ಕಲ್ಪ ಮೀಡಿಯಾ ಹೌಸ್ | ಸೊರಬ |
ಪಟ್ಟಣದ ಚಾಮರಾಜಪೇಟೆಯ ಕಾನುಕೇರಿ ಮಠದ ಆವರಣದಲ್ಲಿ ಜ.12ರಂದು ಬೆಳಗ್ಗೆ 10.30 ಕ್ಕೆ ಸಾಮಾನ್ಯ ಆರೋಗ್ಯ ಹಾಗೂ ಕ್ಯಾನ್ಸರ್ ಅರಿವು ಕಾರ್ಯಕ್ರಮ ಏರ್ಪಡಿಲಾಗಿದೆ.
ಸಾಹಸ ಮತ್ತು ಸಂಸ್ಕೃತಿ ಅಕಾಡೆಮಿ, ತಾಲೂಕು ವೀರಶೈವ ಲಿಂಗಾಯತ ಶೈಕ್ಷಣಿಕ ಮತ್ತು ಸಾಮಾಜಿಕ ಅಭಿವೃದ್ಧಿ ಟ್ರಸ್ಟ್, ವಿಶ್ವಗುರು ಬಸವೇಶ್ವರ ಟ್ರಸ್ಟ್, ಟೌನ್ ವೀರಶೈವ ಸಮಾಜ, ಆರೋಗ್ಯ ಭಾರತಿ, ಮಥುರಾ ಪ್ಯಾರಡೈಸ್ ರಜತೋತ್ಸವ ಸಮಿತಿ, ತೀರ್ಥಹಳ್ಳಿಯ ಎಂಐಒ ಸ್ಪೆಷಾಲಿಟಿ ಕ್ಯಾನ್ಸರ್ ಆಸ್ಪತ್ರೆ ಸಹಯೋಗದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ.
ಜಡೆ ಹಿರೇಮಠ ಹಾಗೂ ಕಾನುಕೇರಿ ಮಠದ ಶ್ರೀ ಘನಬಸವ ಅಮರೇಶ್ವರ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದು, ರಾಷ್ಟ್ರಪತಿ ಪ್ರಶಸ್ತಿ ಪುರಸ್ಕೃತ ವೈದ್ಯ ಡಾ. ಎಂ.ಕೆ. ಭಟ್ ಉದ್ಘಾಟಿಸಲಿದ್ದಾರೆ. ಅಮ್ಮ ಆಸ್ಪತ್ರೆಯ ಡಾ ಬಿ.ಎಂ. ಸೌಭಾಗ್ಯ ಅಧ್ಯಕ್ಷತೆ ವಹಿಸುವರು.
ಸಂಪನ್ಮೂಲ ವ್ಯಕ್ತಿಗಳಾಗಿ ಡಾ. ಅಮೋಘ ಆಲೇಕಲ್, ಡಾ. ಭವ್ಯ, ಡಾ.ಕೆ.ಎಸ್. ಪಲ್ಲವಿ, ಶ್ರೀಧರ್ ಸೇರಿದಂತೆ ಇತರರು ಪಾಲ್ಗೊಳ್ಳಲಿದ್ದಾರೆ ಎಂದು ಶಿಬಿರದ ಸಂಚಾಲಕ ಅ.ನಾ. ವಿಜಯೇಂದ್ರ ರಾವ್ ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post