ಕಲ್ಪ ಮೀಡಿಯಾ ಹೌಸ್ | ಸೊರಬ |
ಕಾಶಿ ಅತ್ಯಂತ ಪ್ರಾಚೀನ ನಗರವಾಗಿದ್ದು, ಋಗ್ವೇದ, ಸ್ಕಂದ ಪುರಾಣ, ರಾಮಾಯಣ ಮತ್ತು ಮಹಾಭಾರತ ಮತ್ತು ಮತ್ಸ್ಯ ಪುರಾಣ ಸೇರಿದಂತೆ ಅನೇಕ ಗ್ರಂಥಗಳಲ್ಲಿ ಉಲ್ಲೇಖ ಕಂಡುಬರುತ್ತದೆ. ನರೇಂದ್ರ ಮೋದಿಯವರು ಭಾರತದ ಶ್ರೇಷ್ಠ ಪ್ರಾಚೀನ ಸಂಸ್ಕೃತಿಯನ್ನು ಮರುಸ್ಥಾಪಿಸುವ ಕನಸು ಕಂಡಿದ್ದಾರೆ. ಹಿಂದೂಗಳ ಪವಿತ್ರ ಧಾರ್ಮಿಕ ಕ್ಷೇತ್ರವಾದ ಕಾಶಿ ವಿಶ್ವನಾಥನ ಸನ್ನಿಧಿಯಲ್ಲಿ ಪ್ರಧಾನಿಗಳು ಹಮ್ಮಿಕೊಂಡ ಅಭಿವೃದ್ಧಿ ಕಾರ್ಯ ಸಮಸ್ತ ಭಾರತೀಯರು ಸಹ ಹೆಮ್ಮೆ ಪಡುವ ವಿಷಯ ಎಂದು ಶಾಂತಾಪುರ ಮಠದ ಶ್ರೀ ಶಿವಾನಂದ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಅವರು ಕಾಶಿ ವಿಶ್ವನಾಥನ ಕ್ಷೇತ್ರದ ಪುನರುಜ್ಜೀವನಕ್ಕಾಗಿ ಕೈಗೊಂಡ ಕಾಶಿ ವಿಶ್ವನಾಥ ಕಾರಿಡಾರ್ ಪ್ರಾಜೆಕ್ಟ್ ದಿವ್ಯ ಕಾಶಿ ಭವ್ಯ ಕಾಶಿ ಕಾರ್ಯಕ್ರಮದ ಅಂಗವಾಗಿ ಸೋಮವಾರ ಪಟ್ಟಣದ ಮುರುಘಾಮಠದಲ್ಲಿ ತಾಲೂಕು ಬಿಜೆಪಿಯಿಂದ ಹಮ್ಮಿಕೊಂಡ ನೇರ ಪ್ರಸಾರವನ್ನು ಉದ್ಘಾಟಿಸಿ ಮಾತನಾಡಿದರು.

ದೇಶದ ಅನೇಕ ಭಾಗಗಳಲ್ಲಿ ಹಿಂದೂಗಳ ಪವಿತ್ರ ಕ್ಷೇತ್ರಗಳು ಅಭಿವೃದ್ಧಿಯಾಗಬೇಕಿದೆ. ಪ್ರಧಾನಿ ಅವರು ಧಾರ್ಮಿಕ ಕ್ಷೇತ್ರಗಳ ಬಗ್ಗೆ ಸಾಕಷ್ಟು ಒಲವನ್ನು ಹೊಂದಿದ್ದಾರೆ. ಈ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಮತ್ತಷ್ಟು ಕ್ಷೇತ್ರಗಳು ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಅಭಿವೃದ್ಧಿಯಾಗಲಿ ಎಂದು ಆಶಿಸಿದರು.

ಬಿಜೆಪಿ ತಾಲೂಕು ಘಟಕದ ಅಧ್ಯಕ್ಷ ಪ್ರಕಾಶ ತಲಕಾಲಕೊಪ್ಪ, ಪ್ರಧಾನ ಕಾರ್ಯದರ್ಶಿ ಶಿವಕುಮಾರ ಕಡಸೂರು, ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಜಿಲ್ಲಾಧ್ಯಕ್ಷ ಸಿ.ಪಿ. ಈರೇಶಗೌಡ, ತಾಲೂಕು ಅಧ್ಯಕ್ಷ ಸಂದೀಪಗೌಡ, ಪುರಸಭೆ ಮಾಜಿ ಅಧ್ಯಕ್ಷ ಹಾಗೂ ಸದಸ್ಯ ಎಂ.ಡಿ. ಉಮೇಶ್, ಎಪಿಎಂಸಿ ಮಾಜಿ ಅಧ್ಯಕ್ಷ ನಾಗರಾಜಗೌಡ ಜಡೆ, ಗ್ರಾಪಂ ಸದಸ್ಯರಾದ ಅಮಿತ್ ಗೌಡ, ನಾಗರಾಜ ಕಲ್ಕೊಪ್ಪ, ಸಮಾಜ ಸೇವಕ ನಾಗರಾಜ ಗುತ್ತಿ, ಚಂದ್ರಶೇಖರ ನಿಜಗುಣ, ಅಶೋಕ್ ಶೇಟ್, ಸದಾನಂದಗೌಡ ಕಡಸೂರು, ಸುಧಾ ಶಿವಪ್ರಸಾದ್, ಶಿವಕುಮಾರ್ ಆಟೋ ಸೇರಿದಂತೆ ಇತರರಿದ್ದರು.

ವರದಿ: ಮಧುರಾಮ್, ಸೊರಬ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
















