ಕಲ್ಪ ಮೀಡಿಯಾ ಹೌಸ್ | ಸೊರಬ |
75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಹರ್ ಘರ್ ತಿರಂಗಾ ಅಭಿಯಾನದಡಿ ಸೊರಬ ತಾಲೂಕಿನ ಎಲ್ಲಾ ಗ್ರಾಮ ಪಂಚಾಯತಿಗಳಿಗೆ ಧ್ವಜ ವಿತರಿಸಲು ಸ್ವ ಸಹಾಯ ಸಂಘದ ಸದಸ್ಯರ ಧ್ವಜ ತಯಾರಿಕೆ ಘಟಕಕ್ಕೆ ಶಾಸಕ ಕುಮಾರ್ ಬಂಗಾರಪ್ಪ MLA Kumar Bangarappa ಚಾಲನೆ ನೀಡಿದರು.
ಡೇ ಎನ್ ಆರ್ ಎಲ್ ಎಂ ಸಂಜೀವಿನಿ ಯೋಜನೆಯಡಿ ಸ್ನೇಹ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಮಾವಲಿ ಗ್ರಾಮ ಪಂಚಾಯತ್ ನಲ್ಲಿ ಉದ್ಯಮ ವಿಕಾಸ ಪಾಕ್ಷಿಕ ಆಂದೋಲನದಡಿ (ಮಹಿಳೆಯರಿಗೆ ಸ್ವ ಉದ್ಯೋಗ ಮಾಡಲು ಪ್ರೇರೇಪಿಸಲು) ಸ್ವ ಸಹಾಯ ಸಂಘದ ಸದಸ್ಯರಿಂದ ಆರಂಭಿಸುತ್ತಿರುವ ಶ್ರೇಯಸ್ ಹೋಟೆಲ್( ಕ್ಯಾಂಟೀನ್) ಹಾಗೂ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಹರ್ ಗರ್ ತಿರಂಗಾ ಅಭಿಯಾನದಡಿ ಸೊರಬ ತಾಲೂಕಿನ ಎಲ್ಲಾ ಗ್ರಾಮ ಪಂಚಾಯತಿಗಳಿಗೆ ಧ್ವಜ ವಿತರಿಸಲು ಸ್ವ ಸಹಾಯ ಸಂಘದ ಸದಸ್ಯರ ಧ್ವಜ ತಯಾರಿಕೆ ಮತ್ತು ಪೂರೈಕೆ ಘಟಕವನ್ನು ಉದ್ಘಾಟಿಸಿದರು..
ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು, ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕರು, ಡೇ ಎನ್ ಆರ್ ಎಂ ಎಲ್ ಅಧಿಕಾರಿಗಳು, ಮಹಿಳಾ ಒಕ್ಕೂಟದ ಸದಸ್ಯರುಗಳು ಸಂಬಂಧ ಪಟ್ಟ ಅಧಿಕಾರಿಗಳು, ಊರ ನಾಗರಿಕರು ಉಪಸ್ಥಿತರಿದ್ದರು.
Also read: ದ್ರೌಪದಿ ಮುರ್ಮು ರಾಷ್ಟ್ರಪತಿಯಾಗಿ ಪ್ರಮಾಣವಚನ ಹಿನ್ನೆಲೆ ಸಿಹಿ ಹಂಚಿ ಸಂಭ್ರಮಾಚರಣೆ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post