ಕಲ್ಪ ಮೀಡಿಯಾ ಹೌಸ್ | ಸೊರಬ |
ಮಲೆನಾಡಿನ ಪುರಾಣ ಹಾಗೂ ಐತಿಹಾಸಿಕ ಪ್ರಸಿದ್ಧ ಶ್ರೀ ಶ್ರೀ ರೇಣುಕಾಂಬ ದೇವಸ್ಥಾನದಲ್ಲಿ #Shri Renukamba Temple ಶುಕ್ರವಾರ ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ ಕೈಂಕರ್ಯಗಳು ಜರುಗಿದವು.
ಧಾರ್ಮಿಕ ದತ್ತಿ ಇಲಾಖೆ ಆದೇಶದಂತೆ ದೇಗುಲಕ್ಕೆ ಆಗಮಿಸಿದ ಮಹಿಳೆಯರಿಗೆ ವರಮಹಾಲಕ್ಷ್ಮಿ ವ್ರತ ಆಚರಣೆ ಅಂಗವಾಗಿ ಪ್ರಸಾದದ ರೂಪದಲ್ಲಿ ಅರಿಷಿಣ, ಕುಂಕುಮ, ಹಸಿರು ಬಳೆಗಳನ್ನು ನೀಡಿ ಉಡಿ ತುಂಬಲಾಯಿತು. ಜೊತೆಗೆ ಭಕ್ತರಿಗೆ ಪ್ರಸಾದ ವಿತರಣೆ ಮಾಡಲಾಯಿತು.
ದೇವಸ್ಥಾನದ ಕಾರ್ಯನಿರ್ವಾಹಣಾಧಿಕಾರಿ ಪ್ರಮೀಳಾ ಕುಮಾರಿ, ಗ್ರಾಪಂ ಅಧ್ಯಕ್ಷೆ ಸರಿತಾ, ಉಪಾಧ್ಯಕ್ಷ ಎಂ.ಬಿ. ರೇಣುಕಾಪ್ರಸಾದ್ ಚಾಲನೆ ನೀಡಿದರು.
ಶ್ರಾವಣ ಮಾಸದ ಶುಕ್ರವಾರ ಹಿನ್ನೆಲೆ ಶ್ರೀ ರೇಣುಕಾಂಬ ದೇವಿ ದರ್ಶನಕ್ಕೆ ತಾಲೂಕು ಸೇರಿದಂತೆ ಹಿರೇಕೆರೂರು, ಬ್ಯಾಡಿಗಿ, ರಾಣೆಬೆನ್ನೂರು, ದಾವಣಗೆರೆ, ಹರಿಹರ, ಹಾನಗಲ್, ಬೆಳಗಾವಿ, ಚಿತ್ರದುರ್ಗ, ಶಿವಮೊಗ್ಗ, ಚಿಕ್ಕಮಂಗಳೂರು, ಸೇರಿದಂತೆ ವಿವಿಧ ಭಾಗಗಳಿಂದ ಸಾವಿರಾರು ಭಕ್ತರು ಆಗಮಿಸಿದ್ದರು.
ದೇವಸ್ಥಾನದ ಪರಿವಾರ ದೇವರುಗಳಾದ ಕಾಲಭೈರವ, ನಾಗದೇವತೆ, ಮಾತಂಗಿ, ಪರಶುರಾಮ, ತ್ರಿಶೂಲದ ಬೈರಪ್ಪ ದೇವರುಗಳಿಗೆ ವಿಶೇಷ ಪೂಜೆ ಪುನಸ್ಕಾರಗಳು ನೆರವೇರಿದವು. ಭಕ್ತರು ದೇವಸ್ಥಾನದ ಆವರಣದಲ್ಲಿ ಧಾರ್ಮಿಕ ಕಾರ್ಯಕ್ರಮಗಳನ್ನು ಆಚರಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post