ಕಲ್ಪ ಮೀಡಿಯಾ ಹೌಸ್ | ಸೊರಬ |
ಸೊರಬ ವಿಧಾನಸಭಾ ಕ್ಷೇತ್ರದ ಕುಬಟೂರು ಗ್ರಾಮದ ಮತಗಟ್ಟೆ ಸಂಖ್ಯೆ 31 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಾಜಿ ಶಾಸಕ ಎಸ್. ಮಧು ಬಂಗಾರಪ್ಪ ಕುಟುಂಬ ವರ್ಗದೊಂದಿಗೆ ಮತ ಚಲಾಯಿಸಿದರು.
ನಂತರ ಮಾಧ್ಯಮದೊಂದಿಗೆ ಮಾತನಾಡಿದ ಅವರು ರಾಜ್ಯದಲ್ಲಿ ಈ ಬಾರಿ ಭ್ರಷ್ಟಾಚಾರ ಮುಕ್ತ ಆಡಳಿತ ನಡೆಸುವ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವಾದ ಮಾಡಲಿದ್ದಾರೆ. ಕಳೆದ ಐದು ವರ್ಷಗಳಲ್ಲಿ ಕ್ಷೇತ್ರದ ಶಾಸಕರು ನಡೆಸಿರುವ ಕಾಮಗಾರಿಗಳಲ್ಲಿ ನಡೆದಿರುವ ಭ್ರಷ್ಟಾಚಾರಗಳೇ ಅವರ ಆಡಳಿತದ ವೈಖರಿಗೆ ಹಿಡಿದ ಕೈಗನ್ನಡಿಯಾಗಿದೆ ಎಂದರು.
ಈ ಬಾರಿ ಯುವ ಮತದಾರರು ಹೆಚ್ಚು ಇದ್ದು ಭವ್ಯ ಭಾರತದ ನಿರ್ಮಾಣದಲ್ಲಿ ಮಹತ್ತರ ಪಾತ್ರ ವಹಿಸಲಿದ್ದು ಪ್ರಜಾಪ್ರಭುತ್ವದ ಆಶಯಗಳನ್ನು ಎತ್ತಿ ಹಿಡಿಯಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಪತ್ನಿ ಅನಿತಾ ಮಧು ಬಂಗಾರಪ್ಪ ಹಾಗೂ ನೂರಾರು ಬೆಂಬಲಿಗರು ಇದ್ದರು.
ವರದಿ: ಮಧುರಾಮ್, ಸೊರಬ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post