ಕಲ್ಪ ಮೀಡಿಯಾ ಹೌಸ್ | ಸೊರಬ |
ಹಿಂದೂಗಳ ಧಾರ್ಮಿಕ ಶ್ರದ್ಧಾಕೇಂದ್ರ ಧರ್ಮಸ್ಥಳ ಕ್ಷೇತ್ರದ #Shri Kshethra Dharmasthala ಬಗ್ಗೆ ಅಪಪ್ರಚಾರ ಮಾಡುವುದನ್ನು ಖಂಡಿಸಿ ಬಿಜೆಪಿ ತಾಲೂಕು ಘಟಕ ಹಾಗೂ ಪುಣ್ಯಕ್ಷೇತ್ರ ಸಂರಕ್ಷಣಾ ಸಮಿತಿ ವತಿಯಿಂದ ಪಟ್ಟಣದಲ್ಲಿ ಶನಿವಾರ ಬೃಹತ್ ಪ್ರತಿಭಟನೆ ನಡೆಸಿ, ಖಾಸಗಿ ಬಸ್ ನಿಲ್ದಾಣದ ಆವರಣದಲ್ಲಿ ಬಹಿರಂಗ ಸಭೆ ನಡೆಸಲಾಯಿತು.
ವಿಧಾನ ಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ #Dr. Dhananjaya Sarji ಮಾತನಾಡಿ, ಶತಮಾನಗಳಿಂದಲೂ ಹಿಂದೂ ಧಾರ್ಮಿಕ ಕೇಂದ್ರಗಳ ಮೇಲೆ ದಾಳಿಗಳು ನಡೆಯುತ್ತಲೇ ಇದೆ. ಸುಮಾರು 30 ಸಾವಿರ ದೇಗುಲಗಳನ್ನು ನಾಶ ಮಾಡಲಾಗಿದೆ. ಕರಾವಳಿ ಭಾಗದಲ್ಲಿ ಹಿಂದುತ್ವ ಗಟ್ಟಿಯಾಗಿದ್ದು, ಇದನ್ನು ಒಡೆಯುವ ಹುನ್ನಾರದಿಂದ ಷಡ್ಯಂತ್ರಗಳನ್ನು ರೂಪಿಸಲಾಗುತ್ತಿದೆ. ಧರ್ಮಸ್ಥಳ ಕ್ಷೇತ್ರವು ಎಲ್ಲಾ ಜಾತಿ ಜನಾಂಗದವರಿಗೆ ಅನ್ನದಾನ, ವಿದ್ಯಾದಾನ, ಆರೋಗ್ಯ ದಾನದಂತ ವಿವಿಧ ಕಾರ್ಯಕ್ರಮಗಳನ್ನು ನೀಡುತ್ತಾ ಸಮಾಜಮುಖಿಯಾಗಿದೆ. ಇದನ್ನು ಸಹಿಸದವರು ಶ್ರೀ ಕ್ಷೇತ್ರಕ್ಕೆ ಕಳಂಕ ತರುವ ವಿಫಲ ಯತ್ನ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು.

