ ಅಧ್ಯಕ್ಷ ಜೆ.ಎಸ್. ಚಿದಾನಂದ ಗೌಡ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಗೋಪಾಲಕರ ಅಭಾವದಿಂದ ದೇಶೀಯ ತಳಿಗಳ ಸಂಖ್ಯೆ ಕ್ಷೀಣಿಸುತ್ತಿದೆ. ಗ್ರಾಮೀಣ ಭಾಗದಲ್ಲಿ ದೇಶೀಯ ತಳಿಯ ಗೋವುಗಳ ರಕ್ಷಣೆಗೆ ಗೋಪಾಲಕರ ಪಾತ್ರ ಮಹತ್ವದ್ದಾಗಿದೆ. ಈ ನಿಟ್ಟಿನಲ್ಲಿ ಸಮಿತಿಯಿಂದ ಪ್ರತಿ ವರ್ಷದ ಗಣೇಶೋತ್ಸವದ ಸಂದರ್ಭದಲ್ಲಿ ಗೋಪಾಲಕರನ್ನು ಗುರುತಿಸಿ ಗೌರವಿಸುವ ಕೆಲಸ ಮಾಡಲಾಗುತ್ತಿದೆ. ಈ ವರ್ಷದ ಉತ್ಸವದಲ್ಲಿ ವಿಶೇಷವಾಗಿ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವವರನ್ನು ಸನ್ಮಾನಿಸಲಾಗುತ್ತಿದೆ ಎಂದರು.
ಸಮಿತಿಯ ಗೌರವಾಧ್ಯಕ್ಷ ಕೆ. ಪ್ರಭಾಕರ ರಾಯ್ಕರ್ ಮಾತನಾಡಿ, ಸರ್ಕಾರಿ ಇಲಾಖೆಯಲ್ಲಿ ಹಾಗೂ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುವ ವೇಳೆ ಪ್ರಾಮಾಣಿಕರು ಎನಿಸುವುದು ಸಮಾಜದಲ್ಲಿ ಕಷ್ಟಸಾಧ್ಯ. ಮುಹಮ್ಮದ್ ತಾಹೀರ್ ಅವರನ್ನು ಸಮಾಜವೇ ಉತ್ತಮ ವ್ಯಕ್ತಿ ಎಂದು ಗುರುತಿಸಿದೆ. ಸಮಾಜದಲ್ಲಿ ಸೇವೆ ಸಲ್ಲಿಸಲು ಅನೇಕ ಮಾರ್ಗಗಳಿವೆ. ಈ ನಿಟ್ಟಿನಲ್ಲಿ ಮಹೇಶ್ ಕಾಳೆ ಅವರು ಬಸ್ ಏಜೆಂಟ್ ಆಗಿ ಸುಮಾರು ೪೩ ವರ್ಷಗಳಿಂದ ಹಾಗೂ ಸಹಕಾರಿ ಕ್ಷೇತ್ರದಲ್ಲಿಯೂ ಸಾರ್ವಜನಿಕರಿಗೆ ಸ್ಪಂದಿಸುತ್ತಾ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ನಮ್ಮ ಸಮಿತಿಯಿಂದ ಕಳೆದ ೧೮ ವರ್ಷಗಳಿಂದ ಸಮಾಜಮುಖಿಯಾಗಿ ಜನ ಮತ್ತು ಜಾನುವಾರುಗಳ ಸೇವೆ ಮಾಡುತ್ತಾ ಬರುತ್ತಿರುವುದಾಗಿ ತಿಳಿಸಿದರು.

