ಕಲ್ಪ ಮೀಡಿಯಾ ಹೌಸ್ | ಸೊರಬ |
ದೇಶದಾದ್ಯಂತ ತೀವ್ರ ಕುತೂಹಲ ಕೆರಳಿಸಿದ್ದ ಲೋಕಸಭೆ ಚುನಾವಣೆ ಫಲಿತಾಂಶದಲ್ಲಿ ಬಿಜೆಪಿಗೆ ಮತದಾರರು ಆಶೀರ್ವಾದ ಮಾಡಿರುವ ಹಿನ್ನೆಲೆಯಲ್ಲಿ ಮಂಗಳವಾರ ಪಟ್ಟಣದ ರೈತ ವೃತ್ತದ ಬಳಿ ಬಿಜೆಪಿ ಮುಖಂಡರು ವಿಜಯೋತ್ಸವ ಆಚರಿಸಿದರು.
ಮಾಜಿ ಪುರಸಭಾ ಅಧ್ಯಕ್ಷ ಎಂ.ಡಿ. ಉಮೇಶ್ ಮಾತನಾಡಿ, ಕಳೆದ ಐದು ವರ್ಷದ ಆಡಳಿತಾವಧಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಸಂಸದ ಬಿ.ವೈ. ರಾಘವೇಂದ್ರ #B Y Raghavendra ಮಾಡಿರುವ ಉತ್ತಮ ಕಾರ್ಯ ನೋಡಿ ಜಿಲ್ಲೆಯ ಮತದಾರರು ಬಿಜೆಪಿಗೆ ಗೆಲುವಿನ ಮಾಲೆ ಹಾಕಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು.
Also read: ರಾಜ್ಯದಲ್ಲಿ ಶೇಕಡಾವಾರು ಮತಗಳಿಕೆಯಲ್ಲಿ ಬಿಜೆಪಿಯನ್ನು ಹಿಂದಿಕ್ಕಿದ ಕಾಂಗ್ರೆಸ್
ಈ ಫಲಿತಾಂಶದಿಂದ ನಮ್ಮ ಪಕ್ಷದ ಹಾಗೂ ಸಂಸದ ಬಿ.ವೈ. ರಾಘವೇಂದ್ರ ಮೇಲೆ ಜಿಲ್ಲೆಯ ಜನರು ಇಟ್ಟಿರುವ ನಂಬಿಕೆ ಉಳಿಸಿಕೊಳ್ಳಲು ಸಚಿವರಾಗಿ ಬಂದು ಉತ್ತಮ ಆಡಳಿತ ನೀಡುವ ಮೂಲಕ ಮತದಾರರ ಋಣ ತೀರಿಸುತ್ತಾರೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಬಿಜೆಪಿಯ ಎಲ್ಲಾ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿರಿದ್ದರು.
(ವರದಿ: ಮಧುರಾಮ್, ಸೊರಬ)
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news






















