ಕಲ್ಪ ಮೀಡಿಯಾ ಹೌಸ್ | ಸೊರಬ |
ಪುರಸಭೆ ವ್ಯಾಪ್ತಿಯ ಚಿಕ್ಕಶಕುನ- ಶೀಗೇಹಳ್ಳಿ ಗ್ರಾಮದ ಸಮೀಪ ಅರಣ್ಯ ಪ್ರದೇಶದ ನಡುತೋಪಿಗೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಅರಣ್ಯ ಪ್ರದೇಶದಲ್ಲಿ ನೆಟ್ಟ ಗಿಡಗಳು ಹೊತ್ತಿ ಉರಿದ ಘಟನೆ ನಡೆದಿದೆ.
ಬೆಂಕಿ ಹತ್ತಿ ಉರಿಯುತ್ತಿರುವುದನ್ನು ಗಮನಿಸಿದ ಸ್ಥಳೀಯರು ಬೆಂಕಿ ನಂದಿಸಲು ಮುಂದಾಗಿದ್ದಾರೆ. ಆದರೆ ಬಿಸಿಲಿನ ತಾಪಮಾನ ಹೆಚ್ಚಾಗಿದ್ದ ಕಾರಣದಿಂದ ಬೆಂಕಿ ಅರಣ್ಯ ಪ್ರದೇಶವನ್ನು ಆವರಿಸಿಕೊಂಡಿದೆ. ಅರಣ್ಯ ಇಲಾಖೆಯ ಸಿಬ್ಬಂದಿಗೆ ಮಾಹಿತಿ ನೀಡಿದರೂ ಸ್ಪಂದಿಸಲಿಲ್ಲ ಎಂಬುದು ಗ್ರಾಮಸ್ಥರ ಆರೋಪ.
Also read: ಮುಸ್ಲಿಂ ಮೀಸಲಾತಿಯನ್ನು ಬಾಬಾ ಸಾಹೇಬ್ ಅಂಬೇಡ್ಕರರೇ ವಿರೋಧಿಸಿದ್ದರು: ಆರ್. ಅಶೋಕ
ಈ ನಡುವೆ ವಿಷಯ ತಿಳಿದ ಅಗ್ನಿಶಾಮಕದಳದ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಕಾರ್ಯಾಚರಣೆ ನಡೆಸಿ ಸ್ಥಳೀಯರ ಸಹಕಾರದೊಂದಿಗೆ ಹೆಚ್ಚಿನ ಅನಾಹುತ ಆಗುವುದನ್ನು ತಪ್ಪಿಸಿz್ದÁರೆ. ಚಿಕ್ಕಶಕುನದ ಸರ್ವೆ ನಂರ್ಬ 30 ಮತ್ತು 32 ರಲ್ಲಿ ಸುಮಾರು 10 ಸಾವಿರ ಸಸಿಗಳನ್ನು ನೆಡಲಾಗಿತ್ತು. ಈ ಪೈಕಿ 5 ಸಾವಿರಕ್ಕೂ ಹೆಚ್ಚು ಸಸಿಗಳು ಬೆಂಕಿಗೆ ಆಹುತಿಯಾಗಿವೆ. ಯಾರೋ ಕಿಡಿಗೇಡಿಗಳು ಬೆಂಕಿ ಹಾಕಿದ್ದಾರೆ ಎಂದು ಸ್ಥಳೀಯರು ಆರೋಪಿಸುತ್ತಿz್ದÁರೆ. ಆಕಸ್ಮಿಕವಾಗಿ ಘಟನೆ ಸಂಭವಿಸಿದೆಯೆ ಅಥವಾ ಉದ್ದೇಶ ಪೂರ್ವಕವಾಗಿ ಮಾಡಲಾಗಿದೆಯೇ ಎನ್ನುವುದು ತಿಳಿದು ಬರಬೇಕಿದೆ.
ಮುಖ್ಯವಾಗಿ ಬೇಸಿಗೆ ಆರಂಭವಾಗಿದ್ದು, ಅಗ್ನಿಶಾಮಕ ದಳದ ವಾಹನಗಳು ಹಾಳಾಗಿರುವುದು ದುರ್ಧೈವವೇ ಸರಿ.
(ವರದಿ: ಮಧುರಾಮ್, ಸೊರಬ)
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post