No Result
View All Result
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth
English Articles

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

by kalpa News
July 2, 2026
0

Kalpa Media House  |  Mumbai | Q1 FY27 sales in the domestic & international markets stood at 1,08,488 units, compared...

Read moreDetails
ABB Innovation Center (AIC) brings together 1,000+ innovators from 37 countries to accelerate industrial AI

ABB Innovation Center (AIC) brings together 1,000+ innovators from 37 countries to accelerate industrial AI

July 2, 2026
Memorable Concert by Dr Sunder and Smt.J.B.Keerthana

Memorable Concert by Dr Sunder and Smt.J.B.Keerthana

July 2, 2026
Physical Intelligence to Shape India’s Future

Physical Intelligence to Shape India’s Future

July 2, 2026
India marks the beginning of the Physical Intelligence era

MEIL-Analog Pact Ushers in AI-Driven Future

July 2, 2026
  • Advertise With Us
  • Grievances
  • About Us
  • Contact Us
Thursday, July 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸೊರಬ

ಬಿಜೆಪಿಯ ಆಟ ಇನ್ನು ನಡೆಯುವುದಿಲ್ಲ, ಇದಕ್ಕೆ ಬಿಹಾರದ ಬೆಳವಣಿಗೆಯೇ ಸಾಕ್ಷಿ: ಮಧು ಬಂಗಾರಪ್ಪ

ಬಂಗಾರಧಾಮದಲ್ಲಿ ತಾಲೂಕು ಯುವ ಕಾಂಗ್ರೆಸ್ ಹಾಗೂ ಎನ್'ಎಸ್'ಯುಐ ಕಾರ್ಯಕರ್ತರ ಸಭೆ

kalpa News by kalpa News
August 17, 2022
in ಸೊರಬ
0
ಬಿಜೆಪಿಯ ಆಟ ಇನ್ನು ನಡೆಯುವುದಿಲ್ಲ, ಇದಕ್ಕೆ ಬಿಹಾರದ ಬೆಳವಣಿಗೆಯೇ ಸಾಕ್ಷಿ: ಮಧು ಬಂಗಾರಪ್ಪ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಸೊರಬ  |

ದೇಶದಲ್ಲಿ ಕೋಮುಭಾವನೆಗಳನ್ನು ಕೆರಳಿಸಿ ಅಧಿಕಾರ ನಡೆಸುತ್ತಿರುವ ಬಿಜೆಪಿಯು ಆಟಗಳು ಇನ್ನು ಮುಂದೆ ನಡೆಯುವುದಿಲ್ಲ ಎನ್ನುವುದಕ್ಕೆ ಬಿಹಾರದಲ್ಲಿನ ಬೆಳವಣಿಗೆಗಳೇ ಸಾಕ್ಷಿ ಎಂದು ಕೆಪಿಸಿಸಿ ಉಪಾಧ್ಯಕ್ಷ ಮಧು ಬಂಗಾರಪ್ಪ ಹೇಳಿದ್ದಾರೆ.

