ಕಲ್ಪ ಮೀಡಿಯಾ ಹೌಸ್ | ಸೊರಬ |
ತಾಲೂಕಿನ ಯಾವುದೇ ಗ್ರಾಮಗಳ ಜನರ ಸಮಸ್ಯೆಯಿದ್ದರೂ ನಿಮ್ಮ ನೆರವಿಗೆ ನಾನಿದ್ದೇನೆ. ಚುನಾವಣೆಯಲ್ಲಿ ಸೋತರೂ ಕೂಡ ನಿಮ್ಮ ಸಹಕಾರಕ್ಕೆ ನಾನು ಸದಾ ಸಿದ್ಧ ಎಂದು ಸಮಾಜವಾದಿ ಪಕ್ಷದ ಅಭ್ಯರ್ಥಿ ವಿ.ಜಿ. ಪರಶುರಾಮ್ ಹೇಳಿದರು.
ತಾಲೂಕಿನ ಕಾರ್ಯನಿರತ ಪತ್ರಕರ್ತರ ಸಂಘದ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಮತದಾರರಿಗೆ ಕೃತಜ್ಞತೆ ಸಲ್ಲಿಸಿದರು.
ಚುನಾವಣೆಯ ನಂತರವೂ ಸಹ ಸೊರಬ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಜನರು ತಮ್ಮ ಯಾವುದೇ ಸಮಸ್ಯೆಯಿದ್ದರೂ ನೇರವಾಗಿ ನಮ್ಮನ್ನು ಭೇಟಿ ಮಾಡಬಹುದು. ಯಾವುದೇ ಗ್ರಾಮದ ಸಮಸ್ಯೆ ಕುರಿತು ಅಧಿಕಾರಿಗಳ ಗಮನಕ್ಕೆ ತರುವುದಿದ್ದರೇ, ಅವರೊಂದಿಗೆ ತಾವು ಕೂಡ ಆಗಮಿಸಿ, ಅವರ ಸಮಸ್ಯೆಗಳನ್ನು ಪರಿಹರಿಸಲು ಕೈಜೋಡಿಸುವೆ ಎಂದು ಭರವಸೆ ನೀಡಿದರು.
Also read: ಲೋಕಕಲ್ಯಾಣಾರ್ಥ ಮೇ 17ರಂದು ಸಾಮೂಹಿಕ ರುದ್ರಹೋಮ
ಚುನಾವಣೆ ಸೋತ ಮೇಲೆ ಮತ್ತೆ ಚುನಾವಣೆ ಸಂದರ್ಭದಲ್ಲಿ ಜನರ ಬಳಿ ಬರುವವನು ನಾನಲ್ಲ. ಗೆದ್ದರೂ, ಸೋತರೂ ನಾನು ಜನರೊಂದಿಗೆ ನಿರಂತರ ಸಂಪರ್ಕದಲ್ಲಿರುತ್ತೇನೆ. ಮುಂದಿನ ದಿನಗಳಲ್ಲಿ ಜನರ ಬೇಡಿಕೆಗಳು ಹಾಗೂ ನ್ಯಾಯಕ್ಕಾಗಿ ಎಲ್ಲರೂ ಒಗ್ಗಟ್ಟಿನಿಂದ ಹೋರಾಟ ಮಾಡೋಣ ಎಂದರು.ಚುನಾವಣಾಯಲ್ಲಿ ಪಕ್ಷಕ್ಕಾಗಿ ದುಡಿದ ಎಲ್ಲಾ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಮತದಾರರಿಗೆ ವಿ.ಜಿ. ಪರಶುರಾಮ್ ಅವರು ಪಕ್ಷದ ಪರವಾಗಿ ಮತ್ತು ವೈಯಕ್ತಿಕವಾಗಿ ಅಭಿನಂದನೆ ಸಲ್ಲಿಸಿದರು.
ನೂತನ ಶಾಸಕರಿಗೆ ಸಂಪೂರ್ಣ ಸಹಕಾರ
ಇನ್ನು, ನೂತನವಾಗಿ ಆಯ್ಕೆಯಾದ ಶಾಸಕ ಮಧು ಬಂಗಾರಪ್ಪ ಅವರಿಗೆ ತುಂಬು ಹೃದಯದಿಂದ ಅಭಿನಂದಿಸುತ್ತೇನೆ. ಜನರು ಅವರಿಗೆ ತೀರ್ಪು ನೀಡಿದ್ದಾರೆ. ಅದನ್ನು ಗೌರವಿಸಬೇಕಾದುದು ಎಲ್ಲರ ಕರ್ತವ್ಯವಾಗಿದೆ ಎಂದರು.
ಕ್ಷೇತ್ರದ ಜನರ ಮನಸ್ಸಿನ ಭಾವನೆಯಂತೆ ನೂತನ ಶಾಸಕರು ಅಭಿವೃದ್ಧಿಗೆ ಶ್ರಮಿಸಲಿ. ಕ್ಷೇತ್ರದಲ್ಲಿ ಸಮಗ್ರ ಅಭಿವೃದ್ಧಿ ಕಾರ್ಯಗಳಿಗೆ, ಜನಪರ ಕಾರ್ಯಗಳಿಗೆ ನಮ್ಮ ಪಕ್ಷ ಹಾಗೂ ನಾನು ಸಂಪೂರ್ಣ ಸಹಕಾರ ನೀಡುತ್ತೇವೆ ಎಂದರು.
ಅಧಿಕಾರಿಗಳೂ ಸಹ ತಾಲೂಕು ಕಚೇರಿ ಸೇರಿದಂತೆ ಕ್ಷೇತ್ರದ ಯಾವುದೇ ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರ ಕಂಡುಬAದರೆ ಜನರು ನಮ್ಮ ಗಮನಕ್ಕೆ ತನ್ನಿ. ಇದರ ವಿರುದ್ಧ ತತಕ್ಷಣವೇ ಹೋರಾಡಿ ಜನರ ಪರವಾಗಿ ನಿಲ್ಲುತ್ತೇವೆ ಎಂದರು.
ಈ ಸಂದರ್ಭದಲ್ಲಿ ಪ್ರಮುಖರಾದ ದಿವಾಕರ್ ಬಿಳವಗೊಡು ಇದ್ದರು.
ವರದಿ: ಮಧು ರಾಮ್ ಸೊರಬ ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post