ದೇಶದ ಏಕತೆ ಕಾಪಾಡುವುದು, ರಾಷ್ಟ್ರೀಯ ಭಾವೈಕ್ಯತೆ, ರಾಷ್ಟ್ರ ಪ್ರೇಮದಂತಹ ಗುಣ ಬೆಳೆಸಿಕೊಂಡು ರಾಷ್ಟ್ರದ ರಕ್ಷಣೆಗೆ ಸದಾ ಸಿದ್ಧರಾಗಬೇಕು ಎಂದು ತಹಶೀಲ್ದಾರ್ ಮಂಜುಳಾ ಹೇಗಡಾಳ್ ತಿಳಿಸಿದರು.
ಗುರುವಾರ ಪಟ್ಟಣದ ರಂಗಮಂದಿರ ಆವರಣದಲ್ಲಿ ತಾಲೂಕು ಆಡಳಿತ, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ, ತಾಪಂ, ಪುರಸಭೆ ಸಹಯೋಗದಲ್ಲಿ ಹಮ್ಮಿಕೊಂಡ ಭಾರತ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಅವರು ಸಂದೇಶ ನೀಡಿದರು. ವಿವಿಧತೆಯಲ್ಲಿ ಏಕತೆಯನ್ನು ಕಾಪಾಡಿಕೊಂಡು ನಮ್ಮ ದೇಶ ವಿಶ್ವಕ್ಕೆ ವಸುದೈವ ಕುಟುಂಬA ಎಂಬ ಸಂದೇಶ ಸಾರಿದೆ. ದೇಶದ ಸ್ವಾತಂತ್ರ್ಯಕ್ಕಾಗಿ ಅನೇಕ ಮಹನೀಯರ ತ್ಯಾಗ ಬಲಿದಾನವಿದೆ. ಇದರ ಪರಿಣಾಮವಾಗಿ ಸ್ವಾತಂತ್ರ್ಯದ ಸವಿಯನ್ನು ಸವಿಯುತ್ತಿದ್ದೇವೆ. ಈ ಸ್ವಾತಂತ್ರö್ಯ ಉಳಿಸಿಕೊಂಡು ಹೋಗುವುದು ನಮ್ಮ ಕರ್ತವ್ಯವಾಗಿದೆ. ಈ ಬಾರಿ ತಾಲೂಕು ದಾರಕಾರ ಮಳೆಯಿಂದ ಪ್ರವಾಹದ ಪರಿಸ್ಥಿತಿ ಎದುರಿಸಬೇಕಾಯಿತು. ಅಂತಹ ಸಂದರ್ಭದಲ್ಲಿ ನಮಗೆ ಪ್ರತಿ ಹಳ್ಳಿಗಳಲ್ಲಿ ಸಾರ್ವಜನಿಕರು ನೀಡಿದ ಸಹಕಾರ ಅತ್ಯಮೂಲ್ಯವಾದ್ದದ್ದು. ಮುಖ್ಯವಾಗಿ ಯುವಜನತೆ ದುಶ್ಚಟಗಳಿಂದ ದೂರಾಗಿ ಸಫಲರಾದರೆ ಈ ಸ್ವಾತಂತ್ರ ದಿನಾಚರಣೆ ಅರ್ಥಪೂರ್ಣವಾಗುತ್ತದೆ ಎಂದು ಅಭಿಪ್ರಾಯಪಟ್ಟರು.
ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಯಲ್ಲಿ ತುರ್ತು ಸಂದರ್ಭದಲ್ಲಿ ಪ್ರಾಣ ಒತ್ತೆ ಇಟ್ಟು ಕರ್ತವ್ಯ ನಿರ್ವಹಿಸಿದ ಮೆಸ್ಕಾಂ ಹಾಗೂ ಅಗ್ನಿಶಾಮಕ ಸಿಬ್ಬಂದಿಗಳಿಗೆ ಹಾಗೂ ಕ್ರೀಡೆಯಲ್ಲಿ ಸಾಧನೆ ಮಾಡಿದ ಮಾಡಿದ ಸಾಧಕರನ್ನು ಸನ್ಮಾನಿಸಲಾಯಿತು.
ಶಾಲಾ-ಕಾಲೇಜು ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಪುರಸಭೆ ಸದಸ್ಯರಾದ ಈರೇಶ್ ಮೇಸ್ತ್ರಿ, ಮಧುರಾಯ್ ಜಿ. ಶೇಟ್, ಎಂ.ಡಿ. ಉಮೇಶ್, ಶ್ರೀರಂಜನಿ, ಪ್ರೇಮಾ, ಆಫ್ರೀನಾ, ಸುಲ್ತಾನಬೇಗಂ, ಅನ್ಸರ್ ಅಹ್ಮದ್, ಪ್ರಭು ಮೇಸ್ತ್ರಿ, ಯು. ನಟರಾಜ್, ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಎಸ್. ಮಂಜುನಾಥ್, ತಾಪಂ ಇಒ ಡಾ. ಪ್ರದೀಪ್ ಕುಮಾರ್, ಬಿಇಒ ಆರ್ ಪುಷ್ಪ, ಪುರಸಭೆ ಪ್ರಭಾರ ಮುಖ್ಯಾಧಿಕಾರಿ ಚಂದನ್ ಸೇರಿದಂತೆ ಇತರರಿದ್ದರು.
Discussion about this post