ಕಲ್ಪ ಮೀಡಿಯಾ ಹೌಸ್
ಸೊರಬ: ದಿ. ಬಂಗಾರಪ್ಪ, ಕಾಗೋಡು ತಿಮ್ಮಪ್ಪ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಶಿವಮೊಗ್ಗ ಜಿಲ್ಲೆಯ ಬಡವರ ಏಳಿಗೆಗಾಗಿ ಶ್ರಮಿಸಿದ್ದಾರೆ. ನಾವು ಮುಂದಿನ ಪೀಳಿಗೆ ನೆನಪಿನಲಿಡುವಂತ ಕೆಲಸ ಮಾಡಬೇಕೆಂದು ಸಂಸದ ಬಿ.ವೈ. ರಾಘವೇಂದ್ರ ತಿಳಿಸಿದರು.
ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ
ಹಿರೇಶಕುನದಲ್ಲಿ ತಾಲೂಕು ಆರ್ಯ ಈಡಿಗರ ಸಂಘದ ವತಿಯಿಂದ ನಿರ್ಮಿಣವಾಗುತ್ತಿರುವ ಈಡಿಗ ಸಮುದಾಯ ಭವನದ ಗುದ್ದಲಿಪೂಜೆ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಈ ಸಮುದಾಯ ಭವನಕ್ಕೆ ಈಗಾಗಲೇ 2 ಕೋಟಿ ರೂ.ಗಳನ್ನು ಬಿ. ಎಸ್. ಯಡಿಯೂರಪ್ಪನವರ ನೇತೃತ್ವದಲ್ಲಿ ಬಿಡುಗಡೆ ಮಾಡಲಾಗಿದೆ. ಇಲ್ಲಿನ ಶಾಸಕರು ಮತ್ತು ಮುಖಂಡರು ಎಲ್ಲರೂ ಸೇರಿ ಈ ಭವನಕ್ಕೆ ಹಣವನ್ನು ತರುವ ಕೆಲಸವನ್ನು ಮಾಡೋಣ. ಜಿಲ್ಲೆಯ ಹಲವೆಡೆ ಈಡಿಗ ಸಮುದಾಯದ ಕೆಲಸ ನಡೆಯುತ್ತಿದೆ ಎಂದರು.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ಸಚಿವರಾದ ಕೆ. ಎಸ್. ಈಶ್ವರಪ್ಪ, ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ಶಾಸಕ ಕುಮಾರ್ ಬಂಗಾರಪ್ಪ, ತಾಲೂಕು ಆರ್ಯ ಈಡಿಗ ಸಂಘದ ಅಧ್ಯಕ್ಷ ಕೆ.ಅಜ್ಜಪ್ಪ, ಶ್ರೀ ಕ್ಷೇತ್ರ ಸಿಗಂದೂರು ಸಂಘದ ನಿರ್ದೇಶಕ ಡಾ. ರಾಮಪ್ಪ, ಸಂಘದ ನಿರ್ದೇಶಕರು, ಕಾರ್ಯದರ್ಶಿಗಳು ಹಾಗೂ ಸಮಾಜದ ಬಂಧುಗಳು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post