No Result
View All Result
Malnad is a Cultural ‘Gharana’ of Great Minds: Dr. Jayamala at Sahyadri Utsava
English Articles

Malnad is a Cultural ‘Gharana’ of Great Minds: Dr. Jayamala at Sahyadri Utsava

by ಕಲ್ಪ ನ್ಯೂಸ್
March 13, 2026
0

Kalpa Media House  |  Shimoga | Invoking the poetic essence of the Malnad landscape, veteran actor, former minister, and Chairperson...

Read moreDetails
ABB deepens Karnataka footprint with new investments to serve high growth emerging sectors

ABB deepens Karnataka footprint with new investments to serve high growth emerging sectors

March 12, 2026
“Rasamum Rasayanamum- Artistry meets Chemistry”

“Rasamum Rasayanamum- Artistry meets Chemistry”

March 11, 2026
ಕಾನಹಳ್ಳಿಯಲ್ಲಿ ಹಾನಗಲ್ಲಿನ ಕದಂಬ ಹೆಮ್ಮಾಡಿದೇವನ ಅವಧಿಯ ವೀರಗಲ್ಲು ಪತ್ತೆ

T20 World Cup Stars Suryakumar Yadav & Tilak Varma Make Strategic Investment in TRUZON Solar

March 11, 2026
ಸಾಂಕ್ರಾಮಿಕವಲ್ಲದ ಕಾಯಿಲೆಗಳ ಬಗ್ಗೆ ಎಚ್ಚರ ಅವಶ್ಯ : ಡಾ. ಸುಶ್ರುತ ಗೌಡ

Post-COVID Surge: Lifestyle Diseases Now Striking People in Their 40s, Warns Neurologist  Dr. Sushrutha Gowda

March 9, 2026
  • Advertise With Us
  • Grievances
  • About Us
  • Contact Us
Sunday, March 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸೊರಬ

ಮರಗಳ ಅಕ್ರಮ ಕಡಿತಲೆ : ಟ್ರ್ಯಾಕ್ಟರ್ ಸಮೇತ ಮೂವರು ವಶಕ್ಕೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 10, 2021
in ಸೊರಬ
0
ಮರಗಳ ಅಕ್ರಮ ಕಡಿತಲೆ : ಟ್ರ್ಯಾಕ್ಟರ್ ಸಮೇತ ಮೂವರು ವಶಕ್ಕೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಸೊರಬ: ಈಚೆಗಷ್ಟೆ ಐತಿಹಾಸಿಕ ಮಹತ್ವವುಳ್ಳ ಹಳೇಸೊರಬ ಕಾನನ್ನು ಜೀವವೈವಿಧ್ಯ ತಾಣ ಹೆಸರಿನಡಿಯಲ್ಲಿ ಕಾಯ್ದಿಟ್ಟ ಅರಣ್ಯ ಎಂದು ಹಳೇಸೊರಬ ಗ್ರಾಪಂ ಮತ್ತು ರಾಜ್ಯ ಜೀವವೈವಿಧ್ಯ ಮಂಡಳಿ ಘೋಷಿಸಿತ್ತು. ಹಲವು ವರ್ಷಗಳ ಹಿಂದೆ ಇದೇ ಕಾಡನ್ನು ದೇವರಕಾಡು ಎಂದು ಪಶ್ಚಿಮಘಟ್ಟ ಕಾರ್ಯಪಡೆ ಘೋಷಿಸಿತ್ತು. ರಾಜ್ಯದಲ್ಲಿಯೆ ವಿಶೇಷ ಎನಿಸಿರುವ ಮಲೆನಾಡಿಗೆ ಅತ್ಯಗತ್ಯವಾಗಿರುವ ಇಂತಹ ತಾಣದಲ್ಲಿ ಅಪಾರ ಪ್ರಮಾಣದ ನಾಟ ಕಡಿತಲೆಯಾಗಿರುವುದು ಖಂಡನೀಯ ಎಂದು ಪರಿಸರ ಜಾಗೃತಿ ಟ್ರಸ್ಟ್ ಅಧ್ಯಕ್ಷ ಎಂ.ಆರ್.ಪಾಟೀಲ್ ಹೇಳಿದ್ದಾರೆ.

ತಾಲ್ಲೂಕು ಹಳೆಸೊರಬ ವ್ಯಾಪ್ತಿಯ ಸರ್ವೆ ನಂ. 245ರ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಲಕ್ಷಾಂತರ ರೂ., ಬೆಲೆ ಬಾಳುವ ಮರಗಳನ್ನು ಕಡಿತಲೆ ಮಾಡಿ ಆರೋಪಿಗಳು ಸೆರೆಯಾಗಿರುವ ಹಿನ್ನೆಲೆಯಲ್ಲಿ ಪರಿಸರ ಜಾಗೃತಿ ಟ್ರಸ್ಟ್, ಹಸಿರು ಮಡಿಲು ಹಾಗೂ ಇನ್ನೂ ಅನೇಕ ಪರಿಸರ ಸಂಘಟನೆಗಳು ತೀವ್ರ ವಿರೋಧ ವ್ಯಕ್ತಪಡಿಸಿವೆ.

ಕೊರೋನಾ ಲಾಕ್‌ಡೌನ್ ಮರಗಳ್ಳರಿಗೆ ವರದಾನವಾಗಿದೆ. ಇಂದು ಸೊರಬ ತಾಲ್ಲೂಕಿನ ಗ್ರಾಮಾಂತರ ಪ್ರದೇಶದಲ್ಲಿ ಮನೆಗೊಂದರಂತೆ ಮರಕಡಿಯಲೆಂದೆ ಅತ್ಯಾಧುನಿಕ ಯಂತ್ರೋಪಕರಣಗಳು ಬಂದಿವೆ. ವಿಶೇಷವಾಗಿ ಸೊರಬ ಭಾಗದ ಹಳೆಸೊರಬ, ಸಾರೆಕೊಪ್ಪ, ಸಂಪಗೋಡು, ಜಂಬಳ್ಳಿ, ಕಂತನಹಳ್ಳಿ, ತವನಂದಿ ಕಾಡುಗಳಲ್ಲಿ ಬೆಲೆಬಾಳುವ ದೇವದಾರು, ಹಲಸು, ಹೊನ್ನೆ, ಜಂಬೆ, ಬೀಟೆ ಮುಂತಾದ ಮರಗಳು ಉಳಿದುಕೊಂಡಿದ್ದು, ವ್ಯಾಪಾರಿ ದೃಷ್ಟಿಯಿಂದ ಅಕ್ರಮವಾಗಿ ಮರಗಳನ್ನು ಕಡಿತಲೆ ಮಾಡಿ ಸಾಗಿಸುತ್ತಿರುವುದು ಆತಂಕಕಾರಿ ಸಂಗತಿ. ಹೋದವರ್ಷ ಕೂಡ ಲಾಕ್‌ಡೌನ್ ಅವಧಿಯಲ್ಲಿ ಮರಗಳ್ಳತನದ ಜೊತೆಗೆ ಬಗರ್‌ಹುಕುಂ ಹಾವಳಿ ಅಧಿಕವಾಗಿತ್ತು. ಇಂತವರಿಗೆ ರಾಜಕೀಯ ಪ್ರೇರಣೆ, ಕುಮ್ಮಕ್ಕು ಇದ್ದು, ಇದೇ ಪರಿಪಾಟ ಮುಂದುವರೆದರೆ ಸೊರಬ ಶೀಘ್ರದಲ್ಲಿಯೆ ಬಯಲುನಾಡು ಆಗುವುದರಲ್ಲಿ ಸಂದೇಹವಿಲ್ಲ ಎಂದು ಹಸಿರುಮಡಿಲಿನ ಅನ್ಸರ್ ಖೇದ ವ್ಯಕ್ತಪಡಿಸಿದ್ದಾರೆ.

