ಕಲ್ಪ ಮೀಡಿಯಾ ಹೌಸ್
ಸೊರಬ: ತಾಲೂಕಿನ ಚಂದ್ರಗುತ್ತಿ ಗ್ರಾಮದಲ್ಲಿ ಹೊಟ್ಟೆನೋವು ತಾಳಲಾರದೆ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶುಕ್ರವಾರ ನಡೆದಿದೆ.
ಗ್ರಾಮದ ನಾಗರಾಜ ಮರಡಿ ಅವರ ಪುತ್ರಿ ಸುಚಿತ್ರಾ (17) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ದ್ವಿತೀಯ ವರ್ಷದ ಪಿಯುಸಿ ವ್ಯಾಸಾಂಗ ಮಾಡುತ್ತಿದ್ದಳು. ಕೆಲ ದಿನಗಳಿಂದ ಹೊಟ್ಟೆನೋವು ಕಾಣಿಸಿಕೊಳ್ಳುತ್ತಿದ್ದು, ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಳು. ಕುಟುಂಬಸ್ಥರು ಕೃಷಿ ಚಟುವಟಿಕೆಗೆ ಹೊಲಕ್ಕೆ ಹೋದ ಸಂದರ್ಭದಲ್ಲಿ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post