ಬಂಗಾರಧಾಮದಲ್ಲಿ ತಾಲೂಕು ಯುವ ಕಾಂಗ್ರೆಸ್ ಹಾಗೂ ಎನ್’ಎಸ್’ಯುಐ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ದೇಶದಾದ್ಯಂತ ಬಿಜೆಪಿ ಜನರ ಭಾವನೆ ಹಾಗೂ ಧರ್ಮಗಳ ನಡುವೆ ಕೆರಳಿಸಿ ಅಧಿಕಾರಕ್ಕೆ ಬಂದಿದೆ. ಶಾಶ್ವತವಾಗಿ ನಾವು ಅಧಿಕಾರದಲ್ಲಿ ಇರುತ್ತೇವೆ ಎಂಬ ಭ್ರಮೆಯಲ್ಲಿ ಇದ್ದಾರೆ. ಆದರೆ, ಈಗ ಇವರ ಯೋಗ್ಯತೆ ಜನರಿಗೆ ತಿಳಿದಿದ್ದು, ಜನರು ಪ್ರಜ್ಞಾವಂತರಾಗಿದ್ದಾರೆ. ಹೀಗಾಗಿ, ಇವರ ಆಟಗಳು ಇನ್ನು ಮುಂದೆ ನಡೆಯುವುದಿಲ್ಲ. ಬಿಹಾರದಲ್ಲಿ ನಡೆದಿರುವ ರಾಜಕೀಯ ಬೆಳವಣಿಗೆಯೇ ಇದಕ್ಕೆ ಸಾಕ್ಷಿ ಎಂದು ಕಟಕಿಯಾಡಿದರು.
ನಮ್ಮ ದೇಶದಲ್ಲಿ ಹುಟ್ಟಿದ ಪ್ರತಿಯೊಬ್ಬರೂ ಭಾರತೀಯರೇ ಆಗಿದ್ದು, ಹಿಂದೂ, ಮುಸ್ಲಿಂ, ಕ್ರೈಸ್ತರು ಸೇರಿದಂತೆ ಎಲ್ಲಾ ಜಾತಿ-ಧರ್ಮಗಳ ಮಹನೀಯರ ಹೋರಾಟದ ಫಲವಾಗಿ ಭಾರತಕ್ಕೆ ಸ್ವಾತಂತ್ರ ಲಭಿಸಿದೆ. ಮಹಾತ್ಮಾ ಗಾಂಧೀಜಿಯವರಿಂದ ಹಿಡಿದು ಮಾಜಿ ಪ್ರಧಾನಿ ದಿ. ರಾಜೀವ್ ಗಾಂಧಿಯವರೆಗೆ ದೇಶದ ಸ್ವಾತಂತ್ರ ಮತ್ತು ಅಭಿವೃದ್ಧಿಗಾಗಿ ಕಾಂಗ್ರೆಸ್‌ನ ಕೊಡುಗೆ ಅನನ್ಯವಾಗಿದ್ದರೆ, ಬಿಜೆಪಿಯ ಕೊಡುಗೆ ಶೂನ್ಯವಾಗಿದೆ ಎಂದು ಚಾಟಿ ಬೀಸಿದರು.

