ಕಲ್ಪ ಮೀಡಿಯಾ ಹೌಸ್ | ಸೊರಬ |
ರಾಜ್ಯದಲ್ಲೇ ಪ್ರಖ್ಯಾತವಾಗಿರುವ ಗುಡವಿ ಪಕ್ಷಿಧಾಮದ ಸುತ್ತಲಿನ ಪ್ರದೇಶದಲ್ಲಿ ಅಕ್ರಮ ಮದ್ಯ ಮಾರಾಟ ನಡೆಯುತ್ತಿದ್ದು,, ಸುತ್ತಮುತ್ತಲು ಅನೈತಿಕ ಚಟುವಟಿಕೆಗಳ ತಾಣವಾಗಿದ್ದು, ಇದನ್ನು ತಡೆಗಟ್ಟಬೇಕು ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರಿಗೆ ಸ್ಥಳೀಯರೊಬ್ಬರು ಮನವಿ ಮಾಡಿದರು.
Also Read: ಸಾರ್ವಜನಿಕರ ಕೆಲಸಗಳು ವಿಳಂಬವಾದರೆ ಕಠಿಣ ಕ್ರಮ: ಅಧಿಕಾರಿಗಳಿಗೆ ಡಿಸಿ ಸೆಲ್ವಮಣಿ ಎಚ್ಚರಿಕೆ
Also Read: ಎಂಎಲ್’ಸಿ ಸ್ಥಾನಕ್ಕೆ ಯೋಗಿ ಆದಿತ್ಯನಾಥ್, ಎಂಪಿ ಸ್ಥಾನಕ್ಕೆ ಅಖಿಲೇಶ್ ರಾಜೀನಾಮೆ
ಪಟ್ಟಣಕ್ಕೆ ಇಂದು ದಿಢೀರ್ ಭೇಟಿ ನೀಡಿದ ಡಿಸಿ ಅವರಿಗೆ ಮೌಖಿಕವಾಗಿ ಮನವಿ ಮಾಡಿದ ಸಾರ್ವಜನಿಕರು, ಗುಡವಿ ಪಕ್ಷಿಧಾಮಕ್ಕೆ ಅಪಾರ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಾರೆ. ಆದರೆ, ಈ ಪ್ರದೇಶದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡಲಾಗುತ್ತಿದೆ. ಅಲ್ಲದೇ, ಅನೈತಿಕ ಚಟುವಟಿಕೆಗಳ ತಾಣವಾಗಿದೆ ಈ ಪ್ರದೇಶ. ಇದರಿಂದ ಸಭ್ಯರು ಇಲ್ಲಿಗೆ ತೆರಳಲು ಮುಜುಗರ ಪಡುವಂತಾಗಿದೆ. ಹೀಗಾಗಿ, ಅಕ್ರಮ ಮದ್ಯ ಮಾರಾಟ ಕೇಂದ್ರಗಳನ್ನು ತೆರವುಗೊಳಿಸುವ ಜೊತೆಯಲ್ಲಿ, ಇಲ್ಲಿ ನಡೆಯುತ್ತಿರುವ ಎಲ್ಲ ರೀತಿಯ ಕೆಟ್ಟ ಚಟುವಟಿಕೆಗಳಿಗೆ ಬ್ರೇಕ್ ಹಾಕಬೇಕು ಎಂದು ಮನವಿ ಮಾಡಿದರು.
ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿಗಳು, ಸಂಬಂಧಿಸಿದ ಅಧಿಕಾರಿಗಳ ಜೊತೆಯಲ್ಲಿ ಚರ್ಚಿಸಿ, ಮಾಹಿತಿ ಪಡೆದು ಸೂಕ್ತ ಕ್ರಮ ಕೈಗೊಳ್ಳಲು ಸೂಚಿಸುತ್ತೇನೆ ಎಂದು ಭರವಸೆ ನೀಡಿದರು.
(ವರದಿ: ಮಧುರಾಮ್, ಸೊರಬ)
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post