No Result
View All Result
RPF Mysuru Railway Theft Lost Mobile Recovered copy
English Articles

RPF Mysuru Cracks Railway Property Theft, Recovers Passenger’s Lost Mobile Phone

by kalpa News
August 31, 2026
0

Kalpa Media House  |  Mysuru  | The Railway Protection Force (RPF), Mysuru Division, has demonstrated prompt action and vigilance by...

Read moreDetails
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
  • Advertise With Us
  • Grievances
  • About Us
  • Contact Us
Tuesday, September 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸೊರಬ

ಅರಣ್ಯ ಹಕ್ಕು ಕಾಯ್ದೆ ಜಾರಿ ಮಾಡುವಂತೆ ಮಲೆನಾಡು ರೈತರ ಹೋರಾಟ ಸಮಿತಿ ಮನವಿ

kalpa News by kalpa News
August 20, 2021
in ಸೊರಬ
0
ಅರಣ್ಯ ಹಕ್ಕು ಕಾಯ್ದೆ ಜಾರಿ ಮಾಡುವಂತೆ ಮಲೆನಾಡು ರೈತರ ಹೋರಾಟ ಸಮಿತಿ ಮನವಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಸೊರಬ: ಅರಣ್ಯ ಹಕ್ಕು ಕಾಯ್ದೆ ಜಾರಿ ಮಾಡಬೇಕು ಹಾಗೂ ವೈಯುಕ್ತಿಕ ದ್ವೇಷದಿಂದ ರೈತರಿಗೆ ಕಿರುಕುಳು ನೀಡುತ್ತಿರುವವರ ಮೇಲೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಮಲೆನಾಡು ರೈತರ ಹೋರಾಟ ಸಮಿತಿ ವತಿಯಿಂದ ಪಟ್ಟಣದ ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿ, ತಹಶೀಲ್ದಾರ್ ಶಿವಾನಂದ ರಾಣೆ ಅವರಿಗೆ ಮನವಿ ಸಲ್ಲಿಸಲಾಯಿತು.

ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ

ಪ್ರತಿಭಟನೆಯ ನೇತೃತ್ವ ವಹಿಸಿದ್ದ ಸಮಿತಿಯ ಜಿಲ್ಲಾ ಸಂಚಾಲಕ ತೀ.ನಾ. ಶ್ರೀನಿವಾಸ ಮಾತನಾಡಿ, ಕ್ಷೇತ್ರವನ್ನು ಪ್ರತಿನಿಧಿಸಿ ಮುಖ್ಯಮಂತ್ರಿಗಳಾಗಿ ಅಧಿಕಾರ ನಿರ್ವಹಿಸಿದ ಎಸ್. ಬಂಗಾರಪ್ಪ ಅವರ ಕಾಲಾ ನಂತರ ತಾಲೂಕಿನಲ್ಲಿ ರೈತರು ಮತ್ತು ಬಗರ್‌ಹುಕುಂ ಸಾಗುವಳಿದಾರರ ಮೇಲೆ ನಿರಂತವಾಗಿ ದೌರ್ಜನ್ಯ ನಡೆಯುತ್ತಿದೆ. ಈ ಹಿಂದೆ ಕುಪ್ಪಗಡ್ಡೆ ಹೋಬಳಿಯ ಕೆರೆಹಳ್ಳಿ, ತಾಳಗುಪ್ಪದಲ್ಲಿ ಅರಣ್ಯ ಇಲಾಖೆಯೇ ಮಂಜೂರಾತಿಗೆ ಸರ್ಕಾರಕ್ಕೆ ಶಿಫಾರಸ್ಸು ಮಾಡಿದ್ದ 32 ಜನ ರೈತರನ್ನು ಒಕ್ಕಲೆಬ್ಬಿಸಲಾಯಿತು. ತಾಳಗುಪ್ಪ ಗ್ರಾಮದ ವ್ಯಕ್ತಿಯೊಬ್ಬ ವೈಯುಕ್ತಿಕ ದ್ವೇಷ, ಬಡವರ ವಿರೋಧಿ ಮನೋಭಾವರಿಂದ ಸರ್ಕಾರಕ್ಕೆ ಮತ್ತು ನ್ಯಾಯಾಲಯಗಳಿಗೆ ಸುಳ್ಳು ಮಾಹಿತಿ ನೀಡಿ, ಒಕ್ಕಲೆಬ್ಬಿಸಲು ಕಾರಣವಾಯಿತು ಎಂದು ಆರೋಪಿಸಿದರು.


ಸದಾ ಬಡವರ ಪರವಾದ ಕಾಳಜಿ ಹೊಂದಿದ್ದ ಎಸ್. ಬಂಗಾರಪ್ಪ ಅವರು ಸ್ವತಃ ನ್ಯಾಯಾಲಯದಲ್ಲಿ ರೈತರ ಪರವಾಗಿ ವಾದ ಮಾಡಲು ವಕೀಲರನ್ನು ನೇಮಿಸಿದ್ದರು. ಬಂಗಾರಪ್ಪ ಅವರ ಕಾಲಾ ನಂತರ ಸರ್ಕಾರ ಮತ್ತು ವಕೀಲರು ನ್ಯಾಯಾಲಯಕ್ಕೆ ಸಮರ್ಪಕ ಮಾಹಿತಿ ನೀಡದೇ ಇರುವುದರಿಂದ ರೈತರಿಗೆ ಅನ್ಯಾಯವಾಗಿದೆ. ಇದೀಗ ಗೆಂಡ್ಲಾ ಗ್ರಾಪಂ ವ್ಯಾಪ್ತಿಯ ಶಿಡ್ಡಿಹಳ್ಳಿ ಗ್ರಾಮದ 123 ಜನರ ವಿರುದ್ಧ ವ್ಯಕ್ತಿಯೊಬ್ಬರು ಅರಣ್ಯ ಇಲಾಖೆ ಮತ್ತು ನ್ಯಾಯಾಲಯದಲ್ಲಿ ಸುಳ್ಳು ದೂರು ನೀಡಿ ಒಕ್ಕಲೆಬ್ಬಿಸಲು ಹೊರಟಿದ್ದಾರೆ. ಅನಾವಶ್ಯಕವಾಗಿ ಬಡವರ ಮೇಲೆ ದೂರು ನೀಡಿದ್ದಾರೆ. ಇಂತಹವರ ಮೇಲೆ ಕಾನೂನು ಕ್ರಮ ಕೈಗೊಂಡು ರೈತರಿಗೆ ಉಪಟಳ ತಪ್ಪಿಸಬೇಕು ಎಂದು ಆಗ್ರಹಿಸಿದರು.

ಮಲಂದೂರು ಮಾದರಿಯಾಗಲಿ:
ನಕ್ಸಲ್ ಪೀಡಿತ ಪ್ರದೇಶವಾಗಿದ್ದ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಹೋಬಳಿಯ ಮಲಂದೂರು ಗ್ರಾಮದಲ್ಲಿ ರೈತರಿಗೆ ಹಾದಿ ತಪ್ಪಿಸುವ ಕೆಲಸವಾಗುತ್ತಿದೆ ಎಂಬುದನ್ನು ಅರಿತ ಜಿಲ್ಲಾಧಿಕಾರಿಗಳು ಅರಣ್ಯ ಹಕ್ಕು ಸಮಿತಿ ಸಭೆ ಕರೆದಿದ್ದರು. ಈ ಸಂದರ್ಭದಲ್ಲಿ ರೈತರೊಂದಿಗೆ ಚರ್ಚೆ ನಡೆಸಿ ಸಾಂದರ್ಭಿಕ ಸಾಕ್ಷಿ ಅನುಸರಿಸಿ ರೈತರಿಗೆ ಒಂದೇ ದಿನದಲ್ಲಿ ತಹಶೀಲ್ದಾರ್, ಉಪವಿಭಾಗಾಧಿಕಾರಿ ಸೇರಿದಂತೆ ಸಂಬಂಧಿಸಿದ ಅಧಿಕಾರಿಗಳ ಸಭೆ ನಡೆಸಿ, ಸುಮಾರು 78 ರೈತರಿಗೆ ಭೂ ಮಾಲಿಕತ್ವದ ಹಕ್ಕನ್ನು ನೀಡಲಾಯಿತು. ಅಂತೆಯೇ ತಾಲೂಕಿನಲ್ಲಿ ಹಲವಾರು ವರ್ಷಗಳಿಂದ ಅರಣ್ಯ ಭೂಮಿ ಸಾಗುವಳಿ ಮಾಡುತ್ತಿರುವವರಿಗೆ ಮಲಂದೂರು ಮಾದರಿಯಲ್ಲಿ ತ್ವರಿತವಾಗಿ ನ್ಯಾಯ ಒದಗಿಸಿ, ಒಂದು ತಿಂಗಳ ಒಳಗಾಗಿ ಹಕ್ಕು ಪತ್ರ ನೀಡಬೇಕು. ಇಲ್ಲವಾದಲ್ಲಿ ತಾಲೂಕು ಕಚೇರಿಗೆ ಬೀಗ ಜಡಿದು ಪ್ರತಿಭಟಿಸಲಾಗುವುದು ಎಂದರು.

ಕೇಂದ್ರ ಸರ್ಕಾರದ ಅರಣ್ಯ ಹಕ್ಕು ಕಾಯ್ದೆಯಂತೆ ರೈತರು ಅರ್ಜಿ ಸಲ್ಲಿಸಿದ್ದರೂ ಸಹ, ಅರಣ್ಯ ಇಲಾಖೆಯ ಅಧಿಕಾರಿಗಳು ರೈತರನ್ನು ಒಕ್ಕಲೆಬ್ಬಿಸಲು ನೋಟೀಸ್ ಜಾರಿ ಮಾಡಿರುವುದು ಖಂಡನೀಯವಾಗಿದೆ. ಅರಣ್ಯ ಹಕ್ಕು ಕಾಯ್ದೆಯಡಿ ಅರಣ್ಯ ವಾಸಿಗಳು, ಬುಡಕಟ್ಟು ವ್ಯಕ್ತಿಯನ್ನು ಅಥವಾ ಪಾರಂಪರಿಕ ಅರಣ್ಯ ವಾಸಿ ಮಾನ್ಯತೆ ಮತ್ತು ಪರಿಶೀಲನಾ ಪ್ರಕ್ರಿಯೆ ಪೂರ್ಣವಾಗುವವರೆಗೆ ಅವರ ಅಧಿಭೋಗದಲ್ಲಿರುವ ಅರಣ್ಯ ಜಮೀನಲ್ಲಿ ಸಾಗುವಳಿ ಮಾಡುತ್ತಿರುವವರನ್ನು ಒಕ್ಕಲೆಬ್ಬಿಸುವಂತಿಲ್ಲ ಎಂದು ಕಾಯ್ದೆಯಲ್ಲಿದೆ. ಆದರೂ ನೋಟೀಸ್ ನೀಡಿರುವುದರಿಂದ ರೈತರು ಆತಂಕಕ್ಕೆ ಒಳಗಾಗಿದ್ದಾರೆ ಎಂದರು.


ಇದಕ್ಕೂ ಮೊದಲು ಪಟ್ಟಣದ ಖಾಸಗಿ ಬಸ್ ನಿಲ್ದಾಣ ವೃತ್ತದಿಂದ ತಾಲೂಕು ಕಚೇರಿ ವರೆಗೆ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆಯಲ್ಲಿ ಅರಣ್ಯ ಹಕ್ಕು ಸಮಿತಿಯ ಅಧ್ಯಕ್ಷ ಅಜೀಜ್ ಸಾಬ್, ಪರಶುರಾಮ, ಮಹದೇವಪ್ಪ, ಬಸವರಾಜಪ್ಪ, ವೀರೇಶಯ್ಯ, ಅಹಮ್ಮದ್ ಶರೀಫ್, ರಶೀದ್ ಸಾಬ್ ಸೇರಿದಂತೆ ಮತ್ತಿತರರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsNews in KannadaNews KannadaS BangarappaShimogaShivamoggaShivamogga NewsSorabaಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಸೊರಬ
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಪತ್ರಕರ್ತ ಅಜೇಯ ಸಿಂಹಗೆ ಮಾತೃ ವಿಯೋಗ

Next Post

ಪತ್ರಕರ್ತನ ಚಿಕಿತ್ಸೆಗೆ ಆರ್ಥಿಕ ನೆರವು: ಸಿಎಂ ಬೊಮ್ಮಾಯಿಗೆ ಅಭಿನಂದನೆ

kalpa News

kalpa News

Next Post
ಪತ್ರಕರ್ತನ ಚಿಕಿತ್ಸೆಗೆ ಆರ್ಥಿಕ ನೆರವು: ಸಿಎಂ ಬೊಮ್ಮಾಯಿಗೆ ಅಭಿನಂದನೆ

ಪತ್ರಕರ್ತನ ಚಿಕಿತ್ಸೆಗೆ ಆರ್ಥಿಕ ನೆರವು: ಸಿಎಂ ಬೊಮ್ಮಾಯಿಗೆ ಅಭಿನಂದನೆ

Leave a Reply Cancel reply

Your email address will not be published. Required fields are marked *

No Result
View All Result
RPF Mysuru Railway Theft Lost Mobile Recovered copy
English Articles

RPF Mysuru Cracks Railway Property Theft, Recovers Passenger’s Lost Mobile Phone

by kalpa News
August 31, 2026
0

Kalpa Media House  |  Mysuru  | The Railway Protection Force (RPF), Mysuru Division, has demonstrated prompt action and vigilance by...

Read moreDetails
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL