ಕಲ್ಪ ಮೀಡಿಯಾ ಹೌಸ್ | ಸೊರಬ |
ಶಿವಮೊಗ್ಗದಲ್ಲಿ ಫೆ.27 ರಂದು ನಡೆದ ನೂತನ ವಿಮಾನ ನಿಲ್ದಾಣ ಉದ್ಘಾಟನಾ ಸಮಾರಂಭದ ವರದಿಗೆಂದು ತೆರಳಿದ್ದ ಪತ್ರಕರ್ತ ಆರ್.ಎಸ್. ಹಾಲಸ್ವಾಮಿಯವರ ಮೇಲೆ ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರು ಹಲ್ಲೆ ಮಾಡಿದ್ದನ್ನು ಖಂಡಿಸಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಸೊರಬ ತಾಲೂಕು ಶಾಖೆ ವತಿಯಿಂದ ತಹಶೀಲ್ದಾರ್ ಅವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
ಹಾಲಸ್ವಾಮಿ ಅವರನ್ನು ಪೊಲೀಸ್ ವಾಹನದಲ್ಲಿ ಅಕ್ರಮವಾಗಿ ಬಂಧಿಸಿದ್ದಲ್ಲದೇ ಅವರ ಮೊಬೈಲನ್ನು ಕಿತ್ತುಕೊಂಡು ಅದರಲ್ಲಿ ಸರ ಹಿಡಿದಿದ್ದ ವಿಡಿಯೋಗಳನ್ನು ಡಿಲಿಟ್ ಮಾಡಿ ದೌರ್ಜನ್ಯ ಎಸಗಿರುವುದು ಖಂಡನೀಯ. ವಿವಿಧ ಕಡೆಗಳಲ್ಲಿ ನಡೆಯುವ ಕಾರ್ಯಕ್ರಮಗಳ ಸುದ್ದಿ ಮಾಡಲು ತೆರಳುವ ಪತ್ರಕರ್ತರ ಮೇಲೆ ಇತ್ತೀಚಿನ ದಿನಗಳಲ್ಲಿ ತೀವ್ರತರವಾದ ಹಲ್ಲೆ, ದೌರ್ಜನ್ಯಗಳು ನಡೆಯುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಬೇಕು. ಅಲ್ಲದೇ ವಿಮಾನ ನಿಲ್ದಾಣ ಉದ್ಘಾಟನೆ ಸಂದರ್ಭದಲ್ಲಿ ಉದ್ಘಟತನ ತೋರಿದ ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರ ಮೇಲೆ ಸೂಕ್ತ ಶಿಸ್ತುಕ್ರಮ ಜರುಗಿಸಬೇಕೆಂದು ಒತ್ತಾಯಿಸಿ ಮನವಿ ಸಲ್ಲಿಸಲಾಯಿತು.
Also read: ಮಾಡಾಳ್ ಪ್ರಶಾಂತ್ ಅಕೌಂಟ್ ಫ್ರೀಜ್: ಸರೆಂಡರ್ ಆಗ್ತಾರಾ ವಿರೂಪಾಕ್ಷಪ್ಪ?
ಸಂಘದ ಅಧ್ಯಕ್ಷ ನಾಗರಾಜ ಜೈನ್(ಬಣ್ಣದ ಬಾಬು), ಪ್ರಧಾನ ಕಾರ್ಯದರ್ಶಿ ಸಂದೀಪ ಯು.ಎಲ್, ಉಪಾಧ್ಯಕ್ಷ ಮಹಮ್ಮದ್ ಆರೀಪ್, ಹಿರಿಯ ಪತ್ರಕರ್ತರಾದ ಯು.ಎನ್ ಲಕ್ಷ್ಮೀಕಾಂತ, ಜಿ.ಎಂ. ತೋಟಪ್ಪ, ಶಿವಪ್ಪ ಹಿತ್ಲರ್, ರಾಜೇಂದ್ರ ಜೈನ್, ಮಧು ರಾಮ, ವಿಜಯ ಗೌಳಿ ಉಪಸ್ಥಿತರಿದ್ದರು.
ವರದಿ: ಮಧುರಾಮ್, ಸೊರಬ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post