ಕಲ್ಪ ಮೀಡಿಯಾ ಹೌಸ್ | ಸೊರಬ |
ಶಿವಮೊಗ್ಗ ಜಿಲ್ಲೆಯ ಸೊರಬದಲ್ಲಿ ಕೆ.ಎಸ್.ಆರ್.ಟಿ.ಸಿ ಸಂಸ್ಥೆಯ ಅಶ್ವಮೇಧ ಬಸ್‌ಗೆ ಇಂದು ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ #Minister Madhu Bangarappa ಹಸಿರು ನಿಶಾನೆ ತೋರುವ ಮೂಲಕ ನೂತನ ಬಸ್ ಸೇವೆಗೆ ಚಾಲನೆ ನೀಡಿದರು.
ಈ ಸೇವೆಯು ಸಾಗರ – ಸೊರಬ – ಜಡೆ ಮಾರ್ಗವಾಗಿ ಹಾನಗಲ್ ತಲುಪಲಿದ್ದು, ಹತ್ತು ಸಾವಿರಕ್ಕೂ ಅಧಿಕ ಪ್ರಯಾಣಿಕರಿಗೆ ಅನುಕೂಲವಾಗಲಿದೆ.
Also read: ಈಶ್ವರಪ್ಪ ಅವರದು ಆದರ್ಶ ಕುಟುಂಬ | ಕಾಂತೇಶ್ ಯುವರಾಜ | ಪಟ್ಟಾಭಿಷೇಕ ನೆನಪಿಸಿದ ಜನ್ಮದಿನ ಸಂಭ್ರಮ
ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಸಾರ್ವಜನಿಕರ ಅಗತ್ಯಕ್ಕೆ ಅನುಗುಣವಾಗಿ ಹೊಸ ಮಾರ್ಗವನ್ನು ಪ್ರಾರಂಭಿಸಲಾಗಿದೆ. ಈ ಸೇವೆಯ ಸದುಪಯೋಗವನ್ನು ಜನತೆ ಪಡೆದುಕೊಳ್ಳಲಿ ಎಂದು ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ, ಕೆ.ಎಸ್.ಆರ್.ಟಿ.ಸಿ ಅಧಿಕಾರಿಗಳು ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post