No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
  • Advertise With Us
  • Grievances
  • About Us
  • Contact Us
Friday, October 16, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸೊರಬ

ಸೊರಬ-ಹಿಂದೂ ರಾಷ್ಟ್ರ ನಿರ್ಮಾಣಕ್ಕಾಗಿ ಕಟಿಬದ್ಧರಾಗಬೇಕು: ಧರಣೇಶ್ ಕರೆ

kalpa News by kalpa News
August 18, 2021
in ಸೊರಬ
0
ಸೊರಬ-ಹಿಂದೂ ರಾಷ್ಟ್ರ ನಿರ್ಮಾಣಕ್ಕಾಗಿ ಕಟಿಬದ್ಧರಾಗಬೇಕು: ಧರಣೇಶ್ ಕರೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಸೊರಬ: ಸ್ವಾತಂತ್ರ್ಯ ಪೂರ್ವ ಮತ್ತು ನಂತರದಲ್ಲಿ ನಡೆದ ದೇಶದ ವಿಭಜನೆಯಿಂದಾಗಿ ಸಾಕಷ್ಟು ಸಮಸ್ಯೆಯನ್ನು ಎದುರಿಸಿದ್ದು, ಈಗಲೂ ಎದುರಿಸುತ್ತಿದ್ದೇವೆ. ದೇಶದಿಂದ ಇಬ್ಬಾಗವಾಗಿ ಉದಯವಾದ ರಾಷ್ಟ್ರಗಳೇ ಇಂದು ನಮ್ಮ ಶತ್ರು ರಾಷ್ಟ್ರಗಳಾಗಿವೆ. ಅಲ್ಲಿ ಬಹುಸಂಖ್ಯಾತರಾಗಿದ್ದ ಹಿಂದೂಗಳು ಇಂದು ಶೇಕಡಾ ಪ್ರಮಾಣದಲ್ಲಿ ಒಂದಂಕಿಗೆ ಇಳಿದಿದ್ದಾರೆ. ಅಲ್ಲಿನ ಹಿಂದೂಗಳ ಸ್ಥಿತಿಯನ್ನು ಊಹಿಸಲೂ ಸಾಧ್ಯವಿಲ್ಲ. ಈ ನಿಟ್ಟಿನಲ್ಲಿ ಹಿಂದೂ ರಾಷ್ಟ್ರ ನಿರ್ಮಾಣಕ್ಕಾಗಿ ಕಟಿಬದ್ಧರಾಗಬೇಕು ಎಂದು ವಿಶ್ವ ಹಿಂದೂ ಪರಿಷತ್ ಜಿಲ್ಲಾ ಧರ್ಮ ಪ್ರಸರಣ ಎಸ್.ಆರ್. ಧರಣೇಶ್ ಕರೆ ನೀಡಿದರು.

ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ

ಪಟ್ಟಣದ ಮುಖ್ಯರಸ್ತೆಯ ಶ್ರೀ ವರದ ಹಸ್ತ ಆಂಜನೇಯ ಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿ ವಿಶ್ವ ಹಿಂದೂ ಪರಿಷತ್, ಬಜರಂಗದಳದ ವತಿಯಿಂದ ಹಮ್ಮಿಕೊಂಡ ಅಖಂಡ ಭಾರತ ಸಂಕಲ್ಪ ದಿನ ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಕಾರರಾಗಿ ಅವರು ಮಾತನಾಡಿದರು.

