ಕಲ್ಪ ಮೀಡಿಯಾ ಹೌಸ್ | ಸೊರಬ |
ತೋಟಗಾರಿಕೆ ಇಲಾಖೆಯ ವತಿಯಿಂದ 2022- 23ನೇ ಸಾಲಿನ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ ಅಡಿ ಹನಿ ನೀರಾವರಿ ಅಳವಡಿಸಲು ಸಹಾಯಧನ ನೀಡುವ ಸಲುವಾಗಿ ನೋಂದಣಿ ಅರ್ಜಿಗಳನ್ನು ವಿತರಿಸುವ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ದಾಖಲೆ ಸಹಿತ ಅರ್ಜಿ ಸಲ್ಲಿಸಲು ಜ.25 ಕಡೆಯ ದಿನಾಂಕವಾಗಿರುತ್ತದೆ ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೆಶಕ ಮಂಜುನಾಥ್ ತಿಳಿಸಿದ್ದಾರೆ.
ಆಸಕ್ತ ರೈತರು ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳನ್ನು ಹಾಗೂ ಸೊರಬ ತೋಟಗಾರಿಕೆ ಇಲಾಖಾ ಕಛೇರಿಯನ್ನು ಸಂಪರ್ಕಿಸಿ ಅರ್ಜಿ ಪಡೆಯುವಂತೆ ಮತ್ತು ಕಾಲಕಾಲಕ್ಕೆ ಪರಿಷ್ಕರಿಸುವ ಮಾರ್ಗಸೂಚಿ, ಅನುದಾನ ಲಭ್ಯತೆ, ಜೇಷ್ಠತೆಯ ಅನುಸಾರ ಸಹಾಯಧನ ಒದಗಿಸಲಾಗುವುದೆಂದು ಮಾಹಿತಿ ನೀಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post