ಅಂದು ವ್ಯಾಪಾರಕ್ಕೆಂದು ಭಾರತಕ್ಕೆ ಬಂದ ಈಸ್ಟ್ ಇಂಡಿಯಾ ಕಂಪನಿ ದೇಶವನ್ನು ಗುಲಾಮಗಿರಿಗೆ ತಳ್ಳಿತು. ಆದರೆ ಇಂದು ಉದ್ಯಮಿಗಳಾದ ಅಂಬಾನಿ, ಅದಾನಿ ದೇಶವನ್ನು ತಮ್ಮ ಕಪಿಮುಷ್ಠಿಯಟ್ಟುಕೊಂಡು ಸರ್ಕಾರವನ್ನು ನಡೆಸುತ್ತಿದ್ದಾರೆ. ಇಂಥವರಿAದ ದೇಶವನ್ನು ಬಿಡಿಸಿಕೊಳ್ಳಬೇಕಿದೆ. ಆರ್ಥಿಕವಾಗಿ ದಿವಾಳಿಯಾಗಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಆಹಾರ ಪದಾರ್ಥ ಸೇರಿದಂತೆ ಎಲ್ಲಾ ಅಗತ್ಯ ವಸ್ತುಗಳ ಮೇಲೆ ಜಿಎಸ್‌ಟಿ ಹಾಕುವ ಮೂಲಕ ಬಡವರ ಮೇಲೆ ಪ್ರಹಾರ ನಡೆಸಿದ್ದಾರೆ. ಬೆಲೆ ಏರಿಕೆ ಹಾಗೂ ಜಿಎಸ್‌ಟಿಯಂದಾಗಿ ರೋಸಿ ಹೋಗಿರುವ ಮತದಾರರು ಕಾಂಗ್ರೆಸ್ ಕಡೆ ಮುಖ ಮಾಡಿದ್ದು, ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ ಅಲ್ಲದೇ ತಾವು ಸೊರಬ ಕ್ಷೇತ್ರದಿಂದ ಗೆಲ್ಲುವುದು ನೂರಕ್ಕೆ ನೂರು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಶಾಸಕರು ಸಭೆ ಸಮಾರಂಭಗಳಲ್ಲಿ ಮೂಡಿ, ಮೂಗೂರು ಏತ ನೀರಾವರಿ ಯೋಜನೆಯನ್ನು ತಾವೇ ಅನುಷ್ಠಾನಕ್ಕೆ ತಂದಿರುವುದಾಗಿ ಮಾತನಾಡುತ್ತಿದ್ದಾರೆ. ಆದರೆ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರವಿದ್ದ ಸಂದರ್ಭದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ, ನೀರಾವರಿ ಸಚಿವ ಡಿ.ಕೆ. ಶಿವಕುಮಾರ್ ಅವರ ಮೂಲಕ ಕಚವಿ ಏತ ನೀರಾವರಿಗೆ 16 ಕೋಟಿ ರೂ.ಗಳನ್ನು ಮಂಜೂರು ಮಾಡಿಸಿಕೊಂಡಿದ್ದವನು ನಾನು. ಶಾಸಕರಿಗೆ ಪರ್ಸೆಂಟೇಜ್ ಹಣ ಕೊಡಲಾಗದ ಗುತ್ತಿಗೆದಾರರು ಎಲ್ಲಾ ನೀರಾವರಿ ಯೋಜನೆಗಳನ್ನು ನೆನೆಗುದಿಗೆ ಬೀಳುವಂತೆ ಮಾಡಿದ್ದಾರೆ. ಎಸ್.ಎಂ. ಕೃಷ್ಣ ಸಚಿವ ಸಂಪುಟದಲ್ಲಿ ಎಸ್. ಬಂಗಾರಪ್ಪನವರ ಮೂಲಕ ನೀರಾವರಿ ಸಚಿವರಾಗಿದ್ದ ಈಗಿನ ಶಾಸಕರು ತಾಲೂಕಿನಲ್ಲಿರುವ ಯಾವುದೇ ಕೆರಗಳನ್ನು ಅಭಿವೃದ್ಧಿ ಮಾಡದೇ ನಿರ್ಲಕ್ಷ ಧೋರಣೆ ಅನುಸರಿಸಿದ್ದರು. ಈಗ ತಾವು ಮಂಜೂರು ಮಾಡಿಸಿದ್ದ ನೀರಾವರಿ ಯೋಜನೆಗಳಿಗೆ ತಮ್ಮವೆಂದು ಬಿಂಬಿಸಿಕೊಳ್ಳುತ್ತಿದ್ದಾರೆ ಎಂದು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಎನ್’ಎಸ್’ಯುಐ ಘಟಕದ ಅಧ್ಯಕ್ಷ ಅಭಿಷೇಕ್ ಮಾತನಾಡಿ, ಭಾರತ ಸ್ವಾತಂತ್ರ ಸಂಗ್ರಾಮದಲ್ಲಿ ಬಿಜೆಪಿಯ ಪಾತ್ರ ಶೂನ್ಯವಾಗಿದ್ದು, ಬಂಧಿಯಾಗಿದ್ದ ಸಾವರ್ಕರ್ ಜೈಲು ವಾಸಕ್ಕೆ ಹೆದರಿ ಬ್ರಿಟೀಷರಿಗೆ ಕ್ಷಮಾಪಣೆ ಪತ್ರ ಬರೆದುಕೊಟ್ಟಿದ್ದರು. ಇಂತಹವರನ್ನು ಬಿಜೆಪಿ ವೀರ ಎಂದು ಬಿಂಬಿಸುತ್ತಿದೆ ಎಂದು ಹೇಳಿದರು.

ಸೊರಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಣ್ಣಪ್ಪ ಹಾಲಘಟ್ಟ, ಎನ್’ಎಸ್’ಯುಐ ಪದಾಧಿಕಾರಿಗಳಾದ ಸಂಜಯ ದೇವತಿಕೊಪ್ಪ, ಯಶೋಧರ ಅಂದವಳ್ಳಿ, ರವಿ ಕೆಸರಿ, ಪಾಂಡು ಕೊಡಕಣಿ, ಸಚಿನ್, ಮಧು, ಸಿದ್ದೇಶ್, ನಂಜುಂಡ ಕಲ್ಲಂಬಿ, ಅನಿಲ್, ಮಂಜು ಹೆಸರಿ, ಅಭಿಷೇಕ್ ಬಿಳವಾಣಿ, ಜಗದೀಶ ಕಕ್ಕರಸಿ, ರಾಘು ಹುಲ್ತಿಕೊಪ್ಪ, ಪ್ರದೀಪ್, ಮಂಜುನಾಥ ಚಿಕ್ಕಶಕುನ ಮುಖಂಡರಾದ ಎಚ್. ಗಣಪತಿ, ನಾಗಪ್ಪ ಮಾಸ್ತರ್, ನಾಗರಾಜ ಚಂದ್ರಗುತ್ತಿ, ಪ್ರಭಾಕರ ಶಿಗ್ಗಾ, ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶಶಿ ಚಿಲನೂರು ಮೊದಲಾದವರು ಹಾಜರಿದ್ದರು.

(ವರದಿ: ಮಧುರಾಮ್, ಸೊರಬ)
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BJPcommunal feelingcongressKannada News WebsiteKPCCLatest News KannadaMadhu BangarappaNSUIShimogaShivamoggaShivamogga NewsSorabaಎನ್’ಎಸ್’ಯುಐಕೆಪಿಸಿಸಿಕೋಮುಭಾವನೆಬಿಜೆಪಿಮಧು ಬಂಗಾರಪ್ಪಸೊರಬ
Share216Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಭದ್ರಾವತಿ: ಚಲಿಸುತ್ತಿದ್ದ ರೈಲಿಗೆ ಡಿಕ್ಕಿ ಹೊಡೆದು ಮಹಿಳೆ ಸಾವು

Next Post

ಸೊರಬದಲ್ಲಿ ಸ್ವಾತಂತ್ರ ಅಮೃತ ಮಹೋತ್ಸವದ ನಿಮಿತ್ತ ಯಕ್ಷಗಾಯನ ವೈಭವ

kalpa News

kalpa News

Next Post
ಸೊರಬದಲ್ಲಿ ಸ್ವಾತಂತ್ರ ಅಮೃತ ಮಹೋತ್ಸವದ ನಿಮಿತ್ತ ಯಕ್ಷಗಾಯನ ವೈಭವ

ಸೊರಬದಲ್ಲಿ ಸ್ವಾತಂತ್ರ ಅಮೃತ ಮಹೋತ್ಸವದ ನಿಮಿತ್ತ ಯಕ್ಷಗಾಯನ ವೈಭವ

Leave a Reply Cancel reply

Your email address will not be published. Required fields are marked *

No Result
View All Result
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth
English Articles

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

by kalpa News
July 2, 2026
0

Kalpa Media House  |  Mumbai | Q1 FY27 sales in the domestic & international markets stood at 1,08,488 units, compared...

Read moreDetails
ABB Innovation Center (AIC) brings together 1,000+ innovators from 37 countries to accelerate industrial AI

ABB Innovation Center (AIC) brings together 1,000+ innovators from 37 countries to accelerate industrial AI

July 2, 2026
Memorable Concert by Dr Sunder and Smt.J.B.Keerthana

Memorable Concert by Dr Sunder and Smt.J.B.Keerthana

July 2, 2026
Physical Intelligence to Shape India’s Future

Physical Intelligence to Shape India’s Future

July 2, 2026
India marks the beginning of the Physical Intelligence era

MEIL-Analog Pact Ushers in AI-Driven Future

July 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!