ಪುಣ್ಯಕ್ಷೇತ್ರ ಸಂರಕ್ಷಣಾ ಸಮಿತಿ ತಾಲೂಕು ಸಂಚಾಲಕ ಹಾಗೂ ಬಿಜೆಪಿ ಮುಖಂಡ ಡಾ. ಎಚ್.ಇ. ಜ್ಞಾನೇಶ್ ಮಾತನಾಡಿ, ಅನೇಕ ದಾಳಿಗಳ ನಡುವೆಯೂ ಸನಾತನ ಹಿಂದೂ ಧರ್ಮವನ್ನು ನಾಶ ಮಾಡಲು ಯಾರಿಂದಲೂ ಸಾಧ್ಯವಾಗಲಿಲ್ಲ. ಆದರೆ, ಕುತಂತ್ರಿಗಳು ಧಾರ್ಮಿಕ ಶ್ರದ್ಧಾಕೇಂದ್ರಗಳನ್ನು ಗುರಿಯಾಗಿಸಿಕೊಂಡು ಹಿಂದೂಗಳಲ್ಲಿ ಭಿನ್ನತೆ ಉಂಟು ಮಾಡುವ ಕೆಲಸದಲ್ಲಿ ತೊಡಗಿದ್ದಾರೆ. ಶ್ರೀ ಮಂಜುನಾಥನ ಪಾವಿತ್ರ್ಯಕ್ಕೆ ಧಕ್ಕೆ ತರುವ ದುಷ್ಕೃತ್ಯ ಎಸಗಿದ್ದಾರೆ. ದೈವ ಶಕ್ತಿಯ ವಿರುದ್ಧ ಹೊರಟವರಿಗೆ ತಕ್ಕ ಶಾಸ್ತಿಯಾಗುತ್ತದೆ. ಘಟನೆಯಿಂದ ಹಾಗೂ ನಡೆಯುತ್ತಿರುವ ಉತ್ಕನನದಿಂದಾಗಿ ಶ್ರೀ ಕ್ಷೇತ್ರದ ಬಗೆಗಿನ ಗೌರವ ಮತ್ತಷ್ಟು ಹೆಚ್ಚಾಗಿದೆ. ಘಜನಿ ಸಂತತಿಯವರಿಗೆ ವಿಚಲಿತರಾಗುವ ಅವಶ್ಯಕತೆ ಇಲ್ಲ. ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಕೆಲಸಕ್ಕೆ ಕೈ ಹಾಕುವ ಕುತಂತ್ರಿಗಳ ಷಡ್ಯಂತ್ರಗಳಿಗೆ ಒಳಗಾಗದೇ ಹಿಂದೂ ಸಮಾಜ ಒಗ್ಗಟ್ಟಾಗಿ ಎಲ್ಲವನ್ನು ಎದುರಿಸಬೇಕು ಎಂದರು.

ಪ್ರತಿಭಟನೆಯಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹರಿಕೃಷ್ಣ, ತಾಲೂಕು ಅಧ್ಯಕ್ಷ ಪ್ರಕಾಶ್ ಅಗಸನಹಳ್ಳಿ, ಪ್ರಧಾನ ಕಾರ್ಯದರ್ಶಿಗಳಾದ ಸುರೇಶ್ ಉದ್ರಿ, ಜಾನಕಪ್ಪ ಒಡೆಯರ್ ಯಲಸಿ, ಮಹಿಳಾ ಘಟಕದ ಅಧ್ಯಕ್ಷೆ ಹೊಳೆಯಮ್ಮ ಚನ್ನಪಟ್ಟಣ, ಪ್ರಮುಖರಾದ ಪಾಣಿ ರಾಜಪ್ಪ, ಪ್ರಕಾಶ್ ತಲಕಾಲಕೊಪ್ಪ, ದೇವೇಂದ್ರಪ್ಪ ಚನ್ನಾಪುರ, ಈಶ್ವರ ಚನ್ನಪಟ್ಟಣ, ಗುರುಪ್ರಸನ್ನಗೌಡ ಬಾಸೂರು, ವಿಜೇಂದ್ರಗೌಡ ತಲಗುಂದ, ರಾಜು ಮಾವಿನಬಳ್ಳಿಕೊಪ್ಪ, ಗೀತಾ ಮಲ್ಲಿಕಾರ್ಜುನ್, ಸುಧಾ ಶಿವಪ್ರಸಾದ್, ಉಮೇಶ ಉಡುಗಣಿ, ಎಂ.ಕೆ. ಯೋಗೇಶ್, ವೈ.ಜಿ. ಗುರುಮೂರ್ತಿ, ವಿನಯ ಶೇರ್ವಿ, ಆಶೀಕ್ ನಾಗಪ್ಪ, ಸಂಜೀವ ಆಚಾರ್, ಶ್ರೀಧರ್ ಭಂಡಾರಿ, ಮೋಹನ್ ಹಿರೇಶಕುನ ಸೇರಿದಂತೆ ಇತರರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post