ಕಲ್ಪ ಮೀಡಿಯಾ ಹೌಸ್ | ಸೊರಬ |
ನನ್ನ ತಮ್ಮ ಮಧು ಬಂಗಾರಪ್ಪ #Madhu Bangarappa ಮಾಧ್ಯಮದವರಿಗೆ ಶಾಪ ಹಾಕಿ ಈಗ ತಾನೇ ಶಾಪಗ್ರಸ್ತನಾಗಿದ್ದಾನೆ ಎಂದು ತಮ್ಮ ಸಹೋದರನ ವಿರುದ್ಧ ಕುಮಾರ್ ಬಂಗಾರಪ್ಪ #Kumar Bangarappa ಕಟಕಿಯಾಡಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ಬಿ.ವೈ. ರಾಘವೇಂದ್ರ #B Y Raghavendra ಗೆಲುವಿನ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು, ನನ್ನ ತಮ್ಮ ಮಧೂ ತತಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಬೇಕು. ಇಲ್ಲ ಸಿಎಂ ಅವನನ್ನು ಸಂಪುಟದಿಂದ ವಜಾ ಮಾಡಬೇಕು ಎಂದು ಆಗ್ರಹಿಸಿದ್ದಾರೆ.
ಕನ್ನಡಕ್ಕೆ, ಕನ್ನಡ ನಾಡಿಗೆ ಅವಮಾನಪಡಿಸಿದಾತ, ಟ್ರೋಲ್ ಮಾಡಿದವರಿಗೆ, ಮಾಧ್ಯಮದವರಿಗೆ ಶಾಪ ಹಾಕಿ ತಾನೇ ಶಾಪಗ್ರಸ್ತನಾದ ಎಂದು ಕಟಕಿಯಾಡಿದ್ದಾರೆ.
Also read: ಕೇರಳದಲ್ಲಿ ಬಿಜೆಪಿ ಅಕೌಂಟ್ ಓಪನ್ | ತ್ರಿಶೂರ್’ನಿಂದ ಗೆದ್ದ ಸುರೇಶ್ ಗೋಪಿ
ಕರ್ನಾಟಕ ಕಂಡ ಧೀಮಂತ ರಾಜಕಾರಣಿ, ಬಡವರ ಬಂಧು ಎಂಬ ಸಾರ್ಥಕ ಬಿರುದಾವಳಿಗಳನ್ನು ತಮ್ಮ ಹೆಸರಿನೊಂದಿಗೆ ನಡೆಸಿಕೊಂಡು ಬದುಕಿದವರು ಸಾರೆಕೊಪ್ಪ ಬಂಗಾರಪ್ಪ ಎಂದಿದ್ದಾರೆ.
ಹಿಂದುಳಿದ ವರ್ಗಗಳಿಗೆ ಆಶಾಕಿರಣವಾಗಿದ್ದ, ರೈತ ಬಂಧುವೂ, ಗೇಣಿದಾರರ ಜೀವಜಲವೆನಿಸಿದ್ದ ಹೋರಾಟಗಾಗ, ನಾಡು ನುಡಿ ಸಂಸ್ಕೃತಿಗಳ ರಕ್ಷಾ ಧೀಕ್ಷೆಯನ್ನು ತೊಟ್ಟಿದ್ದ ವೀರಯೋಧನೆನಿಸಿದ್ದ ಕರ್ನಾಟಕದ ಈ ಮಾಜಿ ಮುಖ್ಯಮಂತ್ರಿಯು ಲಿಂಗಾಯತ, ಬ್ರಾಹ್ಮಣ, ಒಕ್ಕಲಿಗರೆಲ್ಲರಲ್ಲಿಯೂ ಸಮ ಭಾವ, ಸಮಚಿತ್ತದಿಂದ ಬೆರೆತಿದ್ದವರು ಎಂದಿದ್ದಾರೆ.
ಇವರ ಆಡಳಿತ ವೈಖರಿಯು ಅನುಕರಣೀಯ ಮಾತ್ರವಲ್ಲದೇ ಆದರ್ಶರೂಪದ್ದಾಗಿತ್ತು. ಇವರು ಜಾರಿಗೆ ತಂದಿದ್ದ ಪಂಚಮುಖಿ ಕಾರ್ಯಕ್ರಮಗಳಾದ ವಿಶ್ವ, ಸುಶ್ರುತ, ಆರಾಧನ, ಆಶ್ರಯ, ಅಕ್ಷಯ ಮುಂತಾದವನ್ನು ಇಡೀ ರಾಜ್ಯ ನೆನೆಯುತ್ತಾ ಆರಾಧಿಸುತ್ತಿದೆ. ಬೇರೆ ರಾಜ್ಯಗಳೂ ಅನುಕರಿಸುತ್ತಿವೆ ಎಂದಿದ್ದಾರೆ.
ಇಂತಹ ಒಬ್ಬರ ಧೀರೋದ್ಧಾತ ನಾಯಕನನ್ನು ನನ್ನ ತಮ್ಮ ಹಾಗೂ ತಂಗಿ ತಮ್ಮ ಸ್ವಾರ್ಥ ಸಾಧನೆಗಾಗಿ, ಕೇವಲ ಒಂದು ಲೋಕಸಭಾ ಕ್ಷೇತ್ರಕ್ಕೆ ಅಂದರೆ ಶಿವಮೊಗ್ಗ ಕ್ಷೇತ್ರಕ್ಕೆ ಸೀಮಿತಿಗೊಲಿಸಿದ್ದು ಇವರ ಸಂಕುಚಿತ ಸ್ವಭಾವದಿಂದ ಎಂದು ಕಿಡಿ ಕಾರಿದರು.
ಇಂತಹ ದಿರೋದ್ಧಾತ ನಾಯಕನನ್ನು ಆದರ್ಶವಾಗಿಟ್ಟುಕೊಂಡು ಮುನ್ನಡೆಯೋಣ. ಪಣ ತೊಡೋಣ, ಗುರಿ ಮುಟ್ಟೋಣ. ಜೊತೆ ಜೊತೆಗೆ ಅಭಿವೃದ್ಧಿ ಕಾರ್ಯಕಗಳು ಶರವೇಗದಲ್ಲಿ ಚಾಲನೆಯಾಗಬೇಕು. ಪಶ್ಚಿಮ ಘಟ್ಟದ ಈ ತಪ್ಪಲು ಸರ್ವ ಜನಾಂಗದ ಶಾಂತಿಯ ತೋಟವಾಗಿ ಕಂಗೊಳಿಸಬೇಕು ಎಂದಿದ್ದಾರೆ.
(ವರದಿ: ಮಧುರಾಮ್, ಸೊರಬ)
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post