ಕಲ್ಪ ಮೀಡಿಯಾ ಹೌಸ್ | ಸೊರಬ |
ಸರ್ಕಾರದ ಸೌಲಭ್ಯಗಳು ದಲ್ಲಾಳಿಗಳ ಮುಖಾಂತರ ತಲುಪದೆ ನೇರವಾಗಿ ಜನಸಾಮಾನ್ಯರಿಗೆ ತಲುಪಿಸುವ ಕಾರ್ಯ ಅಧಿಕಾರಿಗಳಿಂದ ಆಗಬೇಕಿದೆ ಎಂದು ಶಾಸಕ ಕುಮಾರ್ ಬಂಗಾರಪ್ಪ MLA Kumar Bangarappa ಅಧಿಕಾರಿಗಳಿಗೆ ಎಚ್ಚರಿಸಿದರು.
ಪಟ್ಟಣದ ಡಾ. ರಾಜ್ ರಂಗಮಂದಿರದಲ್ಲಿ ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿ ಹಾಗೂ ಕಾರ್ಮಿಕ ಇಲಾಖೆ ವತಿಯಿಂದ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಮತ್ತು ಇತರೆ ಕಾರ್ಮಿಕರಿಗೆ ಟೂಲ್ ಕಿಟ್ ವಿತರಣೆ ಹಾಗೂ ಮ್ಯಾಕ್ಸ್ ಆಸ್ಪತ್ರೆಯ ಸಹಯೋಗತ್ವದಲ್ಲಿ ಕಾರ್ಮಿಕರಿಗೆ ಆರೋಗ್ಯ ತಪಾಸಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

Also read: ಉಂಬ್ಳೆಬೈಲು ಬಳಿ ಎರಡು ಬಸ್‌ಗಳ ನಡುವೆ ಭೀಕರ ರಸ್ತೆ ಅಪಘಾತ: ಹಲವರಿಗೆ ಗಂಭೀರ ಗಾಯ
ವಿವಿಧ ಇಲಾಖೆಗಳಿಂದ ರೈತರಿಗೆ, ಕಾರ್ಮಿಕರಿಗೆ, ಸರ್ಕಾರದಿಂದ ದೊರೆಯಬಹುದಾದ ಅನೇಕ ಜನಪರ ಯೋಜನೆಗಳ ಬಗ್ಗೆ ಜಾಗೃತಿ ಮೂಡಿಸಿವ ಕಾರ್ಯ ಆಗಬೇಕು. ಇಂಥ ಸಭೆ ಸಮಾರಂಭಗಳ ಮುಖಾಂತರ ಜನಪ್ರತಿನಿಧಿಗಳಿಂದ ಸರ್ಕಾರದ ಸೌಲಭ್ಯಗಳ ಬಗ್ಗೆ ತಿಳಿಸಿದಾಗ ಮಾತ್ರ ಜನರಲ್ಲಿ ಅರಿವು ಮೂಡುತ್ತದೆ ಮತ್ತು ಅದು ಯಾರಿಗೆ ತಲುಪಬೇಕೋ ಅವರಿಗೆ ತಲುಪುತ್ತದೆ ಎಂದು ತಿಳಿಸಿದರು.

ವರದಿ: ಮಧುರಾಮ್, ಸೊರಬ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post