ಕಲ್ಪ ಮೀಡಿಯಾ ಹೌಸ್ | ಸೊರಬ |
ತಾಲ್ಲೂಕು ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್‌ಗೆ ಬಿಜೆಪಿ ಬೆಂಬಲಿತ ಅಭ್ಯರ್ಥಿ ನಾಗರಾಜ ಗೌಡ ಚಿಕ್ಕಾವಲಿ ಮೂರನೇ ಬಾರಿಗೆ ಅಧ್ಯಕ್ಷರಾಗಿ ಹಾಗೂ ಉಪಾಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಯುವರಾಜ್ ಅವಿರೋಧವಾಗಿ ಶುಕ್ರವಾರ ಆಯ್ಕೆಯಾದರು.
ಅಧ್ಯಕ್ಷ ಸ್ಥಾನಕ್ಕೆ ನಾಗರಾಜ ಗೌಡ ಚಿಕ್ಕಾವಲಿ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಯುವರಾಜ್ ಓ. ಬಿ. ಇಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಚುನಾವಣಾಧಿಕಾರಿಯಾಗಿದ್ದ ಸಹಕಾರ ಅಭಿವೃದ್ಧಿ ಅಧಿಕಾರಿ ಟಿ.ವಿ. ಪ್ರಕಾಶ್ ಅವರು ಅವಿರೋಧ ಆಯ್ಕೆಯನ್ನು ಅಧಿಕೃತವಾಗಿ ಘೋಷಣೆ ಮಾಡಿದರು.
ರೈತ ಅಭಿವೃದ್ದಿಗಾಗಿ ಶ್ರಮಿಸುವೆ: ಅಧಿಕಾರ ವಹಿಸಿಕೊಂಡ ನಂತರ ಮಾತನಾಡಿದ ನಾಗರಾಜ್ ಗೌಡ, ಸಂಘದ ಎಲ್ಲ ನಿರ್ದೇಶಕರು ಒಮ್ಮತದಿಂದ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಆಭಾರಿಯಾಗಿದ್ದೇನೆ. ನಿರ್ದೇಶಕರ ಸಹಕಾರ ಮತ್ತು ವಿಶ್ವಾಸದೊಂದಿಗೆ ಬ್ಯಾಂಕ್ ಅಭಿವೃದ್ಧಿ ಪಡಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು.
Also read: ನಾಳೆ ಕೇಂದ್ರ ಬಜೆಟ್ | ಆರ್ಥಿಕ ಸಮೀಕ್ಷೆ ವರದಿ ಮಂಡಿಸಿದ ವಿತ್ತ ಸಚಿವೆ
ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ರೈತ ಕಲ್ಯಾಣಕ್ಕಾಗಿ ಬಿಡುಗಡೆಯಾಗುವ ಅನುದಾನವನ್ನು ಹೆಚ್ಚಿನ ರೀತಿಯಲ್ಲಿ ಪಡೆದುಕೊಳ್ಳಲು ಅದ್ಯತೆ ನೀಡಲಾಗುವುದು. ರೈತರ ಜಮೀನು ಅಭಿವೃದ್ಧಿಗಾಗಿ ಹೆಚ್ಚಿನ ಸಾಲ ಸೌಲಭ್ಯ ನೀಡುವಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸುವ ಮೂಲಕ ಎಲ್ಲರ ಸಹಕಾರದೊಂದಿಗೆ ರೈತರ ಅಭಿವೃದ್ಧಿಗೆ ಶ್ರಮಿಸುತ್ತೇನೆ. ಶೀಘ್ರದಲ್ಲಿಯೇ ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಭವನ ನಿರ್ಮಾಣಕ್ಕೆ ಸರ್ಕಾರದ ಅನುದಾನ ಕೋರುವುದಾಗಿ ತಿಳಿಸಿದರು.
ಚುನಾವಣಾ ಪ್ರಕ್ರಿಯೆ ನಿಷ್ಪಕ್ಷಪಾತವಾಗಿ ನಡೆಯಲು ಚುನಾವಣಾಧಿಕಾರಿ ಪ್ರಕಾಶ್ ಟಿ. ವಿ. ಮತ್ತು ಅವರ ತಂಡದ ಸಹಾಯಕರು, ಮಹತ್ವದ ಪಾತ್ರ ವಹಿಸಿದರು. ವ್ಯವಸ್ಥಾಪಕ ಸತೀಶ್ ಭಂಡಾರಿ, ಮತ್ತು ಸಿಬ್ಬಂದಿ ಸಹಕಾರದಿಂದ ಪ್ರಕ್ರಿಯೆ ಸುಗಮವಾಗಿ ಮುಗಿಯಿತು.
ಈ ಸಂದರ್ಭದಲ್ಲಿ ನಿರ್ದೇಶಕರುಗಳಾದ ವಿಜೇಂದ್ರಕುಮಾರ ಸಿ. ವೀರೇಂದ್ರಕುಮಾರ, ಶ್ರೀಮತಿ ಶಾರದ, ಶ್ರೀಮತಿ ಸೀತಮ್ಮ, ಬಸವಣ್ಯಪ್ಪ ಸಿ.ಪಿ.ರಾಜಶೇಖರ, ಜಿ.ಮಿಥುನ್ ಜೆ.ಪ್ರದೀಪಕುಮಾರ ಬಿ.ಸಿ. ಗುಡ್ಡಪ್ಪ, ದಾನಪ್ಪ ಹೆಚ್.ಪರಸಪ್ಪ, ಇದ್ದರು.
ವರದಿ: ಮಧುರಾಮ್, ಸೊರಬ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post