No Result
View All Result
ಎಲ್ಲವನ್ನೂ ಎದುರಿಸಿ ಕೃಷ್ಣನ ಬಾಳಿಗೆ ಬೆಳಕಾಗ್ತಾಳಾ ರುಕ್ಕು?
English Articles

A tale of love, revenge and destiny: Krishna Rukku to premiere on March 9 on Zee Kannada and ZEE5 Kannada

by ಕಲ್ಪ ನ್ಯೂಸ್
March 5, 2026
0

Kalpa Media House  |  Bengaluru | Zee Kannada, which continues to entertain audiences with fresh and engaging content and has...

Read moreDetails

Record Budget: Chief Minister Must Fulfill Hometown Demands, Urges Dr. Shushrutha Gowda

March 2, 2026
Hotel Management Students Participate in Tree Census

Hotel Management Students Participate in Tree Census

March 2, 2026
Minister Somanna Inspects & Inaugurates Road Under Bridges in Tumkur District eliminating level Crossing gates

Minister Somanna Inspects & Inaugurates Road Under Bridges in Tumkur District eliminating level Crossing gates

February 26, 2026
Le Méridien Dehradun in the Foothills of the Himalayas, Inviting Guests to Slow Down and Savour the Good Life

Le Méridien Dehradun in the Foothills of the Himalayas, Inviting Guests to Slow Down and Savour the Good Life

February 25, 2026
  • Advertise With Us
  • Grievances
  • About Us
  • Contact Us
Thursday, March 5, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸೊರಬ

ವಕ್ಫ್ ಹೆಸರಿನಲ್ಲಿ ದಾಖಲಾಗಿರುವ ಆಸ್ತಿಯನ್ನು ತಕ್ಷಣವೇ ಸರ್ಕಾರ ವಶ ಪಡಿಸಿಕೊಳ್ಳಲಿ: ಕುಮಾರ್ ಬಂಗಾರಪ್ಪ ಆಗ್ರಹ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
November 20, 2024
in ಸೊರಬ
0
ಗೀತಾ ಶಿವರಾಜಕುಮಾರ್ ಗ್ರಾಮ ಪಂಚಾಯ್ತಿ ಕೂಡಾ ಗೆಲ್ಲಲ್ಲ | ಕುಮಾರ್ ಬಂಗಾರಪ್ಪ ಲೇವಡಿ

Internet File Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಸೊರಬ  |

ಸಚಿವ ಜಮೀರ್ ಆಹ್ಮದ್ #Minister Zameer Ahmad ಅವರ ಕ್ಷುಲ್ಲಕ ರಾಜಕಾರಣಕ್ಕಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ #CM Siddaramaiah ಹೆಸರನ್ನು ದುರ್ಬಳಕೆ ಮಾಡಿಕೊಂಡು ವಕ್ಫ್ ವಿಚಾರದಲ್ಲಿ ರಾಜ್ಯದ ಜನತೆಗೆ ತಲ್ಲಣವನ್ನು ಸೃಷ್ಠಿಸಿದ್ದಾರೆ ಎಂದು ಮಾಜಿ ಸಚಿವ ಎಸ್. ಕುಮಾರ್ ಬಂಗಾರಪ್ಪ ಆರೋಪಿಸಿದರು.

ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರೈತರ, ಮಠ ಮಾನ್ಯಗಳ ಜಮೀನು ಹಾಗೂ ಹಿಂದೂ-ಮುಸ್ಲಿಂ ಸೇರಿದಂತೆ ವಿವಿಧ ಸಮುದಾಯದವರ ಜಮೀನುಗಳ ಪಹಣಿಯಲ್ಲಿ ವಕ್ಫ್ ಬೋರ್ಡ್ ಹೆಸರು ನಮೂದಾಗಿರುವುದು ಪ್ರಸ್ತುತ ರಾಷ್ಟ್ರ ವ್ಯಾಪ್ತಿಯಲ್ಲಿ ಚರ್ಚೆಯಾಗುತ್ತಿದೆ. ರಾಷ್ಟ್ರದಲ್ಲಿ ಸುಮಾರು 30 ಲಕ್ಷ ಎಕರೆ ಪ್ರದೇಶ ವಕ್ಫ್ ಬೋರ್ಡ್ಗೆ ಸೇರಿಸಲಾಗಿದೆ. ರಾಜ್ಯದಲ್ಲಿ ದೊರೆತಿರುವ ಅಂಕಿ ಅಂಶದ ಪ್ರಕಾರ 1.16 ಲಕ್ಷ ಎಕರೆ ಪ್ರದೇಶ ವಕ್ಫ್ ಆಸ್ತಿ ಎಂದು ನಮೂದಾಗಿದ್ದು, ನಗರ ಮತ್ತು ಪಟ್ಟಣ ಪ್ರದೇಶಗಳಲ್ಲಿನ ಬೆಲೆ ಬಾಳುವ ಆಸ್ತಿಯನ್ನು ತಕ್ಷಣವೇ ಸರ್ಕಾರ ವಶಕ್ಕೆ ಪಡೆಯುವ ಕೆಲಸ ಮಾಡಬೇಕು ಎಂದು ಆಗ್ರಹಿಸಿದರು.
ವಕ್ಫ್ ಬೋರ್ಡ್ #Wakf Board ಅಧ್ಯಕ್ಷರೆಂದು ಘೋಷಣೆ ಮಾಡಿಕೊಂಡಿರುವ ಜಮೀರ್ ಆಹ್ಮದ್ ಅವರು ಸಚಿವ ಸ್ಥಾನದ ದುರ್ಭಳಕೆ ಮಾಡಿಕೊಂಡು ಅಧಿಕಾರಿಗಳನ್ನು ಬಳಸಿಕೊಂಡು ರೈತರಿಗೆ ಅವಕಾಶವನ್ನು ಸಹ ನೀಡದೇ ಸಾವಿರಾರು ಎಕರೆ ಪ್ರದೇಶವನ್ನು ವಕ್ಫ್ ಬೋರ್ಡ್ಗೆ ಸೇರಿಸಿದ್ದಾರೆ. ಈ ನಡುವೆ ವಕ್ಫ್ ಆಸ್ತಿಯನ್ನು ಹಿಂದಿನಿಂದಲೂ ಕಾಂಗ್ರೆಸ್‌ನ ನಾಯಕರು ಸಹ ಲೂಟಿ ಮಾಡಿದ್ದಾರೆ ಎಂದು ಆರೋಪಿಸಿದ ಅವರು, ರೈತರಿಗೆ ಮತ್ತು ಜನ ಸಾಮಾನ್ಯರಿಗೆ ರಕ್ಷಣೆ ನೀಡುವ ಉದ್ದೇಶದಿಂದ ನ. 25ರಿಂದ 27ರವರೆಗೆ ಬೀದರ್, ರಾಯಚೂರು, ಕಲಬುರಗಿ ಭಾಗದಲ್ಲಿ ಪಕ್ಷದ ಸಮಾನ ಮನಸ್ಕರರು ಒಗ್ಗೂಡಿ ಪ್ರವಾಸ ಮಾಡುವ ಯೋಜನೆ ರೂಪಿಸಲಾಗಿದೆ ಎಂದರು.

