ಕಲ್ಪ ಮೀಡಿಯಾ ಹೌಸ್ | ಸೊರಬ |
ಕಾಂಗ್ರೆಸ್ ಪಕ್ಷದಿಂದ ಏ.30 ರಂದು ಮಧ್ಯಾಹ್ನ 1ಕ್ಕೆ ವಿಧಾನಸಭಾ ಚುನಾವಣಾ ಪ್ರಚಾರ ಸಭೆ ನಡೆಯಲಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, Mallikarjuna Kharge ನಟ ಶಿವರಾಜ್ ಕುಮಾರ್ Shivrajkumar ಸೇರಿದಂತೆ ಅನೇಕ ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದು ಎಐಸಿಸಿ ಸದಸ್ಯ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಎಸ್. ಮಧು ಬಂಗಾರಪ್ಪ ಹೇಳಿದರು.
ಆನವಟ್ಟಿ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಟ್ಟಣದ ವಿಠ್ಠಲ ದೇವಸ್ಥಾನದಿಂದ ಮುಖ್ಯರಸ್ತೆ ಮಾರ್ಗವಾಗಿ ಸಮಾವೇಶ ನಡೆಯುವ ಸ್ಥಳದವರೆಗೆ ಬೃಹತ್ ಮೆರವಣಿಗೆ ನಡೆಯಲಿದ್ದು, ಮೆರವಣಿಗೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಅನೇಕ ಮುಖಂಡರು ಪಾಲ್ಗೊಳ್ಳಲಿದ್ದಾರೆ.

ವರದಿ: ಮಧುರಾಮ್, ಸೊರಬ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post