ಕಲ್ಪ ಮೀಡಿಯಾ ಹೌಸ್ | ಸೊರಬ |
ತಾಲ್ಲೂಕಿನ ಉಳವಿ ಸಮೀಪ ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಇಬ್ಬರು ಸಹೋದರರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.
ಸಾಗರ ತಾಲ್ಲೂಕಿನ ರಾಮನಗರದ ಸುಹೇಲ್ (27), ಸಯ್ಯದ್ ಆಫ್ರಿದ್ (21) ಮೃತಪಟ್ಟವರಾಗಿದ್ದು, ವೆಲ್ಡಿಂಗ್ ಕೆಲಸ ನಿರ್ವಹಿಸುತ್ತಿದ್ದರು. ಸಹೋದರರಿಬ್ಬರು ಮದುವೆಗೆಂದು ಉಳವಿಗೆ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದ್ದು, ಇಬ್ಬರು ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಸಾಗರ ಉಪವಿಭಾಗೀಯ ಆಸ್ಪತ್ರೆಯ ಶವಾಗಾರದಲ್ಲಿ ಇಬ್ಬರ ಮೃತದೇಹ ಇರಿಸಲಾಗಿದೆ ಎಂದು ತಿಳಿದುಬಂದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post