Also read: ಬಾಗಲಕೋಟೆ | ಕೊರಿಯರ್’ನಲ್ಲಿ ಬಂದ ಹೇರ್ ಡ್ರೈಯರ್ ಸ್ಫೋಟ | ಆನ್ ಮಾಡಿದ ಮಹಿಳೆಯ ಕೈಗಳು ಛಿದ್ರ

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದು ಎರಡು ವರ್ಷ ಕಳೆದರೂ ಸಹ ಅಭಿವೃದ್ಧಿ ಶೂನ್ಯವಾಗಿದೆ. ಕ್ಷೇತ್ರದ ಶಾಸಕರೇ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದರೂ ಕನಿಷ್ಠ ರಸ್ತೆಗಳಲ್ಲಿನ ಗುಂಡಿ ಮುಚ್ಚುವ ಕೆಲಸ ಮಾಡಲು ಸಾಧ್ಯವಾಗಿಲ್ಲ. ಸೊರಬ-ಶಿರಾಳಕೊಪ್ಪ, ಶಿಗ್ಗಾ-ಶಿರಾಳಕೊಪ್ಪ, ತವನಂದಿ-ಬಿಳಗಲಿ ಸೇರಿದಂತೆ ಅನೇಕ ರಸ್ತೆಗಳಿಗೆ ಹಿಂದಿನ ಬಿಜೆಪಿ ಸರ್ಕಾರದ ಅನುಮೋದನೆ ನೀಡಲಾಗಿತ್ತು. ಅಂತಿಮವಾಗಿ ಹಣಕಾಸು ಒಪ್ಪಿಗೆ ಮಾತ್ರ ಬಾಕಿ ಉಳಿದಿತ್ತು. ಹಾಲಿ ಆಡಳಿತದಲ್ಲಿರುವ ಸರ್ಕಾರದಿಂದ ಯಾವುದೇ ಗುದ್ದಲಿ ಪೂಜೆ, ಶಂಕುಸ್ಥಾಪನೆಗಳು ನಡೆದಿಲ್ಲ. ರಾಜ್ಯದ ಜನತೆ ಕಾಂಗ್ರೆಸ್‌ನ ಮೇಲಿರಿಸಿದ ನಿರೀಕ್ಷೆಗಳು ಹುಸಿಯಾಗಿದೆ ಎಂದರು.

ಕಳೆದ ಲೋಕಸಭಾ ಚುನಾವಣೆಯಲ್ಲಿ ಕ್ಷೇತ್ರದಿಂದ ಸುಮಾರು 93 ಸಾವಿರ ಮತಗಳು ಲಭಿಸಿದ್ದವು. ಈ ಪೈಕಿ ಬಿಜೆಪಿ ಸದಸ್ಯತ್ವ ಅಭಿಯಾನದಲ್ಲಿ ಶೇ.50ರಷ್ಟು ಮಂದಿಯನ್ನು ಸದಸ್ಯರನ್ನಾಗಿಸುವ ಗುರಿಯೊಂದಿಗೆ ಕನಿಷ್ಟ 40 ಸಾವಿರ ಮತದಾರರನ್ನು ಸದಸ್ಯರನ್ನಾಗಿಸುವ ಉದ್ದೇಶದಿಂದ ಸದಸ್ಯತ್ವ ಅಭಿಯಾನ ಮುಂದುವರೆದಿದೆ. ಈಗಾಗಲೇ ಪಕ್ಷದ ಸಕ್ರಿಯ ಸದಸ್ಯರು ಸುಮಾರು 25 ಸಾವಿರ ಸದಸ್ಯತ್ವ ಮಾಡಿದ್ದಾರೆ. ಕೆಲವಡೆ ನೆಟ್‌ವರ್ಕ್ ಸಮಸ್ಯೆಯಿಂದ ಅಡಚಣೆಯಾಗಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಶಿವಕುಮಾರ ಕಡಸೂರು, ಪ್ರಕಾಶ್ ಅಗಸನಹಳ್ಳಿ, ಮಹಿಳಾ ಮೋರ್ಚಾ ಅಧ್ಯಕ್ಷೆ ಹೊಳೆಯಮ್ಮ ಈಶ್ವರಪ್ಪ, ಯುವ ಮೋರ್ಚಾ ಅಧ್ಯಕ್ಷ ರಾಜು ಮಾವಿನಬಳ್ಳಿಕೊಪ್ಪ, ವೀರಶೈವ ಲಿಂಗಾಯ ಸಮಾಜದ ತಾಲೂಕು ಅಧ್ಯಕ್ಷ ಗುರುಕುಮಾರ್ ಪಾಟೀಲ್, ಪುರಸಭೆ ಸದಸ್ಯ ಎಂ.ಡಿ. ಉಮೇಶ್, ಪ್ರಮುಖರಾದ ಅಮಿತ್ ಗೌಡ, ಜಾನಕಪ್ಪ ಒಡೆಯರ್ ಯಲಸಿ, ಕೃಷ್ಣಮೂರ್ತಿ ಕೊಡಕಣಿ, ಅಭಿಷೇಕ್‌ಗೌಡ ಬೆನ್ನೂರು, ಸಂಜಯ್ ತಡಗಳಲೆ ಸೇರಿದಂತೆ ಮತ್ತಿತರರಿದ್ದರು.

