ಕಲ್ಪ ಮೀಡಿಯಾ ಹೌಸ್ | ಸೊರಬ |
ತಾಲೂಕಿನ ಪ್ರಸಿದ್ಧ ಮಂಚಿ ಗ್ರಾಮದ ಆಂಜನೇಯ ದೇವಾಲಯಕ್ಕೆ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ #Geetha Shivarajkumar ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ತಮ್ಮ ಪತಿ, ನಟ ಡಾ.ಶಿವರಾಜಕುಮಾರ್ ಅವರೊಂದಿಗೆ ಭೇಟಿ ನೀಡಿದ ಗೀತಾ ಶಿವರಾಜಕುಮಾರ್ ಅವರು ವಿಶೇಷ ಪೂಜೆ ಹಾಗೂ ಪ್ರಾರ್ಥನೆ ಸಲ್ಲಿಸಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗಣಪತಿ, ಸ್ಥಳೀಯ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಕೆ. ಯಲ್ಲಪ್ಪ, ಉಪಾಧ್ಯಕ್ಷ ಚಿರಂಜೀವಿ ಸೇರಿ ಊರಿನ ಗ್ರಾಮಸ್ಥರು ಪಾಲ್ಗೊಂಡಿದ್ದರು.
Also read: ಸೊರಬದ ಶಿಗ್ಗಾದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೀತಾ ಪರ ಭರ್ಜರಿ ಪ್ರಚಾರ | ಯಾವ ನಾಯಕರು ಏನಂದರು?
ಸಾವಿರಾರು ಮಂದಿ ಬೈಕ್ ರ‍್ಯಾಲಿ
ಲೋಕಸಭಾ ಶಿವಮೊಗ್ಗ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಅವರು ಬುಧವಾರ ಸೊರಬ ತಾಲೂಕು ವ್ಯಾಪ್ತಿಯಲ್ಲಿ ಚುನಾವಣಾ ಪ್ರಚಾರ ಸಭೆ ನಡೆಸಿದರು.
ಇದೇ ವೇಳೆ, ಸೊರಬದ ಬಂಗಾರ ಧಾಮದಿಂದ ಶಿಗ್ಗಾದವರೆಗೆ ಬೈಕ್ ರ‍್ಯಾಲಿ ನಡೆಸಲಾಯಿತು.
ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಅವರು ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅವರ ಸಮಾಧಿಗೆ ಪೂಜೆ ಸಲ್ಲಿಸಿ ಬಳಿಕ ಬೈಕ್ ರ‍್ಯಾಲಿಯಲ್ಲಿ ಪಾಲ್ಗೊಂಡರು.
ಬೈಕ್ ರ‍್ಯಾಲಿಗೆ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಅವರು ಚಾಲನೆ ನೀಡಿದರು. ರ‍್ಯಾಲಿಯಲ್ಲಿ 2000 ಕ್ಕೂ ಅಧಿಕ ಕಾರ್ಯಕರ್ತರು ಪಾಲ್ಗೊಂಡಿದ್ದರು.
ಸೊರಬದಿಂದ ಆರಂಭಗೊಂಡ ಬೈಕ್ ರ‍್ಯಾಲಿ ಶಿಗ್ಗಾವರೆಗೆ ಸುಮಾರು 15 ಕಿಮೀ ಕ್ರಮಿಸಿತು. ಬೈಕ್ ರ‍್ಯಾಲಿಗೆ ಸಚಿವ ಮಧು ಬಂಗಾರಪ್ಪ ಸಾರಥಿಯಾಗಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news




















