ಕಲ್ಪ ಮೀಡಿಯಾ ಹೌಸ್ | ಸೊರಬ |
ನನ್ನ ತಂಗಿಯ ಗಂಡ ಡಾ. ಶಿವರಾಜಕುಮಾರ್ #Shivarajkumar ನಿರುದ್ಯೋಗಿಯಾಗಬೇಕಿಲ್ಲ. ನಮ್ಮೂರ ಜಾತ್ರೆಗಳಲ್ಲಿ ಕುಣಿಯವ ಕೆಲಸಕ್ಕೆ ಈಗಲೇ ಅರ್ಜಿ ಹಾಕಿಕೊಳ್ಳಬಹುದು ಎಂದು ತಮ್ಮ ಭಾವನಿಗೆ ಮಾಜಿ ಶಾಸಕ ಕುಮಾರ್ ಬಂಗಾರಪ್ಪ #Kumar Bangarappa ಟಾಂಗ್ ನೀಡಿದ್ದಾರೆ.
ಬಿ.ವೈ. ರಾಘವೇಂದ್ರ #B Y Raghavendra ಅವರ ಗೆಲುವಿನ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಅವರು ಪೋಸ್ಟ್ ಮಾಡಿದ್ದಾರೆ.

ಹೆದರಿಸುವ, ಬೆದರಿಸುವ, ಹುಷಾರ್ ಅನ್ನು ಮಾತುಗಳೇನಿದ್ದರೂ ಗಂಟಲೊಳಗೇ ನಾಲ್ಕು ಗೋಡೆಗಳೊಳಗೆ, ತಮ್ಮ ಪಟಾಲಂ ಮುಂದೆ ಮಾತ್ರ ಚಾಲ್ತಿಯಲ್ಲಿರಬೇಕು ಎಂದು ಟೀಕಿಸಿದ್ದಾರೆ.

Also read: ಮಾಧ್ಯಮದವರಿಗೆ ಶಾಪ ಹಾಕಿ ತಾನೇ ಶಾಪಗ್ರಸ್ತನಾದ: ತಮ್ಮನಿಗೆ ಕುಮಾರ್ ಬಂಗಾರಪ್ಪ ಟಾಂಗ್
ಉತ್ತಮ ಸಂದೇಶ ಇವರದ್ದಾಗಿದ್ದರೆ ಖಂಡಿತ ವಿಜಯಲಕ್ಷ್ಮಿ ಒಲಿಯುತ್ತಿದ್ದಳು. ಸ್ವಂತ ಸಹೋದರನ ಭವಿಷ್ಯಕ್ಕೆ ತೊಡರುಗಾಲು ಹಾಕಲೆಂದೇ ಬೆಂಗಳೂರಿನಿಂದ ಧಾವಿಸಿಬಂದು ತಿಳಿಯಾಗಿಸಬೇಕಿದ್ದ ವಾತಾವರಣವನ್ನು ಕಲುಷಿತಗೊಳಿಸಿ, ದಿಕ್ಕು ದೆಸೆ ಇಲ್ಲದಂತಾಗಿ ಹೋಗಿ ಗೂಡು ಸೇರಿಕೊಂಡಿದ್ದಾರೆ ಬೆಂಗಳೂರಿಗೆ. ಹಿಂತಿರುಗಿ ಬರುವುದು ಕನಸಿನ ಮಾತು ಎಂದು ಕುಟುಕಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post