ಕಲ್ಪ ಮೀಡಿಯಾ ಹೌಸ್ | ಸೊರಬ |
ಸಾರ್ವಜನಿಕರಿಗೆ ಗುಣಮಟ್ಟದ ಆರೋಗ್ಯ ಚಿಕಿತ್ಸೆ ಕೈಗೆಟುಕುವಂತೆ ದೊರೆಯುವ ಉದ್ದೇಶದಿಂದ ಮಣಿಪಾಲ ಆರೋಗ್ಯ ಕಾರ್ಡ್ Manipal Health Card ನೋಂದಣಿ ಪ್ರಕ್ರಿಯೆ ಪ್ರಾರಂಭಿಸಲಾಗಿದ್ದು, ನ.30ರವರೆಗೆ ನೋಂದಣಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ಕಸ್ತೂರಬಾ ಆಸ್ಪತ್ರೆಯ ಮಾರುಕಟ್ಟೆ ವಿಭಾಗದ ವ್ಯವಸ್ಥಾಪಕ ಮೋಹನ್ ಶೆಟ್ಟಿ ತಿಳಿಸಿದರು.
ಪಟ್ಟಣದ ಸೆಂಟ್ ಮಿಲಾಗ್ರಿಸ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮಣಿಪಾಲ ಆರೋಗ್ಯ ಕಾರ್ಡ್ ಮೂಲಕ ಕಳೆದ 23 ವರ್ಷಗಳಿಂದ ಲಕ್ಷಾಂತರ ಜನರ ಉಪಯೋಗ ಪಡೆದಿದ್ದಾರೆ. ಸಣ್ಣ ಮೊತ್ತವನ್ನು ಪಾವತಿಸುವ ಮೂಲಕ ಯಾರಾದರೂ ಸದಸ್ಯರಾಗಬಹುದು ಮತ್ತು ಪ್ರಯೋಜನಗಳನ್ನು ಪಡೆಯಬಹುದು. ಮಣಿಪಾಲ ಆರೋಗ್ಯ ಕಾರ್ಡ್ ಹೊಂದಿರುವವರಿಗೆ ತಜ್ಞ ಮತ್ತು ವಿಶೇಷ ತಜ್ಞ ವೈದ್ಯರ ಸಮಾಲೋಚನೆ ಶುಲ್ಕದಲ್ಲಿ ಶೇ.50ರ ರಿಯಾಯಿತಿ, ಪ್ರಯೋಗಾಲಯದ ಪರೀಕ್ಷೆಗಳಲ್ಲಿ ಶೇ.30, ಮಧುಮೇಹ ಪಾದ ತಪಾಸಣೆಯಲ್ಲಿ ಶೇ.20 ಹಾಗೂ ಔಷಧಾಲಯಗಳಲ್ಲಿ ಶೇ.12ರಷ್ಟು ರಿಯಾಯಿತಿ ಪಡೆಯಬಹುದಾಗಿದೆ ಎಂದು ಮಾಹಿತಿ ನೀಡಿದರು.
ಕಸ್ತೂರಬಾ ಆಸ್ಪತ್ರೆಯ ಮಾರುಕಟ್ಟೆ ವಿಭಾಗದ ಪ್ರತಿನಿಧಿ ಪ್ರವೀಣ್ ಮಾತನಾಡಿ, ಮಣಿಪಾಲ ಆರೋಗ್ಯ ಕಾರ್ಡ್ ಹೊಂದಿರುವವರು ಕರ್ನಾಟಕ ಮತ್ತು ಗೋವಾದ ಮಣಿಪಾಲ ಗ್ರುಪ್ ಆಸ್ಪತ್ರೆಗಳಲ್ಲಿ ಪ್ರಯೋಜನ ಪಡೆಯಬಹುದು. ಮಣಿಪಾಲ ಕಸ್ತೂರಬಾ ಆಸ್ಪತ್ರೆ, ಉಡುಪಿಯ ಡಾ.ಟಿ.ಎಂ.ಎ. ಪೈ ಆಸ್ಪತ್ರೆ, ಕಾರ್ಕಳದ ಡಾ.ಟಿಎಂ.ಎ. ಪೈ ರೋಟರಿ ಆಸ್ಪತ್ರೆ, ಮಂಗಳೂರು ಮತ್ತು ಅತ್ತಾವರದ ಕೆಎಂಸಿ ಆಸ್ಪತ್ರೆ, ಕಟೀಲ್‌ನ ದುರ್ಗಾ ಸಂಜೀವಿನಿ ಆಸ್ಪತ್ರೆ, ಗೋವಾದ ಮಣಿಪಾಲ್ ಆಸ್ಪತ್ರೆ, ಹಾಗೂ ಮಣಿಪಾಲ ಮತ್ತು ಮಂಗಳೂರಿನಲ್ಲಿರುವ ದಂತ ಚಿಕಿತ್ಸಾ ಆಸ್ಪತ್ರೆಗಳಲ್ಲಿ ರಿಯಾಯಿತಿ ಪ್ರಯೋಜನ ಪಡೆಯಬಹುದು. 8867579797ಗೆ ಮಿಸ್ ಕಾಲ್ ನೀಡುವ ಮೂಲಕ ನೋಂದಣಿ ಮಾಡಿಕೊಳ್ಳಲು ಅವಕಾಶವಿದೆ. ಹೆಚ್ಚಿನ ಮಾಹಿತಿಗೆ ಮೊ: 9916676886, 9538869791, 8884101192 ಅಥವಾ 9448721782ಗೆ ಸಂಪರ್ಕಿಸಬಹುದು ಎಂದರು.
Also read: Sajjan Jindal to guide the reconstituted IKF Board: Minister M.B. Patil
ಸುದ್ದಿಗೋಷ್ಠಿಯಲ್ಲಿ ಕಸ್ತೂರಬಾ ಆಸ್ಪತ್ರೆಯ ಮಾರುಕಟ್ಟೆ ವಿಭಾಗದ ಪ್ರತಿನಿಧಿ ಅನಿಲ್ ನಾಯ್ಕ್, ಸೆಂಟ್ ಮಿಲಾಗ್ರಿಸ್ ಕ್ರೆಡಿಟ್ ಸೌಹಾರ್ದ ಕೋ ಅಪರೇಟಿವ್ ಸೊಸೈಟಿಯ ವ್ಯವಸ್ಥಾಪಕಾದ ಜಿ. ನವೀನ್, ಕಿರಣ್ ಕುಮಾರ್, ವಿಪ್ರ ಸೌಹಾರ್ದ ಕೋ ಅಪರೇಟಿವ್ ಸೊಸೈಟಿಯ ವ್ಯವಸ್ಥಾಪಕ ರಾಘವೇಂದ್ರ, ಕೃಷಿಕ್ ಸೌಹಾರ್ದ ಕೋ ಅಪರೇಟಿವ್ ಸೊಸೈಟಿ ವ್ಯವಸ್ಥಾಪಕ ನಾಗರಾಜ ಪ್ರಭು ಉಪಸ್ಥಿತರಿದ್ದರು.
ವರದಿ: ಮಧುರಾಮ್, ಸೊರಬ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post