ಕಲ್ಪ ಮೀಡಿಯಾ ಹೌಸ್ | ಸೊರಬ |
ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರು #Pahlgam Terror Attack ಪ್ರವಾಸಿಗರ ಮೇಲೆ ನಡೆಸಿದ ಹತ್ಯೆಯನ್ನು ಖಂಡಿಸಿ, ಹಿಂದೂ ಹಿತರಕ್ಷಣಾ ಸಮಿತಿ ವತಿಯಿಂದ ಪಟ್ಟಣದಲ್ಲಿ ಪಂಜಿನ ಮೆರವಣಿಗೆಯ ಮೂಲಕ ಪ್ರತಿಭಟಿಸಲಾಯಿತು.
ಅಮರೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳವರು ಕಾನುಕೇರಿಮಠ-ಸೊರಬ ಇವರು ಸಾಯಂಕಾಲ 7 ಗಂಟೆಗೆ, ಪಟ್ಟಣದ ರಂಗನಾಥಸ್ವಾಮಿ ದೇವಸ್ಥಾನ ಅವರಣದಲ್ಲಿ ಪಂಜಿನ ಮೆರವಣಿಗೆಗೆ ಚಾಲನೆ ನೀಡಿದರು. ನೂರಾರು ಕಾರ್ಯಕರ್ತರು ಮೆರವಣಿಗೆಯ ಉದ್ದಕ್ಕೂ ಪಾಕಿಸ್ಥಾನದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರ ಹಾಕಿ ಪುರಸಭೆ ಮುಂಬಾಗ ಗುಂಡೇಟಿಗೆ ಬಲಿಯಾದ ಪ್ರವಾಸಿಗರ ಆತ್ಮಕ್ಕೆ ಶಾಂತಿ ಕೋರಿ ಮೊಂಬತ್ತಿ ಉರಿಸಿ ಮೌನಾಚರಣೆ ನಡೆಸಿದರು.

ಬಿಜೆಪಿ ಮುಖಂಡ ಡಾ.ಜ್ಞಾನೇಶ್ ಮಾತನಾಡಿ ದೇಶದ ಬಗ್ಗೆ ಸವಾಲು ಬಂದಾಗ ಜಾತಿ ಸಂಪ್ರದಾಯವನ್ನು ಬಿಟ್ಟು ಒಗ್ಗಟ್ಟಿನ ಪ್ರದರ್ಶನ ಮಾಡಬೇಕು. ಹಿಂದೂಗಳೇ ಎಂದು ಪ್ರತ್ಯೇಕವಾಗಿ ಗುರುತಿಸಿ, ಸುಮಾರು 26 ಜನರನ್ನು ಹತ್ಯೆ ಮಾಡಲಾಗಿದೆ. ಗಡಿಯಾಚೆಯಿಂದ ಬಂದ ಭಯೋತ್ಪಾದಕರು ಹಾಗೂ ಗಡಿಯ ಒಳಗೇ ಇರುವ ದೇಶ ದ್ರೋಹಿ ಸೇರಿಕೊಂಡು ಈ ಕೃತ್ಯ ಎಸಗಿದ್ದಾರೆ. ದೇಶದ ಪ್ರಧಾನಿ ಹೇಳಿದಂತೆಯೇ ಈ ಭಯೋತ್ಪಾದಕರನ್ನು ಈ ಭೂಮಿಯಲ್ಲಿಯೇ ಇಲ್ಲದಂತಾಗಿಸಬೇಕು. ಪಶ್ಚಿಮ ಬಂಗಾಳದಲ್ಲಿ ಬಾಂಗ್ಲಾ ದೇಶಕ್ಕೆ ಹೊಂದಿಕೊಂಡಿರುವ ಮುರ್ಶಿದಾಬಾದ್, ಮಾಲ್ಟಾ ಹಾಗೂ 24 ಜಿಲ್ಲೆಗಳಲ್ಲಿ ಮುಸ್ಲಿಂ ಜನಸಂಖ್ಯೆ ಹೆಚಾಗಿದ್ದು,. ಚಿಕ್ಕಂದಿನಿಂದ ಹಿಂದೂಗಳ ಬಗ್ಗೆ ಅವರಲ್ಲಿ ಅಸಹಿಷ್ಣುತೆ ಬೆಳೆಸಲಾಗಿದೆ. ಕೇಂದ್ರ ಸರ್ಕಾರ ದೇಶದ ಜನರನ್ನು ಗಮನದಲ್ಲಿಟ್ಟುಕೊಂಡು ಜಾರಿಗೆ ತಂದಿರುವ ವಕ್ಸ್ ಬದಲಾವಣೆ ಕಾಯ್ದೆಯನ್ನು ವಿರೋಧಿಸುವ ನೆಪದಲ್ಲಿ ದೇಶದ್ರೋಹಿಗಳು, ಹಿಂದೂಗಳ ಮೇಲೆ ಮತ್ತು ಶ್ರದ್ಧಾಕೇಂದ್ರಗಳಾದ ದೇವಸ್ಥಾನಗಳ ಮೇಲೆ ಹಲ್ಲೆ ಮತ್ತು ಹಾನಿಯನ್ನು ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ವರದಿ: ಮಧುರಾಮ್, ಸೊರಬ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post