ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಸೊರಬ: ಮಣಿಪಾಲ್ ಆರೋಗ್ಯ ಕಾರ್ಡ್ ಯೋಜನೆಯ 20ನೆಯ ವರ್ಷದ ಅಂಗವಾಗಿ ಹಲವು ಹೊಸ ಸೇವೆಗಳನ್ನು ಪರಿಚಯಿಸಲಾಗುತ್ತಿದೆ ಎಂದು ಮಣಿಪಾಲದ ಕಸ್ತೂರಬಾ ಆಸ್ಪತ್ರೆಯ ವ್ಯವಸ್ಥಾಪಕ ಮೋಹನ್ ಶೆಟ್ಟಿ ಹೇಳಿದರು.
ಪಟ್ಟಣದ ಸೆಂಟ್ ಮಿಲಾಗ್ರಿಸ್ ಸೌಹಾರ್ದ ಬ್ಯಾಂಕ್‌ನಲ್ಲಿ ಇಂದು ತಾಲೂಕು ಕಾರ್ಯನಿರತರ ಪತ್ರಕರ್ತರಿಗೆ ಮಣಿಪಾಲ ಆರೋಗ್ಯ ಸ್ಟಾರ್ಟ್ ಕಾರ್ಡ್ ವಿತರಿಸಿ ಅವರು ಮಾತನಾಡಿದರು.
ಸಾರ್ವಜನಿಕರಿಗೆ ರಿಯಾಯ್ತಿ ದರದಲ್ಲಿ ಗುಣಮಟ್ಟದ ಚಿಕಿತ್ಸೆ ಒದಗಿಸಲು ನಿಟ್ಟಿನಲ್ಲಿ ಮಣಿಪಾಲ ಆಸ್ಪತ್ರೆ ಹಲವು ಸೇವೆಗಳನ್ನು ಒದಗಿಸುತ್ತಿದೆ. ಈ ಬಾರಿ ಸರಳ ಹಾಗೂ ಪೂರ್ವ ಸಂಖ್ಯಾ ಮುದ್ರಿತ ಸ್ಟಾರ್ಟ್ ಕಾರ್ಡ್ ಪರಿಚಯಿಸಲಾಗುತ್ತಿದ್ದು, ಸ್ಥಳದಲ್ಲಿಯೇ ಕಾರ್ಡ್ ವಿತರಿಸಲಾಗುವುದು. ಒಂದು ಮತ್ತು ಎರಡು ವರ್ಷದ ಯೋಜನೆಯ ಕಾರ್ಡ್ ಹೊಂದಿರುವವರು ಮಣಿಪಾಲ, ಉಡುಪಿ, ಕಾರ್ಕಳ, ಮಂಗಳೂರು, ಗೋವಾ ಮತ್ತು ಕಟೀಲಿನಲ್ಲಿರುವ ಆಸ್ಪತ್ರೆಗಳಲ್ಲಿ ವೈದ್ಯಕೀಯ ಮತ್ತು ದಂತ ಸೇವೆಗಳನ್ನು ಪಡೆಯುಬಹುದಾಗಿದೆ ಎಂದರು.
ಕೊರೋನಾ ಲಾಕ್ ಡೌನ್, ಮತ್ತಿತರ ಸಮಸ್ಯೆಗಳಿಂದ ಕಾರ್ಡ್ ವಿತರಿಸುವ ಯೋಜನೆಯನ್ನು ನ. 30ರವರೆಗೆ ವಿಸ್ತರಿಸಲಾಗಿದೆ. ಮಣಿಪಾಲ ಆಸ್ಪತ್ರೆಗೆ ಚಿಕಿತ್ಸೆಗೆ ತೆರಳುವವರು ಪಟ್ಟಣದ ಸೈಂಟ್ ಮಿಲಾಗ್ರಿಸ್ ಸೌಹಾರ್ದದಲ್ಲಿ ನೊಂದಾಯಿಸಲು ಅವಕಾಶವಿದೆ ಎಂದರು.
ನೋಂದಣಿಗಾಗಿ ಸಾರ್ವಜನಿಕರು ಸೈಂಟ್ ಮಿಲಾಗ್ರಿಸ್ ಸೌಹಾರ್ದ(9538869791), ಕೃಷಿಕ ಸೌಹಾರ್ದ(9880958725) ವಿಪ್ರ ಸೌಹಾರ್ದ(7760957911) ಆನವಟ್ಟಿ ಪುಟ್ಟಪ್ಪ ಗೌಡ( 9448721782), ಪವನ ಕುಮಾರ್(9731331131)ಗೆ ಸಂಪರ್ಕಿಸಬಹುದಾಗಿದೆ.
ಈ ಸಂದರ್ಭದಲ್ಲಿ ಕಸ್ತೂರಬಾ ಆಸ್ಪತ್ರೆ ಮಣಿಪಾಲದ ಮಾರುಕಟ್ಟೆ ವಿಭಾಗದ ಪ್ರತಿನಿಧಿ ಅನಿಲ್ ನಾಯ್ಕ್, ಸೈಂಟ್ ಮಿಲಾಗ್ರಿಸ್ ಸೌಹಾರ್ದದ ವ್ಯವಸ್ಥಾಪಕ ಜಿ. ನವೀನ್, ಸಿಬ್ಬಂದಿ ಮಂಜುನಾಥ ಎಸ್ ಶೇಟ್, ಕಿರಣ್ ಇತರರಿದರು.
(ವರದಿ: ಮಧುರಾಮ್, ಸೊರಬ)
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news










Discussion about this post