ಕಾರ್ಯಕ್ರಮದಲ್ಲಿ ಬಸ್ ಏಜೆಂಟ್ ಮಹೇಶ್ ಕಾಳೆ, ಗೋಪಾಲಕ ನಾಗರಾಜ ಹಳೇಸೊರಬ ಅವರನ್ನು ಸನ್ಮಾನಿಸಲಾಯಿತು. ವಿಶ್ವ ಹಿಂದೂ ಪರಿಷತ್ ತಾಲೂಕು ಅಧ್ಯಕ್ಷ ಎಂ.ಎಸ್. ಕಾಳಿಂಗರಾಜ್, ನಿವೃತ್ತ ಉಪತಹಶೀಲ್ದಾರ್ ಪ್ರಭಾಕರ್ ಗೋಖಲೆ, ಸಮಿತಿಯ ಪ್ರಧಾನ ಕಾರ್ಯದರ್ಶಿ ವೀರೇಂದ್ರಗೌಡ ಜೇಡಗೇರಿ, ಕಾರ್ಯದರ್ಶಿ ರಾಜೇಂದ್ರ ಜೈನ್, ಉಪಾಧ್ಯಕ್ಷ ಯು.ಎಸ್. ಶರತ್ ಸ್ವಾಮಿ, ಖಜಾಂಚಿ ದತ್ತಾತ್ರೇಯ, ಪ್ರಮುಖರಾದ ಎಂ.ಬಿ. ನಾಗರಾಜ, ಮಂಜುನಾಥ ಗುತ್ತಿ, ವಿಜಯಗೌಳಿ, ವಿ. ವೀರಭದ್ರ, ಶಿವಯೋಗಿ ಸ್ವಾಮಿ, ಅನೀಲ್, ನಮಾಮಿಇಂದ್ರ, ಅಭಿ ಹೊಯ್ಸಳ, ರಾಜಣ್ಣ, ಗಿರೀಶ್, ವಿನಯ್, ಸುರೇಶ್ ಗೌಡ ಕುಪ್ಪೆ, ಮುತ್ತು, ಸೇರಿದಂತೆ ಇತರರಿದ್ದರು.

ವರದಿ: ಮಧುರಾಮ್, ಸೊರಬಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

https://kalpa.news/wp-content/uploads/2023/05/VID-20230516-WA0005.mp4

 

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsSorabaಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಸೊರಬ
Share200Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸಮಾಜಕ್ಕೆ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ ಲಯನ್ಸ್ ಸದಸ್ಯರ ಕಾರ್ಯ ಶ್ಲಾಘನೀಯ

Next Post

ಮಹಿಳಾ ಸಬಲೀಕರಣಕ್ಕೆ ಮೀಸಲಾತಿ ಅಗತ್ಯ: ಮಾಜಿ ಸಚಿವ ಬಂಡೆಪ್ಪ ಖಾಶೆಂಪುರ್ ಅಭಿಪ್ರಾಯ

kalpa News

kalpa News

Next Post
ಬಜೆಟ್ ರಾಜ್ಯದ ಜನತೆಯ ನಿರೀಕ್ಷೆಯನ್ನು ಸಂಪೂರ್ಣವಾಗಿ ಹುಸಿಯಾಗಿಸಿದೆ: ಶಾಸಕ ಬಂಡೆಪ್ಪ ಖಾಶೆಂಪುರ್

ಮಹಿಳಾ ಸಬಲೀಕರಣಕ್ಕೆ ಮೀಸಲಾತಿ ಅಗತ್ಯ: ಮಾಜಿ ಸಚಿವ ಬಂಡೆಪ್ಪ ಖಾಶೆಂಪುರ್ ಅಭಿಪ್ರಾಯ

Leave a Reply Cancel reply

Your email address will not be published. Required fields are marked *

No Result
View All Result
Kriti Sanon Raksha Bandhan Controversy GIVA Withdraw Advt copy
English Articles

Kriti Sanon’s Raksha Bandhan Ad Faces Backlash; GIVA Withdraws Campaign

by kalpa News
August 26, 2026
0

Kalpa Media House  |  Bangalore  | Jewellery brand GIVA has withdrawn its Raksha Bandhan advertisement featuring Bollywood actor Kriti Sanon following...

Read moreDetails
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL