No Result
View All Result
Pneumonia or Common Cold The Differece Before Its Too Late!
English Articles

Why pneumonia should never be mistaken for a common cold

by kalpa News
November 16, 2026
0

Learn why pneumonia should never be mistaken for a common cold. Understand the key symptoms, warning signs, health risks and...

Read moreDetails
South Western Railway Jeevan Pramaan 5 Camps Mysuru Division Nov 2026

South Western Railway Announces Jeevan Pramaan 5.0 Camps; Check Dates & Venues

November 4, 2026
Dasara Celebrations at Prasanna Venkateswara Swamy Temple

Resplendent Dasara Celebrations at Prasanna Venkateswara Swamy Temple

November 2, 2026
Cyclone Arnab Effect Jharkhand Alert 15 Dist Heavy Rain

Cyclone Arnab Effect: Jharkhand Braces for Heavy Rain and Winds Up to 60 kmph

October 29, 2026
Bharatanatyam Of Sukti Performance Sampattu Grace Rhythm copy

Grace and Rhythm Mark Sukthi’s Bharatanatyam Performance at Sampattu

October 19, 2026
  • Advertise With Us
  • Grievances
  • About Us
  • Contact Us
Wednesday, November 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸೊರಬ

ಪ್ರಕೃತಿಯ ವಿಚಿತ್ರ ಸೃಷ್ಟಿ: ಸೊರಬದಲ್ಲಿ 8 ಕಾಲು, 3 ಕಿವಿ, 2 ಬಾಲದ ಆಡಿನ ಮರಿ ಜನನ

kalpa News by kalpa News
August 6, 2026
in ಸೊರಬ
0
soraba-rare-goat-born-with-8-legs-3-ears-2-tails
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಸೊರಬ  |

ತಾಲೂಕಿನ ಉದ್ರಿ ಗ್ರಾಮ ಸಮೀಪದ ಉದ್ರಿ ವಡ್ಡಿಗೆರೆ ಗ್ರಾಮದಲ್ಲಿ ಅಪರೂಪದ ಹಾಗೂ ವಿಚಿತ್ರ ದೈಹಿಕ ಲಕ್ಷಣಗಳನ್ನು ಹೊಂದಿದ ಆಡಿನ ಮರಿಯೊಂದು ಬುಧವಾರ ಜನಿಸಿದ್ದು, ಈ ಘಟನೆ ಗ್ರಾಮಸ್ಥರಲ್ಲಿ ತೀವ್ರ ಕುತೂಹಲ ಮತ್ತು ಅಚ್ಚರಿ ಮೂಡಿಸಿದೆ. ಸುದ್ದಿ ತಿಳಿಯುತ್ತಿದ್ದಂತೆಯೇ ಸುತ್ತಮುತ್ತಲಿನ ಗ್ರಾಮಗಳಿಂದಲೂ ಜನರು ಆಗಮಿಸಿ ವಿಚಿತ್ರ ಮರಿಯನ್ನು ಕಣ್ತುಂಬಿಕೊಂಡರು.

ಉದ್ರಿ ವಡ್ಡಿಗೆರೆ ಗ್ರಾಮದ ನಿವಾಸಿಗಳಾದ ಕಾಳಿಂಗಪ್ಪ ಭಾವಿಕಟ್ಟೇರ್ ಹಾಗೂ ಪುಟ್ಟಮ್ಮ ದಂಪತಿ ಕೃಷಿಯೊಂದಿಗೆ ಕುರಿ ಸಾಕಾಣಿಕೆಯನ್ನು ಜೀವನೋಪಾಯವಾಗಿ ನಡೆಸುತ್ತಿದ್ದಾರೆ. ಅವರ ಸಾಕಾಣಿಕೆಯಲ್ಲಿದ್ದ ಆಡೊಂದು ಬುಧವಾರ ಹೆರಿಗೆಯಾದ ವೇಳೆ ಆರಂಭದಲ್ಲಿ ಅವಳಿ ಮರಿಗಳು ಜನಿಸುವ ಸಾಧ್ಯತೆ ಇದೆ ಎಂದು ಮನೆಯವರು ಭಾವಿಸಿದ್ದರು. ಆದರೆ ಹೆರಿಗೆ ಪೂರ್ಣಗೊಂಡ ಬಳಿಕ ಒಂದೇ ದೇಹದಲ್ಲಿ ಅಪರೂಪದ ದೈಹಿಕ ವೈಶಿಷ್ಟ್ಯಗಳನ್ನು ಹೊಂದಿದ ಮರಿ ಜನಿಸಿರುವುದು ಕಂಡುಬಂದಿತು.
Kumadvathi College Shikariuraಜನಿಸಿದ ಆಡಿನ ಮರಿಗೆ ಎಂಟು ಕಾಲುಗಳು, ಮೂರು ಕಿವಿಗಳು, ಎರಡು ಬಾಲಗಳು ಹಾಗೂ ಎರಡು ನಾಲಿಗೆಗಳಿದ್ದವು. ದೇಹದ ರಚನೆಯೂ ಸಹ ಸಾಮಾನ್ಯ ಮರಿಗಳಿಗಿಂತ ಭಿನ್ನವಾಗಿದ್ದು, ಈ ಅಪರೂಪದ ಜನನ ಗ್ರಾಮಸ್ಥರಲ್ಲಿ ಆಶ್ಚರ್ಯಕ್ಕೆ ಕಾರಣವಾಯಿತು. ಇಂತಹ ಜನನ ಅತ್ಯಂತ ವಿರಳವಾಗಿರುವುದರಿಂದ ಸುದ್ದಿ ಕ್ಷಣಾರ್ಧದಲ್ಲೇ ಗ್ರಾಮ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹರಡಿತು.

Also read>> ಆ.7ರಂದು ಎಸ್. ಜಾನಕಿ ನೆನಪಿನಲ್ಲಿ ‘ಕಂಗಳು ವಂದನೆ ಹೇಳುವೆ’ ಕಾರ್ಯಕ್ರಮ

ವಿಚಿತ್ರವಾಗಿ ಜನಿಸಿದ ಈ ಆಡಿನ ಮರಿ ಬುಧವಾರ ಸಂಜೆವರೆಗೂ ಜೀವಂತವಾಗಿದ್ದು, ಬಳಿಕ ಸಾವನ್ನಪ್ಪಿದೆಯೇ ಅಥವಾ ಬದುಕುಳಿದಿದೆಯೇ ಎಂಬ ಕುರಿತು ಅಧಿಕೃತ ಮಾಹಿತಿ ಲಭ್ಯವಾಗಿಲ್ಲ.
ಮರಿಯನ್ನು ನೋಡಲು ಉದ್ರಿ ವಡ್ಡಿಗೆರೆ ಗ್ರಾಮಸ್ಥರಷ್ಟೇ ಅಲ್ಲದೆ ಸಮೀಪದ ಗ್ರಾಮಗಳ ಜನರೂ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದರು. ಹಲವರು ಮೊಬೈಲ್‌ಗಳಲ್ಲಿ ಚಿತ್ರ ಹಾಗೂ ವಿಡಿಯೊಗಳನ್ನು ಸೆರೆಹಿಡಿದು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡರು.

ಪಶುವೈದ್ಯರ ಪ್ರಕಾರ, ಇಂತಹ ಅಪರೂಪದ ಜನನಗಳು ಭ್ರೂಣದ ಬೆಳವಣಿಗೆಯ ಹಂತದಲ್ಲಿ ಉಂಟಾಗುವ ದೈಹಿಕ ವೈಪರೀತ್ಯಗಳು ಅಥವಾ ಜನ್ಮಜಾತ ಬೆಳವಣಿಗೆಯ ಅಸಹಜತೆಗಳಿಂದ ಸಂಭವಿಸಬಹುದು. ಇಂತಹ ಮರಿಗಳು ಸಾಮಾನ್ಯವಾಗಿ ಹೆಚ್ಚು ಕಾಲ ಬದುಕುವುದು ವಿರಳ ಎನ್ನಲಾಗುತ್ತದೆ.

ಈ ಅಪರೂಪದ ಘಟನೆ ಉದ್ರಿ ವಡ್ಡಿಗೆರೆ ಗ್ರಾಮದಲ್ಲಿ ದಿನವಿಡೀ ಚರ್ಚೆಗೆ ಗ್ರಾಸವಾಗಿದ್ದು, ಪ್ರಕೃತಿಯ ವಿಚಿತ್ರ ಸೃಷ್ಟಿಯೊಂದಾಗಿ ಜನರ ಗಮನ ಸೆಳೆಯಿತು.

(ವರದಿ: ಮಧುರಾಮ್, ಸೊರಬ)

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      PES ShivamoggaKalpa News Advertising DisclaimerKalahamsa Infotech private limited

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaRare Goat bornShimogaShivamoggaNewsSorabaಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಸೊರಬ
Share240Tweet150Send
Aniruddha Vasishta S R

Aniruddha Vasishta S R

Editor-in-Chief

Previous Post

ಆ.7ರಂದು ಎಸ್. ಜಾನಕಿ ನೆನಪಿನಲ್ಲಿ ‘ಕಂಗಳು ವಂದನೆ ಹೇಳುವೆ’ ಕಾರ್ಯಕ್ರಮ

Next Post

ಕನಕಪುರ ಅರಣ್ಯದಲ್ಲಿ ಹೃದಯವಿದ್ರಾವಕ ಘಟನೆ | ಕಾಡಾನೆಯೊಂದಿಗೆ ಸೆಲ್ಫಿಗೆ ಯತ್ನ | ಉದ್ಯಮಿ ದುರ್ಮರಣ

kalpa News

kalpa News

Next Post
Wild Elephant killed man while taking selfie kanakapura

ಕನಕಪುರ ಅರಣ್ಯದಲ್ಲಿ ಹೃದಯವಿದ್ರಾವಕ ಘಟನೆ | ಕಾಡಾನೆಯೊಂದಿಗೆ ಸೆಲ್ಫಿಗೆ ಯತ್ನ | ಉದ್ಯಮಿ ದುರ್ಮರಣ

Leave a Reply Cancel reply

Your email address will not be published. Required fields are marked *

No Result
View All Result
Pneumonia or Common Cold The Differece Before Its Too Late!
English Articles

Why pneumonia should never be mistaken for a common cold

by kalpa News
November 16, 2026
0

Learn why pneumonia should never be mistaken for a common cold. Understand the key symptoms, warning signs, health risks and...

Read moreDetails
South Western Railway Jeevan Pramaan 5 Camps Mysuru Division Nov 2026

South Western Railway Announces Jeevan Pramaan 5.0 Camps; Check Dates & Venues

November 4, 2026
Dasara Celebrations at Prasanna Venkateswara Swamy Temple

Resplendent Dasara Celebrations at Prasanna Venkateswara Swamy Temple

November 2, 2026
Cyclone Arnab Effect Jharkhand Alert 15 Dist Heavy Rain

Cyclone Arnab Effect: Jharkhand Braces for Heavy Rain and Winds Up to 60 kmph

October 29, 2026
Bharatanatyam Of Sukti Performance Sampattu Grace Rhythm copy

Grace and Rhythm Mark Sukthi’s Bharatanatyam Performance at Sampattu

October 19, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL