ಕಲ್ಪ ಮೀಡಿಯಾ ಹೌಸ್ | ಸೊರಬ |
ಇಂದಿನ ಪತ್ರಕರ್ತರಿಗೆ ಮಾದರಿಯಾಗುವ ರೀತಿಯಲ್ಲಿ ಪ್ರಮಾಣಿಕತೆ ಹಾಗೂ ನಿಷ್ಠೆಯಿಂದ ಕರ್ತವ್ಯ ನಿರ್ವಹಿಸಿರುವ ಪತ್ರಕರ್ತ ಎಚ್.ಕೆ.ಬಿ. ಸ್ವಾಮಿ ಅವರನ್ನು ಸಂತೋಷ ಹಾಗೂ ತೃಪ್ತಿದಾಯಕ ವಿಚಾರವಾಗಿದೆ ಎಂದು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಅಧ್ಯಕ್ಷ ಜೆ.ಎಸ್. ನಾಗರಾಜ್ ಜೈನ್ ಹೇಳಿದ್ದಾರೆ.
ಪಟ್ಟಣದ ಪತ್ರಿಕಾ ಭವನದಲ್ಲಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಹಮ್ಮಿಕೊಂಡ ಪತ್ರಕರ್ತ ಎಚ್.ಕೆ.ಬಿ. ಸ್ವಾಮಿ ಅವರಿಗೆ ಅಭಿನಂದನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸುಮಾರು 22 ವರ್ಷಗಳಿಂದ ಸ್ವಾಮಿ ಅವರು ಪತ್ರಿಕೋದ್ಯಮ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ವಸ್ತು ನಿಷ್ಟ ವರದಿ, ಗ್ರಾಮೀಣ ಭಾಗದ ನೂರಾರು ಸಮಸ್ಯೆಗಳನ್ನು ವಿಶೇಷ ವರದಿಗಳ ಮೂಲಕ ಬೆಳಕು ಚೆಲ್ಲುವ ಕೆಲಸ ಮಾಡಿ, ಆಡಳಿತ ಯಂತ್ರ ಎಚ್ಚೆತ್ತುಕೊಳ್ಳುವಂತೆ ಮಾಡಿದ್ದಾರೆ. ವಿದ್ಯಾರ್ಥಿ ಜೀವನದಲ್ಲಿಯೇ ಬರವಣಿಗೆಯನ್ನು ಹವ್ಯಾಸವನ್ನಾಗಿ ರೂಢಿಸಿಕೊಂಡು ಬೆಳೆದಿದ್ದಾರೆ. ಹಿರಿಯ ಮತ್ತು ಕಿರಿಯ ಪತ್ರಕರ್ತರೊಂದಿಗೆ ಅಜಾತಶತ್ರುವಾಗಿರುವ ಸ್ವಾಮಿ ಅವರನ್ನು ತಾಲೂಕು ಆಡಳಿತ ಗುರುತಿಸಿರುವುದು ಸ್ವಾಗತಾರ್ಹ ಎಂದರು.

ಪತ್ರಕರ್ತರ ಸಂಘದ ತಾಲೂಕು ಉಪಾಧ್ಯಕ್ಷ ಮುಹಮ್ಮದ್ ಆರೀಫ್, ಕಾರ್ಯದರ್ಶಿ ಟಿ. ರಾಘವೇಂದ್ರ, ಸಹ ಕಾರ್ಯದರ್ಶಿ ನೋಂಪಿ ಶಂಕರ್, ಪತ್ರಕರ್ತರಾದ ರಾಜೇಂದ್ರ ಜೈನ್, ರಾಘವೇಂದ್ರ ಭಾಪಟ್, ದತ್ತಾ ಸೊರಬ, ಮಧುಕೇಶ್ವರ, ವಿಜಯ ಗೌಳಿ ಸೇರಿದಂತೆ ಮತ್ತಿತರರಿದ್ದರು.
(ವರದಿ: ಮಧುರಾಮ್, ಸೊರಬ)









Discussion about this post