ಕಲ್ಪ ಮೀಡಿಯಾ ಹೌಸ್ | ಸೊರಬ |
ಅಖಂಡ ಭಾರತ ಸಂಕಲ್ಪ ದಿನ ಅಂಗವಾಗಿ ಸೊರಬದಲ್ಲಿ ಆ.10ರಂದು ಪಂಜಿನ ಮೆರವಣಿಗೆ ನಡೆಯಲಿದೆ ಎಂದು ಹಿಂದೂ ಜಾಗರಣ ವೇದಿಕೆಯ ತಾಲೂಕು ಸಂಚಾಲಕರಾದ ನಾಗರಾಜ್ ಆಚಾರ್ ತಿಳಿಸಿದ್ದಾರೆ.
ಅವರು ಈ ಬಗ್ಗೆ ಮಾಹಿತಿ ನೀಡಿದ್ದು 1947 ರ ಆಗಸ್ಟ್ 14ರ ಮಧ್ಯರಾತ್ರಿ ಭಾರತ ದೇಶ ತ್ರಿಖಂಡವಾಗಿ ಕತ್ತರಿಸಲ್ಪಟ್ಟ ಕರಾಳ ರಾತ್ರಿಯ ದುರಂತವನ್ನು ನೆನಪಿಸುತ್ತ ಕಳೆದು ಹೋದ ಭಾಗಗಳನ್ನೆಲ್ಲ ಮತ್ತೆ ಒಂದುಗೂಡಿಸುವ ಬಗ್ಗೆ ನಾಗರಿಕರಿಗೆ ನೆನಪಿಸುವ ಕಾರ್ಯಕ್ರಮ ಇದಾಗಿದೆ ಎಂದು ಹೇಳಿದರು.
Also read: ಶೀಘ್ರ ಸಿಎಂ ರಾಜೀನಾಮೆ ಕೊಡುವ ಅನಿವಾರ್ಯತೆ ಬರುತ್ತದೆ | ಸಂಸದ ರಾಘವೇಂದ್ರ
ಪಟ್ಟಣದ ಖಾಸಗಿ ಬಸ್ ನಿಲ್ದಾಣದಿಂದ ಪಂಜಿನ ಮೆರವಣಿಗೆ ಮುಖ್ಯ ರಸ್ತೆ ಮೂಲಕ ಹೊರಟು ರಥಬೀದಿ, ಮೂಲಕ ಶ್ರೀ ರಂಗನಾಥ ದೇವಾಲಯ ತೆರಳಿ ಕನುಕೇರಿ ಮಠದ ಆವರಣದಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.
ಜಿಲ್ಲಾ ಪ್ರಮುಖರಾದ ಲೋಕೇಶ ಬಡಿಗೇರ ಮಾತನಾಡಿ, ಅಖಂಡ ಭಾರತ ಸಂಕಲ್ಪ ದಿನ ಕಾರ್ಯಕ್ರಮದ ನಿಮಿತ್ತ ಪಂಜಿನ ಮೆರವಣಿಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಪಟ್ಟಣದಲ್ಲಿ ಆ.10ರಂದು ಸಂಜೆ 6: 30ಕ್ಕೆ ಮೆರವಣಿಗೆ ನಂತರ ನಡೆಯಲಿರುವ ಸಭಾ ಕಾರ್ಯಕ್ರಮದಲ್ಲಿ ಅಂದಾಜು 1000 ಸಂಖ್ಯೆಯಲ್ಲಿ ದೇಶಭಕ್ತರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು. ಸಭಾ ಕಾರ್ಯಕ್ರಮ ಶ್ರೀ ಷ || ಬ್ರ || ಘನ ಬಸವ ಶಿವಾಚಾರ್ಯರು ಹಿರೇಮಠ ಜಡೆ, ಅವರ ಅಧ್ಯಕ್ಷತೆಯಲ್ಲಿ ನಡೆಯಲಿದ್ದು, ದೇವರಾಜ್ ಅರಳಿಹಳ್ಳಿ ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಂಯೋಜಕ್ ಶಿವಮೊಗ್ಗ ಅವರು ದಿಕ್ಕೂಚಿ ಭಾಷಣ ಮಾಡಲಿರುವರು ಎಂದು ಹೇಳಿದರು.
ವರದಿ: ಮಧುರಾಮ್, ಸೊರಬ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post