ಕಲ್ಪ ಮೀಡಿಯಾ ಹೌಸ್ | ಸೊರಬ |
ತಾಲೂಕಿನ ಉಳವಿಯ ಮಾರಿಕಾಂಬಾ ದೇವಸ್ಥಾನದ ತಿರುವಿನ ಬಳಿ ಶುಕ್ರವಾರ ಭೀಕರ ರಸ್ತೆ ಅಪಘಾತ ಸಂಭವಿಸಿ, ಒಬ್ಬ ಯುವಕ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.
ಶಿರಾಳಕೊಪ್ಪ ಕಡೆಯಿಂದ ಮರದ ದಿಮ್ಮಿಗಳನ್ನು ಸಾಗರದತ್ತ ಕೊಂಡೊಯ್ಯುತ್ತಿದ್ದ ಲಾರಿಯೊಂದು, ಉಳವಿ ಕಡೆಯಿಂದ ಬರುತ್ತಿದ್ದ ಟಾಟಾ ಏಸ್ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಉಳವಿಯ ಕೆರೆ ಸಮೀಪದ ಮಾರಿಕಾಂಬಾ ದೇವಸ್ಥಾನದ ತಿರುವಿನಲ್ಲಿ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಡಿಕ್ಕಿಯ ತೀವ್ರತೆಗೆ ಟಾಟಾ ಏಸ್ ವಾಹನದ ಮುಂಭಾಗ ಸಂಪೂರ್ಣ ಜಖಂಗೊಂಡಿದೆ.
ಅಪಘಾತದ ಬಳಿಕ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಸೊರಬ ಪೊಲೀಸ್ ಠಾಣೆ ಅಧಿಕಾರಿಗಳು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Comments 1