ಕಲ್ಪ ಮೀಡಿಯಾ ಹೌಸ್ | ಸೊರಬ |
ಶಿವಮೊಗ್ಗದ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ 4ನೇ ಅಂತಾರಾಷ್ಟ್ರೀಯ ಮಟ್ಟದ ಓಪನ್ ಕರಾಟೆ ಚಾಂಪಿಯನ್ ಶಿಪ್ International Karate Tournament ಪಂದ್ಯಾವಳಿಯಲ್ಲಿ ಸೊರಬ ಪಟ್ಟಣದ ಹೊಸಪೇಟೆ ಬಡಾವಣೆಯ ಅಮರಜ್ಯೋತಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ ಚಿನ್ನ ಮತ್ತು ಬೆಳ್ಳಿ ಪದಕ ಪಡೆದಿದ್ದಾರೆ.
ಕರಾಟೆ ಚಾಂಪಿಯನ್ ಶಿಪ್ ಪಂದ್ಯಾ ವಳಿಯಲ್ಲಿ 4 ಬಂಗಾರದ ಪದಕ, 3 ಬೆಳ್ಳಿ ಪದಕವನ್ನು ಪಡೆಯುವುದರೊಂದಿಗೆ ಉತ್ತಮ ಚಾಂಪಿಯನ್ ಆಗಿ ಕಾಲೇಜಿಗೆ ಮತ್ತು ತಾಲೂಕಿಗೆ ಕೀರ್ತಿತಂದಿದ್ದಾರೆ.

ಕಲಿಕೆಗೆ ಪೂರಕ
ಕರಾಟೆ ತರಬೇತಿ ವಿದ್ಯಾರ್ಜನೆಗೆ ಪೂರಕ. ಸ್ವ ರಕ್ಷಣೆಯ ಜತೆಗೆ ಏಕಾಗ್ರತೆ, ಹುಮ್ಮಸ್ಸು ಅವಶ್ಯವಾಗಿದ್ದು, ಇದನ್ನು ಕರಾಟೆಯಿಂದ ಪಡೆಯಬಹುದು. ಮಹಿಳಾ ಸಬಲೀಕರಣಕ್ಕೆ ಆದ್ಯತೆ ನೀಡುವುದು ಮುಖ್ಯ ಕರ್ತವ್ಯವಾಗಿದ್ದು. ಪಠ್ಯ ಶಿಕ್ಷಣದೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲಿ ವಿಧ್ಯಾರ್ಥಿಗಳು ಮೇಲುಗೈ ಸಾಧಿಸಬೇಕೆಂಬುದು ನಮ್ಮ ಸಂಸ್ಥೆಯ ಗುರಿಯಾಗಿದೆ
ಸಿಸ್ಟರ್ ಸಿಲ್ವಿಯಾ, ಪ್ರಾಂಶುಪಾಲರು ಅಮರಜ್ಯೋತಿ ಪದವಿಪೂರ್ವ ಕಾಲೇಜು, ಹಳೇಸೊರಬ
ಕರಾಟೆ ಚಾಂಪಿಯನ್ ಶಿಪ್‌ನಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಕಾಲೇಜಿನ ಪ್ರಾಂಶುಪಾಲರು ಉಪನ್ಯಾಸಕ ಮತ್ತು ಆಡಳಿತ ಮಂಡಳಿ ಅಭಿನಂದಿಸಿದ್ದಾರೆ.
Also read: ಬೀದರ್: ಖಾಶೆಂಪುರ್ ಪಿ ಗ್ರಾಮದಲ್ಲಿ ಮರಗೆಮ್ಮ ತಾಯಿ ಜಾತ್ರಾ ಮಹೋತ್ಸವ
ವರದಿ: ಮಧುರಾಮ್, ಸೊರಬ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