ತುಷ್ಠೀಕರಣ ನೀತಿಯಿಂದಾಗಿ ದೇಶದ ವಿಭಜನೆಯಾಗಿದ್ದು, ರಾಷ್ಟ್ರದ ಪುನರುತ್ಥಾನಕ್ಕೆ ತುಂಡಾದ ಭೂಮಿ ಮತ್ತೇ ಒಂದಾಗಬೇಕು ಎನ್ನುವ ಸಂಕಲ್ಪ ಎಲ್ಲರಲ್ಲೂ ಪ್ರೇರಣೆ ನೀಡಿದೆ. ಈಗಾಗಲೇ ಪಾಕ್ ಆಕ್ರಮಿತ ಕಾಶ್ಮೀರ ಮತ್ತು ಅರುಣಾಚಲ ಪ್ರದೇಶದ ಬಹುಭಾಗಗಳು ಕ್ರಮವಾಗಿ ಪಾಕಿಸ್ತಾನ ಹಾಗೂ ಚೀನಾ ದೇಶಗಳ ನಿಯಂತ್ರಣದಲ್ಲಿದೆ. ಇವುಗಳೆಲ್ಲವನ್ನು ಒಟ್ಟುಗೂಡಿಸಿ ಮತ್ತೆ ನಮ್ಮ ಸ್ವಾತಂತ್ರ್ಯ ಹೋರಾಟಗಾರರು ನಿರ್ಮಿಸಿದ್ದ ಅಖಂಡ ಭಾರತವನ್ನು ಪಡೆಯುವುದೇ ನಮ್ಮ ಗುರಿ. ಸ್ವಾತಂತ್ರ್ಯ ಯೋಧರು ಅಖಂಡ ಭಾರತಕ್ಕಾಗಿ ಹೋರಾಟ ನಡೆಸಿದರೆ ವಿನಾ, ದೇಶ ವಿಭಜನೆಗಾಗಿ ಅಲ್ಲ. ಪ್ರಸ್ತುತ ವಿವಿಧ ದೇಶಗಳಾಗಿ ಇಬ್ಭಾಗವಾಗಿರುವ ಮಾತೃಭೂಮಿಯನ್ನು ಮತ್ತೆ ಅಖಂಡವನ್ನಾಗಿ ಮಾಡಬೇಕೆಂಬ ಸಂಕಲ್ಪ ಪ್ರತಿಯೊಬ್ಬ ಭಾರತೀಯರು ಹೊಂದಬೇಕು ಎಂದರು.


ಯುವ ವಾಗ್ಮಿ ಭರತ್ ಕಾರೇಕೊಪ್ಪ ಮಾತನಾಡಿ, ಸ್ವಾತಂತ್ರ್ಯ ಹೋರಾಟಕ್ಕೆ 300 ವರ್ಷಗಳಿಗೂ ಅಧಿಕ ಇತಿಹಾಸವಿದೆ. ದೇಶದ ಮೇಲೆ ಹಲವಾರು ಆಕ್ರಮಣಗಳಾಗಿದ್ದು, ಅದು ಕೇವಲ ರಾಜ್ಯಗಳ ವಿಸ್ತರಣೆ ಮಾತ್ರವಾಗಿರದೇ, ಇಲ್ಲಿನ ಸಂಸ್ಕೃತಿಯ ಮೇಲೆಯೂ ದಾಳಿ ನಡೆದಿದೆ. ಪ್ರಸ್ತುತ ದಿನಗಳಲ್ಲಿ ಲವ್ ಜಿಹಾದ್, ಬಲವಂತದ ಮತಾಂತರ, ಭಯೋತ್ಪಾದನೆ ಸೇರಿದಂತೆ ಅನೇಕ ದಾಳಿಗಳನ್ನು ಎದುರಿಸುತ್ತಿದ್ದೇವೆ. ಇವುಗಳಿಗೆ ಪ್ರತ್ಯುತ್ತರವನ್ನು ನೀಡಲೇಬೇಕಿದೆ. ಈ ನಿಟ್ಟಿನಲ್ಲಿ ಹಿಂದೂ ಸಮಾಜ ಸಂಘಟಿತವಾಗಿ ಎಲ್ಲವನ್ನು ಎದುರಿಸಬೇಕು ಎಂದರು.

ಪಟ್ಟಣದ ಶ್ರೀ ವರದಹಸ್ತ ಆಂಜನೇಯ ದೇವಸ್ಥಾನದಿಂದ ಮುಖ್ಯರಸ್ತೆ ಮಾರ್ಗವಾಗಿ ಶ್ರೀ ರಂಗನಾಥ ದೇವಸ್ಥಾನವರೆಗೆ ಪಂಜಿನ ಮೆರವಣಿಗೆ ನಡೆಯಿತು. ಅಖಂಡ ಭಾರತ ಸಂಕಲ್ಪ ದಿನದ ಪ್ರತಿಜ್ಞೆಯನ್ನು ವಿಶ್ವ ಹಿಂದೂ ಪರಿಷತ್ ಜಿಲ್ಲಾ ಧರ್ಮ ಪ್ರಸರಣ ಎಸ್.ಆರ್. ಧರಣೇಶ್ ಬೋಧಿಸಿದರು.


ವಿಶ್ವ ಹಿಂದೂ ಪರಿಷತ್ ತಾಲೂಕು ಅಧ್ಯಕ್ಷ ಎಂ.ಎಸ್. ಕಾಳಿಂಗರಾಜ್ ನೇತೃತ್ವ ವಹಿಸಿದ್ದರು. ಆರ್‌ಎಸ್‌ಎಸ್ ತಾಲೂಕು ಕಾರ್ಯವಾಹ ಸೋಮಪ್ಪ ಕಾರೆಕೊಪ್ಪ, ಕಾರ್ಯಕರ್ತ ಮಹೇಶ್ ಗೋಖಲೆ, ವಿಹಿಂಪ ಜಿಲ್ಲಾ ಸಹ ಕಾರ್ಯದರ್ಶಿ ಎಚ್.ಎಲ್. ಚಂದನ್, ತಾಲೂಕು ಉಪಾಧ್ಯಕ್ಷರಾದ ಹರೀಶ್ ಭಟ್, ವಾಸುದೇವ ಬೆನ್ನೂರು, ಕಾರ್ಯದರ್ಶಿ ಪ್ರಶಾಂತ್ ಶ್ಯಾಡಲಕೊಪ್ಪ, ನಗರ ಅಧ್ಯಕ್ಷ ರಾಜು ಹಿರಿಯಾವಲಿ, ಕಾರ್ಯದರ್ಶಿ ರವಿ ಗುಡಿಗಾರ್, ಉಪಾಧ್ಯಕ್ಷ ಅಶೋಕ ಚಲ್ಲೂರು, ಬಜರಂಗದಳ ತಾಲೂಕು ಸಂಚಾಲಕ ರಂಗನಾಥ ಮೊಗವೀರ್, ನಗರ ಸಹ ಸಂಚಾಲಕ ಎಸ್.ಎನ್. ಶರತ್, ಪುರಸಭೆ ಉಪಾಧ್ಯಕ್ಷ ಮಧುರಾಯ್ ಜಿ. ಶೇಟ್, ಸದಸ್ಯ ವೀರೇಶ್ ಮೇಸ್ತ್ರಿ, ಮುಖಂಡರಾದ ಪಾಣಿ ರಾಜಪ್ಪ, ಯೋಗೇಶ್ ವಕೀಲ, ಸಂಜೀವ್ ಆಚಾರಿ ಸೇರಿದಂತೆ ಇತರರಿದ್ದರು. ಕೃತಿಕಾ ಪುರಾಣಿಕ್ ಮತ್ತು ಕೋಮಲಾ ಪುರಾಣಿಕ್ ವಂದೇ ಮಾತರಂ ಹಾಡಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamoggaShivamogga NewsSorabaಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಸೊರಬ
Share202Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಪ್ರಧಾನಮಂತ್ರಿ ಆದರ್ಶ ಗ್ರಾಮ ಯೋಜನೆ: ಕಾರ್ಯಾರಂಭ ಮಾಡುವಂತೆ ಡಿಸಿ ಸೂಚನೆ

Next Post

ಆ.30ರಂದು ಶ್ರೀ ಕೃಷ್ಣ ಜಯಂತಿ ಸರಳ ಆಚರಣೆ

kalpa News

kalpa News

Next Post
ಆ.30ರಂದು ಶ್ರೀ ಕೃಷ್ಣ ಜಯಂತಿ ಸರಳ ಆಚರಣೆ

ಆ.30ರಂದು ಶ್ರೀ ಕೃಷ್ಣ ಜಯಂತಿ ಸರಳ ಆಚರಣೆ

Leave a Reply Cancel reply

Your email address will not be published. Required fields are marked *

No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL