ಕಲ್ಪ ಮೀಡಿಯಾ ಹೌಸ್ | ಸೊರಬ |
ತಾಲ್ಲೂಕಿನಾದ್ಯಂತ ಕನ್ನಡ ರಾಜ್ಯೋತ್ಸವ ಆಚರಣೆ ಸರಳವಾಗಿ ಜರುಗಿತು. ತಾಲ್ಲೂಕು ಆಡಳಿತ, ಉತ್ಸವ ಸಮಿತಿ, ವಿವಿಧ ಇಲಾಖೆ ವತಿಯಿಂದ ಪಟ್ಟಣದ ರಂಗಮಂದಿರದಲ್ಲಿ ನಡೆದ ರಾಜ್ಯೋತ್ಸವ ಆಚರಣೆ ಸಂದರ್ಭದಲ್ಲಿ ಕೊರೋನಾ ವಾರಿಯರ್‍ಸ್ ಗೆ ಸನ್ಮಾನಿಸಲಾಯಿತು.
ಪಟ್ಟಣದ ಹೊಸಪೇಟೆ ಬಡಾವಣೆಯಲ್ಲಿ ಯುವಶಕ್ತಿ ಸಮಿತಿಯಿಂದ, ಆನವಟ್ಟಿಯಲ್ಲಿ ವಿವಿಧ ಕನ್ನಡಪರ ಸಂಘಸಂಸ್ಥೆಗಳು ಹಾಗೂ ಆಡಳಿತದ ವತಿಯಿಂದ, ಎಲ್ಲ ಶಾಲಾ ಕಾಲೇಜುಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು. ತಹಶೀಲ್ದಾರ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು, ಸಂಘ ಸಂಸ್ಥೆಯವರು ಇದ್ದರು.
ವರದಿ: ಮಧುರಾಮ್, ಸೊರಬ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post