ಸರ್ಕಾರ ಬೀಳಿಸುವ ಉದ್ದೇಶವಿಲ್ಲ

ರಾಜ್ಯದಲ್ಲಿ ಬಹುಮತ ಪಡೆದು ಆಡಳಿತಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರವನ್ನು ಬೀಳಿಸುವ ಉದ್ದೇಶವನ್ನು ಬಿಜೆಪಿ ಹೊಂದಿಲ್ಲ. ಆದರೆ, ಸರ್ಕಾರದಿಂದ ಮೂಡ, ವಾಲ್ಮೀಕಿ ಸೇರಿದಂತೆ ಅನೇಕ ಹಗರಣ ನಡೆದಿವೆ. ರಾಜ್ಯದಾದ್ಯಂತ ಪ್ರವಾಸ ಕೈಗೊಂಡು ಸರ್ಕಾರದ ತಪ್ಪುಗಳನ್ನು ಜನತೆಯ ಮುಂದಿಡಲಾಗುವುದು. ಈಗಾಗಲೇ ಮದ್ಯ ಮಾರಾಟಗಾರರು ಅಬಕಾರಿ ಇಲಾಖೆಯ ವಿರುದ್ಧ ಕೈಗೊಂಡಿರುವ ಹೋರಾಟಕ್ಕೆ ಮಾತ್ರವಲ್ಲ ರಾಜ್ಯ ಸರ್ಕಾರ ವೈಫಲ್ಯಗಳನ್ನು ವಿರೋಧಿಸಿ ನಡೆಯುವ ಎಲ್ಲಾ ಹೋರಾಟಗಳಿಗೂ ಬೆಂಬಲ ನೀಡುವುದಾಗಿ ಮಾಜಿ ಸಚಿವ ಎಸ್. ಕುಮಾರ್ ಬಂಗಾರಪ್ಪ ತಿಳಿಸಿದರು.

ವರದಿ: ಮಧುರಾಮ್, ಸೊರಬ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4
Tags: CM SiddaramaiahKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsMinister Zameer AhmadNews_in_KannadaNews_KannadaShimogaShivamoggaNewsSorabaWakf Boardಮಲೆನಾಡು_ಸುದ್ಧಿಮುಖ್ಯಮಂತ್ರಿ ಸಿದ್ಧರಾಮಯ್ಯವಕ್ಫ್ ಬೋರ್ಡ್ಶಿವಮೊಗ್ಗ_ನ್ಯೂಸ್ಸಚಿವ ಜಮೀರ್ ಆಹ್ಮದ್ಸೊರಬ
Share196Tweet123Send
Previous Post

ಬಾಗಲಕೋಟೆ | ಕೊರಿಯರ್’ನಲ್ಲಿ ಬಂದ ಹೇರ್ ಡ್ರೈಯರ್ ಸ್ಫೋಟ | ಆನ್ ಮಾಡಿದ ಮಹಿಳೆಯ ಕೈಗಳು ಛಿದ್ರ

Next Post

ಉಚಿತ NEET/JEE/CET ಆನ್ ಲೈನ್ ಕೋಚಿಂಗ್ ತರಗತಿಗೆ ಸಚಿವ ಮಧು ಬಂಗಾರಪ್ಪ ಚಾಲನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಉಚಿತ NEET/JEE/CET ಆನ್ ಲೈನ್ ಕೋಚಿಂಗ್ ತರಗತಿಗೆ ಸಚಿವ ಮಧು ಬಂಗಾರಪ್ಪ ಚಾಲನೆ

ಉಚಿತ NEET/JEE/CET ಆನ್ ಲೈನ್ ಕೋಚಿಂಗ್ ತರಗತಿಗೆ ಸಚಿವ ಮಧು ಬಂಗಾರಪ್ಪ ಚಾಲನೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಕುವೆಂಪು ವಿವಿ ನಿವೃತ್ತ ಬೋಧಕೇತರ ನೌಕರರ ಸಂಘದ ಅಧ್ಯಕ್ಷರಾಗಿ ರಮೇಶ್ ಶಂಕರಘಟ್ಟ ಆಯ್ಕೆ

ಕುವೆಂಪು ವಿವಿ ನಿವೃತ್ತ ಬೋಧಕೇತರ ನೌಕರರ ಸಂಘದ ಅಧ್ಯಕ್ಷರಾಗಿ ರಮೇಶ್ ಶಂಕರಘಟ್ಟ ಆಯ್ಕೆ

March 5, 2026
ಶ್ರೀ ನಾಗಯಕ್ಷೆ ದೇವಿ ವಾರ್ಷಿಕೋತ್ಸವ | ಮಾ.8ರವರೆಗೆ ವಿಶೇಷ ಧಾರ್ಮಿಕ ಕಾರ್ಯಕ್ರಮ

ಶ್ರೀ ನಾಗಯಕ್ಷೆ ದೇವಿ ವಾರ್ಷಿಕೋತ್ಸವ | ಮಾ.8ರವರೆಗೆ ವಿಶೇಷ ಧಾರ್ಮಿಕ ಕಾರ್ಯಕ್ರಮ

March 5, 2026
ರಾಜ್ಯದಲ್ಲಿ `ಅಪ್ರಾಪ್ತ’ ಹೆಸರಿನ ದುರ್ಬಳಕೆ | ಸಂಕೇತ್‍ ಹತ್ಯೆ ಸಮಗ್ರ ತನಿಖೆಯಾಗಲಿ | ಶಾಸಕ ಚನ್ನಬಸಪ್ಪ ಆಗ್ರಹ

ರಾಜ್ಯದಲ್ಲಿ `ಅಪ್ರಾಪ್ತ’ ಹೆಸರಿನ ದುರ್ಬಳಕೆ | ಸಂಕೇತ್‍ ಹತ್ಯೆ ಸಮಗ್ರ ತನಿಖೆಯಾಗಲಿ | ಶಾಸಕ ಚನ್ನಬಸಪ್ಪ ಆಗ್ರಹ

March 5, 2026
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ದಿವಾಳಿಯಾಗಿದೆ: ಮಾಜಿ ಡಿಸಿಎಂ ಈಶ್ವರಪ್ಪ

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ದಿವಾಳಿಯಾಗಿದೆ: ಮಾಜಿ ಡಿಸಿಎಂ ಈಶ್ವರಪ್ಪ

March 5, 2026
ಡಾ. ಮೈತ್ರೇಯಿ ಅವರಿಗೆ ಸಂಸ್ಕೃತ ವಿವಿಯ ಗ್ರಂಥ ಪುರಸ್ಕಾರ

ಡಾ. ಮೈತ್ರೇಯಿ ಅವರಿಗೆ ಸಂಸ್ಕೃತ ವಿವಿಯ ಗ್ರಂಥ ಪುರಸ್ಕಾರ

March 5, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL