ಕಲ್ಪ ಮೀಡಿಯಾ ಹೌಸ್ | ಸೊರಬ |
ಸಹಕಾರ ಬ್ಯಾಂಕ್‌ಗಳು ರೈತರಿಗೆ ಅನುಕೂಲವನ್ನು ಕಲ್ಪಿಸುತ್ತಿದ್ದು, ಸಾಲ ಪಡೆದ ಸದಸ್ಯರು ಸಕಾಲದಲ್ಲಿ ಮರುಪಾವತಿ ಮಾಡಬೇಕು ಎಂದು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ಅಧ್ಯಕ್ಷ ನಾಗರಾಜಗೌಡ ಚಿಕ್ಕಾವಲಿ ಹೇಳಿದರು.
ಬುಧವಾರ ಪಟ್ಟಣದ ಹೊಸಪೇಟೆ ಬಡಾವಣೆಯ ಗಿರಿಜಾ ಶಂಕರ ಸಭಾಭವನದಲ್ಲಿ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್‌ನ 2024-25ನೇ ಸಾಲಿನ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಬ್ಯಾಂಕ್‌ನಲ್ಲಿ 5890 ಸದಸ್ಯರಿದ್ದು, ವರದಿ ಸಾಲಿನಲ್ಲಿ 114 ಜನ ಹೊಸದಾಗಿ ಸೇರ್ಪಡೆಯಾಗಿದ್ದಾರೆ. ಸದಸ್ಯರಿಗೆ ನೀಡಿದ ಸಾಲದಲ್ಲಿ ಶೇ. 76ರಷ್ಟು ಸಕಾಲದಲ್ಲಿ ವಸೂಲಾತಿಯಾಗಿರುತ್ತದೆ. ಬ್ಯಾಂಕ್‌ನ ನೂತನ ಕಟ್ಟಡ ನಿರ್ಮಾಣಕ್ಕೆ ನಿವೇಶನ ಗುರುತಿಸಲಾಗಿದೆ. ಈ ಬಗ್ಗೆ ಸಚಿವರ ಗಮನಕ್ಕೆ ತಂದು ನೂತನ ಕಟ್ಟಡ ನಿರ್ಮಾಣಕ್ಕೆ ಅಗತ್ಯವಿರುದ ಸಹಕಾರ ಪಡೆಯಲಾಗುವುದು ಜೊತೆಗೆ ಸದಸ್ಯರು ಸಹ ಕೈ ಜೋಡಿಸಬೇಕಿದೆ. ಮುಂದಿನ ದಿನಗಳಲ್ಲಿ ಸಂಘವನ್ನು ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ಕ್ರಮ ವಹಿಸಲಾಗುವುದು ಎಂದರು.

ಸಭೆಯಲ್ಲಿ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಹೆಚ್ಚು ಅಂಕಗಳಿಸಿದ ಷೇರುದಾರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಬ್ಯಾಂಕ್‌ನ ವ್ಯವಸ್ಥಾಪಕ ಸತೀಶ್ ಭಂಡಾರಿ ವರದಿ ವಾಚಿಸಿದರು.
ಬ್ಯಾಂಕ್‌ನ ಉಪಾಧ್ಯಕ್ಷ ಓಬಿ. ಯುವರಾಜ, ಎಚ್. ದಾನಪ್ಪ, ಪರಸಪ್ಪ, ಸಿ. ವಿಜೇಂದ್ರ ಕುಮಾರ್, ವೀರೇಂದ್ರ ಕುಮಾರ್, ಶಾರದಾ, ಸೀತಮ್ಮ, ಗುಡ್ಡಪ್ಪ, ಜಿ. ರಾಜಶೇಖರ್, ಜೆ. ಮಿಥುನ್, ಬಿ.ಸಿ. ಪ್ರದೀಪ ಕುಮಾರ್, ರತ್ನಮ್ಮ, ಸಿಬ್ಬಂದಿ ಮಂಜುನಾಥ ಸ್ವಾಮಿ, ಡಿ.ಟಿ. ಸುಬ್ರಹ್ಮಣ್ಯ, ಗಣಪತಿ ಸೇರಿದಂತೆ ಇತರರಿದ್ದರು.
(ವರದಿ: ಮಧುರಾಮ್, ಸೊರಬ)
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

























Discussion about this post