ಕಲ್ಪ ಮೀಡಿಯಾ ಹೌಸ್
ಸೊರಬ: ಕೋವಿಡ್ ಲಾಕ್‌ಡೌನ್ ನಡುವೆಯೇ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದವರ ಮೇಲೆ ಅಬಕಾರಿ ಅಧಿಕಾರಿಗಳು ದಾಳಿ ನಡೆಸಿದ್ದು, ಈ ಸಂದರ್ಭದಲ್ಲಿ ಮಾಲು ಹಾಗೂ ಕೃತ್ಯಕ್ಕೆ ಬಳಸಿದ್ದ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.
ಅಬಕಾರಿ ಡಿಸಿ ಅವರ ಮಾರ್ಗದರ್ಶನದಲ್ಲಿ ಸೊರಬ ಅಧಿಕಾರಿಗಳ ತಂಡ ತಾಲೂಕಿನ ಹಂಚಿ ತಾಂಡಾದ ಮೇಲೆ ದಾಳಿ ನಡೆಸಿದ್ದು, ಇದಕ್ಕೆ ಸಂಬಂಧಿಸಿದಂತೆ ಮೂರು ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ.
ದಾಳಿ ವೇಳೆ 200ಲೀ ಐಡಿ, 175ಲೀ ವಾಶ್, ಒಂದು ದ್ವಿಚಕ್ರ ವಾಹನ ಹಾಗೂ ಕೃತ್ಯಕ್ಕೆ ಬಳಸುತ್ತಿದ್ದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಅಬಕಾರಿ ಇನ್ಸ್‌ಪೆಕ್ಟರ್ ಡಿ.ಎನ್. ಹನುಮಂತಪ್ಪ, ಸಬ್‌ಇನ್ಸ್‌ಪೆಕ್ಟರ್ ಡಿ.ಜೆ. ಜಾನ್, ಸಿಬ್ಬಂದಿಗಳಾದ ಚಂದ್ರ, ರಾಜಮ್ಮ ಹಾಗೂ ಅರ್ಜುನ ಅವರುಗಳು ತಂಡದಲ್ಲಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post