No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
  • Advertise With Us
  • Grievances
  • About Us
  • Contact Us
Monday, July 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸೊರಬ

ಬಸ್ ನಿರ್ವಾಹಕರಿಂದ ವಿಶಿಷ್ಟ ರೀತಿಯಲ್ಲಿ ಕನ್ನಡಾಂಬೆಯ ಸೇವೆ ಶ್ಲಾಘನೀಯ: ಚಿದಾನಂದಗೌಡ

kalpa News by kalpa News
November 7, 2024
in ಸೊರಬ
0
ಬಸ್ ನಿರ್ವಾಹಕರಿಂದ ವಿಶಿಷ್ಟ ರೀತಿಯಲ್ಲಿ ಕನ್ನಡಾಂಬೆಯ ಸೇವೆ ಶ್ಲಾಘನೀಯ: ಚಿದಾನಂದಗೌಡ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಸೊರಬ  |

ನಾಡಿನ ಸಂಸ್ಕೃತಿಯ ಉಳಿವು ಭಾಷೆಯೊಂದಿಗೆ ಬೆರೆತಿದ್ದು, ಕನ್ನಡ ಭಾಷೆಯ ಬೆಳವಣಿಗೆ ಹಲವಾರು ಮಂದಿಯ ಕೊಡುಗೆಗಳಿವೆ. ಆದರೆ, ಬಸ್ ನಿರ್ವಾಹಕರೊಬ್ಬರು ರಾಜ್ಯೋತ್ಸವದ ತಿಂಗಳಿನಲ್ಲಿ ಕನ್ನಡಾಂಬೆಯ ಸೇವೆಯನ್ನು ವಿಶಿಷ್ಟವಾಗಿ ಮಾಡುತ್ತಿರುವುದು ಶ್ಲಾಘನೀಯ ಎಂದು ಸಾರ್ವಜನಿಕ ಹಿತರಕ್ಷಣಾ ಹೋರಾಟ ಸಮಿತಿ ಅಧ್ಯಕ್ಷ ಜೆ.ಎಸ್. ಚಿದಾನಂದಗೌಡ ಹೇಳಿದರು.

ಪಟ್ಟಣದ ಖಾಸಗಿ ಬಸ್ ನಿಲ್ದಾಣದ ಆವರಣದಲ್ಲಿ ಬುಧವಾರ ಸಾರ್ವಜನಿಕ ಹಿತರಕ್ಷಣಾ ಹೋರಾಟ ಸಮಿತಿ, ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ, ಹೆಲ್ಪಿಂಗ್ ಹ್ಯಾಂಡ್ ಸಂಸ್ಥೆ, ಶ್ರೀ ಭೋತೇಶ್ವರ ಆಟೋ ಮಾಲೀಕರ ಮತ್ತು ಚಾಲಕರ ಸಂಘ ಹಾಗೂ ಶ್ರೀ ಭೂತೇಶ್ವರ ವಾಹನ ಮಾಲೀಕರ ಮತ್ತು ಚಾಲಕರ ಸಂಘದ ವತಿಯಿಂದ ಹಮ್ಮಿಕೊಂಡ ಕನ್ನಡ ಪ್ರೇಮಿ ಬಸ್ ನಿರ್ವಾಹಕ ನಟರಾಜ್ ಕುಂದೂರು ಅವರಿಗೆ ಸನ್ಮಾನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕನ್ನಡ ನಾಡನ್ನು ಕಟ್ಟುವಲ್ಲಿ ಅನೇಕ ಸಾಹಿತಿಗಳ, ಕಲಾವಿದರ, ಹೋರಾಟಗಾರರ ಶ್ರಮವಿದೆ. ಕರ್ನಾಟಕವೆಂದು ಮರುನಾಮಕರಣಗೊಂಡು ಐವತ್ತು ವರ್ಷಗಳು ಗತಿಸಿದ್ದು, ಸುವರ್ಣ ವರ್ಷಾಚರಣೆಯ ಸಂಭ್ರಮದಲ್ಲಿದ್ದೇವೆ. ಕೆಎಸ್‍ಆರ್‍ಟಿಸಿ ಬಸ್‍ನ ನಿರ್ವಾಹಕ ನಟರಾಜ ಕುಂದೂರು ಕಳೆದ ಇಪ್ಪತ್ತು ವರ್ಷಗಳಿಂದ ಕನ್ನಡ ರಾಜ್ಯೋತ್ಸವವನ್ನು ಕನ್ನಡ ಹಬ್ಬದಂತೆ ಆಚರಿಸುತ್ತಿದ್ದಾರೆ. ಅವರ ವೇತನದಲ್ಲಿ ಮಾಸಿಕ ಎರಡು ಸಾವಿರ ರೂ., ಕೂಡಿಟ್ಟು, ಬಸ್‍ನ್ನು ಕನ್ನಡ ರಥದಂತೆ ಸಿಂಗರಿಸಿ, ಬಸ್‍ನಲ್ಲಿ ಸಾಹಿತಿಗಳು, ಕಲಾವಿದರು, ಚಿತ್ರನಟರು ಹಾಗೂ ಜಿಲ್ಲೆಯ ಪ್ರಮುಖ ಸ್ಥಳಗಳ ಬಗ್ಗೆ ಮಾಹಿತಿಯನ್ನು ಪ್ರಯಾಣಿಕರಿಗೆ ತಲುಪಿಸುತ್ತಿದ್ದಾರೆ. ಇವರ ಸೇವೆ ಮಾದರಿಯಾಗಿದೆ. ಇಂತಹ ಬಸ್‍ಗಳು ರಾಜ್ಯದ ಮೂಲೆ ಮೂಲೆಯಲ್ಲಿಯೂ ಸಂಚರಿಸುವಂತಾಗಬೇಕು ಎಂದರು.

