ಕಲ್ಪ ಮೀಡಿಯಾ ಹೌಸ್ | ಸೊರಬ |
ಮಾದಕ ಪದಾರ್ಥ ಗಾಂಜಾವನ್ನು ಮಾರಾಟ ಮಾಡುವ ಉದ್ದೇಶದಿಂದ ತಮ್ಮ ಬಳಿ ಇಟ್ಟುಕೊಂಡಿದ್ದ ಮೂವರು ಆರೋಪಿತರನ್ನು ಪೊಲೀಸರು ಬಂಧಿಸಿರುವ ಘಟನೆ ತಾಲೂಕಿನ ಕಪ್ಪಗಳಲೆ ಗ್ರಾಮದ ಬಸ್ ತಂಗುದಾಣದ ಬಳಿ ಮಂಗಳವಾರ ನಡೆದಿದೆ.
ಶಿಗ್ಗಾ ಗ್ರಾಮದ ಶರತ್ ಉಮಾಪತಿ, ಜಡೆ ಗ್ರಾಮದ ಸಚಿನ್ ಶ್ರೀಶೈಲಗೌಡ, ಜಡೆಕಾಲ್ಗೇರಿ ಗ್ರಾಮದ ದರ್ಶನ್ ನಾಗರಾಜ ಬಂಧಿತ ಆರೋಪಿಗಳು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪಿಎಸ್ಐ ಟಿ.ಬಿ. ಪ್ರಶಾಂತ್ ಕುಮಾರ್ ನೇತೃತ್ವದ ತಂಡ ಮೂವರು ಆರೋಪಿತರನ್ನು ಬಂಧಿಸಿ, ಕೃತ್ಯಕ್ಕೆ ಬಳಸಿದ ಒಂದು ಬೈಕ್, 1,500 ರೂ., ನಗದು ಹಾಗೂ 320 ಗ್ರಾಂ ಒಣ ಗಾಂಜಾವನ್ನು ವಶಕ್ಕೆ ಪಡೆದು, ಆರೋಪಿತರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ದಾಳಿಯಲ್ಲಿ ಹೆಡ್ ಕಾನ್ಸ್‌ಟೇಬಲ್ ಗಳಾದ ಪರಮೇಶ್ವರ ನಾಯ್ಕ್, ಎಂ.ಕೆ. ನಾಗರಾಜ್, ಕಾನ್ಸ್‌ಟೇಬಲ್ ಗಳಾದ ಸಲ್ಮಾನ್ ಖಾನ್ ಹಾಜಿ, ಸುಧಾಕರ ಪಾಲ್ಗೊಂಡಿದ್ದರು.
ವರದಿ: ಮಧುರಾಮ್, ಸೊರಬ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post