ಕಲ್ಪ ಮೀಡಿಯಾ ಹೌಸ್ | ಸೊರಬ |
ಬೇಲಿ ಸವರುವ ವೇಳೆ ಹೆಜ್ಜೇನು ದಾಳಿ ಮಾಡಿದ್ದು ದಂಪತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಸೊರಬ ತಾಲೂಕು ಹಿರೇ ಇಡಗೋಡು ಗ್ರಾಮದಲ್ಲಿ ನಡೆದಿದೆ.
ಕೃಷ್ಣಪ್ಪ ಮತ್ತು ರೇಣುಕಮ್ಮ ದಂಪತಿ ಮನೆ ಹಿಂಭಾಗದಲ್ಲಿ ಬೇಲಿ ಸವರುತ್ತಿದ್ದ ವೇಳೆ ಹೆಜ್ಜೇನುಗಳು ದಾಳಿ ನಡೆಸಿದ್ದು, ಕೂಡಲೇ ಅವರನ್ನು ಆನವಟ್ಟಿ ಸಮುದಾಯ ಕೇಂದ್ರಕ್ಕೆ ದಾಖಲು ಮಾಡಲಾಯಿತು.
Also read: ನೀರಿನ ಬಕೆಟ್‌ಗೆ ಬಿದ್ದು ಒಂದು ವರ್ಷದ ಮಗು ಸಾವು
ಹೆಚ್ಚಿನ ಚಿಕಿತ್ಸೆಗಾಗಿ ಶಿಕಾರಿಪುರದ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದು ದಾಖಲು ಮಾಡಲಾಗಿದ್ದು, ದಂಪತಿಗೆ ಐಸಿಯುನಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ತಿಳಿದು ಬಂದಿದೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















