ಕಲ್ಪ ಮೀಡಿಯಾ ಹೌಸ್ | ಸೊರಬ |
ಸೊರಬ ಪಟ್ಟಣ ಸೇರಿ ತಾಲೂಕಿನಾದ್ಯಂತ ಸಂಭ್ರಮ– ಸಡಗರದಿಂದ ನಾಗರಪಂಚಮಿ Nagarapanchami ಆಚರಿಸಲಾಗುತ್ತಿದೆ. ಹಲವರು ಮನೆಯಲ್ಲಿಯೇ ನಾಗರ ಮೂರ್ತಿಗೆ ವಿಶೇಷ ಪೂಜೆ ಮಾಡಿ ಹಾಲೆರೆದರೆ, ಕೆಲವರು ದೇವಸ್ಥಾನ ಆವರಣದಲ್ಲಿರುವ ಹುತ್ತ, ನಾಗರ ಮೂರ್ತಿಗೆ ಹಾಲೆರೆದರು.
ಮನೆ ಬಾಗಿಲಿಗೆ ಮಾವಿನ ತೋರಣ ಕಟ್ಟಿ, ಮನೆ ಮುಂದೆ ರಂಗೋಲಿ ಹಾಕುವ ಮೂಲಕ ಮಹಿಳೆಯರು ಬೆಳಿಗ್ಗೆಯೇ ಶ್ರಾವಣ ಮಾಸದ ಮೊದಲ ಹಬ್ಬವಾದ ನಾಗರ ಪಂಚಮಿಯನ್ನು ಸಂಭ್ರಮದಿಂದ ಸ್ವಾಗತಿಸಿದರು. ಶೇಂಗಾ, ಪುಟಾಣಿ, ಕೊಬ್ಬರಿ ಉಂಡಿ ಸೇರಿದಂತೆ ಇತರ ಸಿಹಿ ಪದಾರ್ಥಗಳನ್ನು ದೇವರಿಗೆ ನೈವೇದ್ಯ ಅರ್ಪಿಸಲಾಯಿತು.
Also read: ಪಾಕ್ ಮೇಲೆ ಮತ್ತೊಂದು ಸರ್ಜಿಕಲ್ ಸ್ಟ್ರೈಕ್? ರಕ್ಷಣಾ ಇಲಾಖೆ ನೀಡಿದ ಸ್ಪಷ್ಟನೆಯೇನು?

ವರದಿ: ಮಧುರಾಮ್, ಸೊರಬ











Discussion about this post