Also read: ಅಬಕಾರಿ ಇಲಾಖೆ ಅಧಿಕಾರಿಗಳ ವರ್ಗಾವಣೆಯಲ್ಲಿ ಸಚಿವರ ಮಕ್ಕಳ ಹಸ್ತಕ್ಷೇಪ: ಸಂಸದ ರಾಘವೇಂದ್ರ ಆಕ್ಷೇಪ

ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಅಧ್ಯಕ್ಷ ಡಿ.ಎಸ್. ಶಂಕರ್ ಶೇಟ್ ಮಾತನಾಡಿ, ಕನ್ನಡ ಭಾಷಾಭಿಮಾನ ನಿತ್ಯೋತ್ಸವವಾಗಬೇಕು. ಅನ್ಯ ಭಾಷಿಕರಿಗೂ ಕನ್ನಡವನ್ನು ಕಲಿಸುವ ಪ್ರಯತ್ನ ಮಾಡಬೇಕಾಗುತ್ತದೆ. ಬಸ್ ನಿರ್ವಾಹಕನಾಗಿ ನಟರಾಜ್ ಅವರು ಕನ್ನಡದ ಬಗ್ಗೆ ಅಪಾರವಾದ ಅಭಿಮಾನವನ್ನು ಹೊಂದಿದ್ದಾರೆ. ಪ್ರಯಾಣಿಕರಿಗೆ ರಸಪ್ರಶ್ನೆಗಳಿಗೆ ಕೇಳಿ ಸರಿ ಉತ್ತರ ನೀಡಿದವರಿಗೆ ಸಾಹಿತ್ಯ ಪುಸ್ತಕಗಳನ್ನು ನೀಡುತ್ತಿದ್ದಾರೆ. ದೇಶದ ಎಲ್ಲಾ ಭಾಷೆಗಳಿಗಿಂತ ಕನ್ನಡ ಅತ್ಯಂತ ಸುಂದರ ಮತ್ತು ಸರಳ ಭಾಷೆಯಾಗಿದೆ ಎಂದರು.

ಸನ್ಮಾನ ಸ್ವೀಕರಿಸಿದ ಬಸ್ ನಿರ್ವಾಹಕ ನಟರಾಜ ಕುಂದೂರು ಮಾತನಾಡಿ, ತಾವು ಸೇವೆಗೆ ಸೇರಿದ ವರ್ಷದಿಂದಲೂ ಕನ್ನಡ ಹಬ್ಬವನ್ನು ಆಚರಿಸಿಕೊಂಡು ಬರುತ್ತಿದ್ದೇನೆ. ಇದಕ್ಕೆ ಬಸ್‍ನ ಚಾಲಕರು, ಘಟಕದ ವ್ಯವಸ್ಥಾಪಕರು ಮತ್ತು ಸಿಬ್ಬಂದಿ ಸಹಕಾರ ನೀಡಿದ್ದಾರೆ. ಸುರಭಿಪುರದಲ್ಲಿ ಸನ್ಮಾನ ಸ್ವೀಕರಿಸುತ್ತಿರುವುದು ಸಂತಸವಾಗುತ್ತಿದೆ ಎಂದರು.

ಇದೇ ಸಂದರ್ಭದಲ್ಲಿ ಬಸ್‍ನ ಚಾಲಕ ಮಾರುತಿ ನಾಯಕ್ ಅವರಿಗೂ ಸನ್ಮಾನಿಸಲಾಯಿತು. ಸಾರ್ವಜನಿಕ ಹಿತರಕ್ಷಣಾ ಹೋರಾಟ ಸಮಿತಿಯ ಪ್ರಧಾನ ಕಾರ್ಯದರ್ಶಿ ವೀರೇಂದ್ರಗೌಡ ಜೇಡಗೇರಿ, ಉಪಾಧ್ಯಕ್ಷ ದತ್ತಾ ಸೊರಬ, ಹೆಲ್ಪಿಂಗ್ ಹ್ಯಾಂಡ್ ಸಂಸ್ಥೆಯ ಮಧುಕೇಶ್ವರ, ರಾಜೇಂದ್ರ ಜೈನ್, ಶ್ರೀ ಭೋತೇಶ್ವರ ಆಟೋ ಮಾಲೀಕರ ಮತ್ತು ಚಾಲಕರ ಸಂಘದ ಅಧ್ಯಕ್ಷ ಟಿ.ಬಿ. ಹಾಲೇಶ್, ಮಾರುತಿ, ತಾತಪ್ಪ, ಮನೋಜ್, ಚಂದ್ರಪ್ಪ, ಸಂತೋಷ್, ಅಣ್ಣಪ್ಪ, ಶ್ರೀ ಭೂತೇಶ್ವರ ವಾಹನ ಮಾಲೀಕರ ಮತ್ತು ಚಾಲಕರ ಸಂಘದ ಸಂತೋಷ್, ಜೆ.ಎಂ. ಅಜಯ್, ಸಚಿನ್, ಗಣೇಶ್, ದಾನಶೇಖರ ಕುದುರೆಗಣಿ, ಖುಷಿ ವಿ. ಗೌಡ, ಸೇರಿದಂತೆ ಇತರರಿದ್ದರು.

ವರದಿ: ಮಧುರಾಮ್, ಸೊರಬ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

http://kalpa.news/wp-content/uploads/2024/04/VID-20240426-WA0008.mp4

 

Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsSorabaಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಸೊರಬ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗ | ಪೌತಿ ಖಾತೆಗೆ 25 ಸಾವಿರ ರೂಪಾಯಿ ಲಂಚ | ಲೋಕಾಯುಕ್ತ ಬಲೆಗೆ ಬಿದ್ದ ವಿಎ

Next Post

ಸಾಮಾಜಿಕ ಜಾಲತಾಣಗಳಲ್ಲಿ ಅನಗತ್ಯ ಸಮಯ ವ್ಯರ್ಥ ಮಾಡುವುದು ಭವಿಷ್ಯದಲ್ಲಿ ಮಾರಕ

kalpa News

kalpa News

Next Post
ಸಾಮಾಜಿಕ ಜಾಲತಾಣಗಳಲ್ಲಿ ಅನಗತ್ಯ ಸಮಯ ವ್ಯರ್ಥ ಮಾಡುವುದು ಭವಿಷ್ಯದಲ್ಲಿ ಮಾರಕ

ಸಾಮಾಜಿಕ ಜಾಲತಾಣಗಳಲ್ಲಿ ಅನಗತ್ಯ ಸಮಯ ವ್ಯರ್ಥ ಮಾಡುವುದು ಭವಿಷ್ಯದಲ್ಲಿ ಮಾರಕ

Leave a Reply Cancel reply

Your email address will not be published. Required fields are marked *

No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL