ಕಲ್ಪ ಮೀಡಿಯಾ ಹೌಸ್ | ಸೊರಬ |
ಶರಣರ ವಚನಗಳು ನಮ್ಮ ಜೀವನಕ್ಕೆ ಮಾರ್ಗದರ್ಶನ ನೀಡುವುದಲ್ಲದೆ, ಆತ್ಮದ ವಿಮರ್ಶೆಗೆ ಸಹಕಾರಿಯಾಗುತ್ತವೆ ಎಂದು ಜಡೆ ಹಿರೇಮಠ ಹಾಗೂ ಸೊರಬ ಕಾನುಕೇರಿ ಮಠದ ಘನಬಸವ ಅಮರೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು ಹೇಳಿದರು.
ಅವರು ನಗರದಲ್ಲಿರುವ ಕಾನುಕೇರಿ ಮಠದಲ್ಲಿ ಸೊರಬ ಅಕ್ಕನಬಳಗದ ಸಹಯೋಗದಲ್ಲಿ ಶ್ರಾವಣ ಮಾಸದಲ್ಲಿ ಆಯೋಜಿಸಿರುವ ಶ್ರಾವಣ ಸಂಭ್ರಮ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. “ಶರಣರು ಹೇಗೆ ಬದುಕಿದರೋ ಹಾಗೆ ನುಡಿದರು, ಏನು ನುಡಿದರೋ ಹಾಗೆ ನಡೆದುಕೊಂಡರು. ಇದು ಎಲ್ಲರಿಗೂ ಸಾಧ್ಯವಿಲ್ಲ. ಪುಣ್ಯ ಬಯಸುವವರು ಪುಣ್ಯ ಕಾರ್ಯಗಳನ್ನು ಮಾಡುವುದಿಲ್ಲ, ಪಾಪವನ್ನು ತಿರಸ್ಕರಿಸುವವರು ಪಾಪ ಕಾರ್ಯಗಳಲ್ಲಿ ತೊಡಗುತ್ತಾರೆ. ಆದರೆ ಶರಣರು ನುಡಿದಂತೆ ನಡೆದುಕೊಂಡವರು,” ಎಂದು ಅವರು ಅಭಿಪ್ರಾಯಪಟ್ಟರು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಜಿಲ್ಲಾ ಪಂಚಾಯತಿ ಮಾಜಿ ಉಪಾಧ್ಯಕ್ಷ ಪಾಣಿ ರಾಜಪ್ಪ ಅವರು, “ನಾವು ವೇದಿಕೆಯ ಮೇಲೆ ವಚನಗಳನ್ನು ಹೇಳುವಾಗ, ನಾವು ತಾನೇ ಅವುಗಳನ್ನು ಜೀವನದಲ್ಲಿ ಅನುಸರಿಸುತ್ತಿದ್ದೇವೆ ಎಂಬ ಪ್ರಶ್ನೆಯನ್ನು ಕೇಳಿಕೊಳ್ಳಬೇಕು. ಮಠಗಳ ಸಂಪರ್ಕದಿಂದ ಸಮಾಜದಲ್ಲಿ ಉತ್ತಮ ವಾತಾವರಣ ನಿರ್ಮಾಣ ಸಾಧ್ಯ,” ಎಂದು ಹೇಳಿದರು.

ವರದಿ: ಮಧುರಾಮ್, ಸೊರಬ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post