ಕಲ್ಪ ಮೀಡಿಯಾ ಹೌಸ್ | ಸೊರಬ |
ಜನಸಂಖ್ಯೆಯನ್ನು ಕಟ್ಟುನಿಟ್ಟಾಗಿ ನಿಯಂತ್ರಣ ಮಾಡದೇ ಇದ್ದರೆ ಪ್ರಕೃತಿಯೇ ಮುಂದಾಗಿ ಸಾಂಕ್ರಾಮಿಕ ರೋಗಗಳು ಬಂದು ಜನಸಂಖ್ಯೆಯನ್ನು ನಿಯಂತ್ರಣ #Population Control ಮಾಡುತ್ತದೆ ಎಂದು ಹಿರಿಯ ವಕೀಲ ವೈ.ಜಿ. ಪುಟ್ಟಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ.
ಆರೋಗ್ಯ ಇಲಾಖೆ, ತಾಲೂಕು ಆಡಳಿತ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮತ್ತು ಎಚ್’ಪಿಅರ್ ನರ್ಸಿಂಗ್ ಕಾಲೇಜು ಇವರ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಜನಸಂಖ್ಯೆ ದಿನಾಚರಣೆಯಲ್ಲಿ ಅವರು ಉಪನ್ಯಾಸ ನೀಡಿದರು.
ಜನಸಂಖ್ಯೆ ಸ್ಫೋಟದಿಂದ ದೇಶ ಆರ್ಥಿಕ ಸಂಕಷ್ಟ ಎದುರಿಸಬೇಕಾಗುತ್ತದೆ ಆಡಳಿತ ನಡೆಸುವಂತಹ ಸರ್ಕಾರಗಳು ಜನಸಂಖ್ಯೆ ನಿಯಂತ್ರಣದ ಬಗ್ಗೆ ಕಟ್ಟು ನಿಟ್ಟಿನ ಕಾನೂನು ಜಾರಿ ಮಾಡುವ ಅವಶ್ಯಕತೆ ಇದೆ. ಜನಸಂಖ್ಯೆ ನಿಯಂತ್ರಿಸಲು ಪ್ರಕೃತಿಯೇ ಮುಂದಾಗಿ ಸಾಂಕ್ರಾಮಿಕ ರೋಗಗಳು ಬಂದು ಜನಸಂಖ್ಯೆ ನಿಯಂತ್ರಣ ಮಾಡುತ್ತಿದೆ ಎಂದರು.
ಜನಸಂಖ್ಯಾ ನಿಯಂತ್ರಣದ ಬಗ್ಗೆ ಇತರೆ ದೇಶಗಳಂತೆ ಕಠಿಣವಾದ ಕಾನೂನು ನಮ್ಮ ದೇಶದಲ್ಲಿ ಜಾರಿಯಾದಾಗ ಮಾತ್ರ ಜನಸಂಖ್ಯೆ ನಿಯಂತ್ರಿಸಲು ಸಾಧ್ಯ ಎಂದರು..
ಮಹಿಳೆಯರಿಗೆ ಕಡ್ಡಾಯವಾಗಿ ಶಿಕ್ಷಣ ಕೊಡಿಸುವುದರ ಜೊತೆಗೆ ಅವರನ್ನು ಮುಖ್ಯವಾಹಿನಿಗೆ ತಂದು ಜನಸಂಖ್ಯಾ ನಿಯಂತ್ರಣದ ಬಗ್ಗೆ ಜಾಗೃತಿ ಮೂಡಿಸುವುದರ ಜೊತೆಗೆ ಹೆಚ್ಚಿನ ಸ್ಥಾನ ಮಾನ ದೊರೆಯುವಂತೆ ನೋಡಿಕೊಂಡರೆ ಜನಸಂಖ್ಯೆ ನಿಯಂತ್ರಣ ಸಾಧ್ಯವಿದೆ ಎಂದು ಪ್ರತಿಪಾದಿಸಿದರು.
Also read: ಅರೆಹದ ಗ್ರಾಮಲೆಕ್ಕಾಧಿಕಾರಿ ಆತ್ಮಹತ್ಯೆಗೆ ಯತ್ನ | ಸಾಗರ ತಹಶೀಲ್ದಾರ್ ಹೆಸರು ಬರೆದಿಟ್ಟಿದ್ದು ಏಕೆ?
ತಾಲೂಕು ವೈದ್ಯಾಧಿಕಾರಿ ಡಾ. ವಿನಯ ಪಾಟೀಲ್ ಮಾತನಾಡಿ ಸರ್ಕಾರ ಜಾರಿಗೆ ತಂದಿರುವ ಕುಟುಂಬ ನಿಯಂತ್ರಣ ಯೋಜನೆಯನ್ನು ಪ್ರತಿಯೊಬ್ಬರೂ ಪಾಲನೆ ಮಾಡುವುದರಿಂದ ಜನಸಂಖ್ಯೆ ನಿಯಂತ್ರಿಸಬಹುದಾಗಿದೆ ಎಂದು ಹೇಳಿದರು.
ಡೆಂಗ್ಯೂ ನಿಯಂತ್ರಣದಲ್ಲಿ ಸಾರ್ವಜನಿಕರ ಪಾತ್ರ ಮಹತ್ವದ ಆಗಿದ್ದು, ಮನೆಯ ಸುತ್ತಮುತ್ತಲು ಸ್ವಚ್ಛತೆಯನ್ನು ಕಾಪಾಡಿಕೊಳ್ಳುವುದು, ಸೊಳ್ಳೆಗಳ ನಿಯಂತ್ರಣದ ಬಗ್ಗೆ ಜಾಗೃತಿ ಅತಿ ಅವಶ್ಯಕವಾಗಿದ್ದು ಸ್ವಚ್ಛತೆ ಮತ್ತು ನೀರು ನಿಲ್ಲದ ಹಾಗೆ ನೋಡಿಕೊಳ್ಳುವುದರಿಂದ ಸೊಳ್ಳೆಗಳನ್ನು ನಿಯಂತ್ರಣ ಮಾಡಬಹುದು ಎಂದು ತಿಳಿಸಿದರು.
ಸಾರ್ವಜನಿಕ ಆಸ್ಪತ್ರೆ ಆಡಳಿತಾಧಿಕಾರಿ ಡಾ.ಪ್ರಭು ಸಾಹುಕಾರ್ ಮಾತನಾಡಿ, ಕುಟುಂಬದಲ್ಲಿ ಎರಡು ಮಕ್ಕಳನ್ನು ಹೊಂದುವ ಆಪೇಕ್ಷೆಯೊಂದಿಗೆ ಇಲಾಖೆ ಹೊರಡಿಸಿರುವ ಜನಸಂಖ್ಯೆ ನಿಯಂತ್ರಣ ಮಾರ್ಗಸೂಚಿಗಳನ್ನು ಪಾಲಿಸುವ ಅಗತ್ಯವಿದೆ ಎಂದರು.
ಇದಕ್ಕೂ ಮೊದಲು ಆಶಾ ಕಾರ್ಯಕರ್ತೆಯರು, ನರ್ಸಿಂಗ್ ವಿದ್ಯಾರ್ಥಿಗಳು ಜನಸಂಖ್ಯಾ ನಿಯಂತ್ರಣದ ಕುರಿತು ಪಟ್ಟಣದ ಪ್ರಮುಖ ಬೀದಿಯಲ್ಲಿ ಜಾಥಾ ನಡೆಸಿದರು.
ತಹಶೀಲ್ದಾರ್ ಮಂಜುಳಾ ಹೆಗಡಾಳ್, ಪುರಸಭೆ ಮುಖ್ಯಾಧಿಕಾರಿ ಬಾಲಚಂದ್ರಪ್ಪ, ಶ್ರೀರಾಮ, ಪದ್ಮಾವತಿ, ಗಾಯತ್ರಿ, ಯಶವಂತರಾಜ್, ಶಬ್ಬೀರ್ ಖಾನ್, ಆನಂದ, ಸೇರಿದಂತೆ ಆಶಾ ಕಾರ್ಯಕರ್ತೆಯರು ಮತ್ತು ಎಚ್’ಪಿಆರ್ ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳು ಇದ್ದರು
(ವರದಿ: ಮಧುರಾಮ್, ಸೊರಬ)
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post