ಮರಗಳ್ಳರು ಬಲೆಗೆ:
ಖಚಿತ ಮಾಹಿತಿ ಮೆರೆಗೆ ಅರಣ್ಯ ಇಲಾಖೆ ಅಧಿಕಾರಿಗಳಾದ ಡಿಎಫ್‌ಒ ಮೋಹನ್ ಕುಮಾರ್, ಎಸಿಎಫ್ ಪ್ರವೀಣ್‌ಕುಮಾರ್ ಬಸರೂರು ಮಾರ್ಗದರ್ಶನದಲ್ಲಿ ಆರ್‌ಎಫ್‌ಒ ಪ್ರಭುರಾಜ ಪಾಟೀಲ್ ನೇತೃತ್ವದ ತಂಡದಲ್ಲಿ ಉಪ ವಲಯಾರಣ್ಯಾಧಿಕಾರಿಗಳಾದ ಶ್ರೀಕಾಂತ್ ರಾಥೋಡ್, ಮುತ್ತಣ್ಣ, ಹನುಮಂತಪ್ಪ, ಅರಣ್ಯ ವೀಕ್ಷಕ ಮಂಜುನಾಥ್ ಇದ್ದು ದಾಳಿ ನಡೆಸಿದೆ. ಕಡಿತಲೆ ಮಾಡಿದ ಮರಗಳ ಸಮೇತ ಆರೋಪಿತರಾದ ಸುರೇಶ್ ನಾರಾಯಣ ಆಚಾರ್, ಪ್ರಶಾಂತ್ ಪರಶುರಾಮ್, ಕೃತಿಕ್ ಗೋವಿಂದಪ್ಪ ಅವರನ್ನು ಬಂಧಿಸಲಾಗಿದೆ.

ಕೃತ್ಯಕ್ಕೆ ಬಳಸಿದ್ದ ಒಂದು ಬೈಕ್, ಟ್ರ್ಯಾಕ್ಟರ್, ಮರಗಳ ಕಡಿತಲೆ ಮಿಷನ್‌ಗಳನ್ನು ವಶಕ್ಕೆ ಪಡೆಯಲಾಗಿದೆ. ಇಂತಹ ಅಕ್ರಮ ಚಟುವಟಿಕೆಗಳಿಗೆ ನೋಂದಣಿಯಾಗದ ಟ್ರ್ಯಾಕ್ಟರ್‌ಗಳು ಮತ್ತು ವಾಹನಗಳನ್ನು ಬಳಕೆ ಮಾಡುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಇನ್ನೂ ಸಾಕಷ್ಟು ಪ್ರಮಾಣದಲ್ಲಿ ಕಡಿತಲೆಗೊಂಡಿರುವ ಮರಗಳನ್ನು ವಶಕ್ಕೆ ಪಡೆಯಬೇಕಿದ್ದು, ಕೃತ್ಯದಲ್ಲಿ ಪಾಲ್ಗೊಂಡ ಇನ್ನೂ ಹಲವರ ಬಂಧನಕ್ಕೆ ಬಲೆ ಬೀಸಲಾಗಿದೆ ಎಂದು ಅರಣ್ಯ ಇಲಾಖೆ ಮಾಹಿತಿ ನೀಡಿದೆ.

ರಾಜ್ಯದ ವಿವಿದೆಡೆಯಿಂದ ಲಾಕ್‌ಡೌನ್ ನಿಮಿತ್ತ ಸ್ವಸ್ಥಾನಕ್ಕೆ ಆಗಮಿಸಿರುವ ಯುವಕರ ದಂಡು ಕಾಡುಗಳ್ಳತನದಂತಹ ದುಷ್ಕೃತ್ಯಕ್ಕೆ ಮುಂದಾಗಿರುವುದು ತೀರಾ ಆತಂಕಕಾರಿ ಸಂಗತಿ. ಈ ನಿಟ್ಟಿನಲ್ಲಿ ಯಾವುದೇ ರಾಜಕೀಯ, ಕೆಲಸಕ್ಕೆ ಬಾರದ ಮುಂಖಂಡರ ಮಾತಿಗೆ ಮಾನ್ಯತೆ ನೀಡದೆ ಇಂತಹ ಕೃತ್ಯ ಎಸಗುವವರ ಬಗ್ಗೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಈ ವೇಳೆ ಇಲಾಖೆ ಜಾಗೃತವಾಗಿರಬೇಕು.
ಶ್ರೀಪಾದ ಬಿಚ್ಚುಗತ್ತಿ
ತಜ್ಞ ಸಮಿತಿ ಸದಸ್ಯರು, ರಾಜ್ಯ ಜೀವವೈವಿಧ್ಯ ಮಂಡಳಿ

ವರದಿ: ಮಧುರಾಮ್, ಸೊರಬ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Kannada News WebsiteKannada_NewsKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga NewsSorabaಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಸೊರಬ
Share197Tweet123Send
Previous Post

ಗಮನಿಸಿ: ಭದ್ರಾವತಿ ತಾಲೂಕು ಆಸ್ಪತ್ರೆಯಲ್ಲಿ ಹೊರರೋಗಿಗಳಿಗೆ ಚಿಕಿತ್ಸೆ ಸಿಗುವುದಿಲ್ಲ!

Next Post

ಶಿವಮೊಗ್ಗ ಜಿಲ್ಲೆಯಲ್ಲಿ ಮೇ 10 ರಿಂದ 18 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ ಆರಂಭ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕೋವಿಡ್ ಲಸಿಕೆ ಪಡೆದ 18 ಗಂಟೆಗಳಲ್ಲೇ ಆರೋಗ್ಯ ಸಿಬ್ಬಂದಿ ಸಾವು? ತೆಲಂಗಾಣದಲ್ಲಿ ಘಟನೆ

ಶಿವಮೊಗ್ಗ ಜಿಲ್ಲೆಯಲ್ಲಿ ಮೇ 10 ರಿಂದ 18 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ ಆರಂಭ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
Swift Action by GRP & RPF Restores Lost Valuables Worth ₹19 Lakhs to Passenger

ಜಿಆರ್‌ಪಿ – ಆರ್‌ಪಿಎಫ್‌ ತ್ವರಿತ ಕ್ರಮ | 19 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ರೈಲ್ವೆ ಪೊಲೀಸ್

March 14, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

ಹುಬ್ಬಳ್ಳಿ – ಘಾಜಿಪುರ ನಡುವೆ ವಿಶೇಷ ರೈಲು ಸೇವೆ

March 14, 2026
ಉದ್ಯೋಗಖಾತ್ರಿ ಯೋಜನೆ ರದ್ದು | ಗ್ರಾಪಂ ಮಟ್ಟದಿಂದ ಕಾಂಗ್ರೆಸ್ ಹೋರಾಟ | ಸಚಿವ ಮಧುಬಂಗಾರಪ್ಪ

ಜಿಲ್ಲೆಯಲ್ಲಿ ಅಡುಗೆ ಅನಿಲದ ಗಂಭೀರ ಸಮಸ್ಯೆ ಇಲ್ಲ: ಸಚಿವ ಮಧು ಬಂಗಾರಪ್ಪ

March 14, 2026
Swift Action by GRP & RPF Restores Lost Valuables Worth ₹19 Lakhs to Passenger

Swift Action by GRP & RPF Restores Lost Valuables Worth ₹19 Lakhs to Passenger

March 14, 2026
ರೈಲ್ವೆ ನೌಕರರ ಸಮಸ್ಯೆಗಳಿಗೆ ಸಕಾಲಿಕ ಪರಿಹಾರ: ಬೇಲಾ ಮೀನಾ  ಭರವಸೆ

ರೈಲ್ವೆ ನೌಕರರ ಸಮಸ್ಯೆಗಳಿಗೆ ಸಕಾಲಿಕ ಪರಿಹಾರ: ಬೇಲಾ ಮೀನಾ  ಭರವಸೆ

March 14, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL